ಅಸ್ಕಿ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿದೆ. == ಭೌಗೋಳಿಕ == ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦" ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೇಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿ ವರೆಗೆ(ಎಪ್ರಿಲ್‍ನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸ್‍ವರೆಗೆ (ಡಿಸೆಂಬರ್‍‍ನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - ೩೫°-೪೨° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - ೧೮°-೨೮° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಷ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ್), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ,, ಸೇಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ಧರ್ಮಗಳು == ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆಗಳು == ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ. == ದೇವಾಲಯಗಳು == ಗ್ರಾಮದೇವತೆಯಾದಂತಹ ಶ್ರೀ ದ್ಯಾಮಲಾಂಬ ದೇವಾಲಯ ಪ್ರಮುಖ ದೇವಾಲಯವಾಗಿದ್ದು ಹಿಂದೂಗಳಷ್ಟೇ ಅಲ್ಲದೆ ಎಲ್ಲಾ ಮತದವರು ಕೂಡಾ ದೇವಿಯ ಆರಾಧಕರಾಗಿದ್ದಾರೆ. ಇನ್ನೊಂದು ಪ್ರಮುಖ ದೇವಾಲಯವೆಂದರೆ ಅದು ಶ್ರೀ ಈಶ್ವರಲಿಂಗ ದೇವಾಲಯ. ಇದು ಪ್ರಾಚೀನ ಕಾಲದ ದೇವಾಲಯವಾಗಿದ್ದು ಚಾಲುಕ್ಯರ ನಿರ್ಮಾಣವಾಗಿರಬಹುದು ಎಂದು ಊಹಿಸಬಹುದು. ಗುಹೆಯಂತಿರುವ ದೇವಾಲಯವು ಐತಿಹಾಸಿಕ ಹಿನ್ನೆಲೆ ಹೊಂದಿದೆ. ಶ್ರೀ ದುರ್ಗಾದೇವಿ ದೇವಾಲಯ , ಶ್ರೀ ಸಿದ್ದರಾಯ ದೇವಸ್ಥಾನ, ಶ್ರೀ ಮಹಾದೇವ-ಗೌರಿ ದೇವಾಲಯವಿದ್ದು ವರ್ಷಕ್ಕೊಮ್ಮೆ ಸಂಭ್ರಮದ ಜಾತ್ರೆ ನಡೆಯುತ್ತದೆ. ಅಲ್ಲದೆ ಶ್ರೀ ಹಣಮಂತ ದೇವಾಲಯ, ರಬಕಮ್ಮದೇವಿ ದೇವಾಲಯ, ಬೀರಪ್ಪ ಮುತ್ತ್ಯಾ ದೇವಾಲಯದ ಜೊತೆಗೆ ಸಾಕಷ್ಟು ದೇವಾಲಯಗಳನ್ನು ನಿರ್ಮಿಸಿದ್ದಾರೆ. == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ತೊಗರಿ , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಹತ್ತಿ ಬೆಳೆಗಳನ್ನು ಬೆಳೆಯುತ್ತಾರೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ. == ಬೆಳೆಗಳು == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಹಬ್ಬಗಳು == ಪ್ರತಿವರ್ಷ ಶ್ರೀ ಗೌರಿ ಹುಣ್ಣಿಮೆ, ಗೌರಿ ಜಾತ್ರೆ, ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ , ಸರಕಾರಿ ಪ್ರೌಢಶಾಲೆ ಅಲ್ಲದೆ ಖಾಸಗಿ ಶಾಲೆಗಳು ಹಾಗೂ ಐಟಿಐ ಕಾಲೇಜು ಇದೆ == ಸಾಕ್ಷರತೆ == ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ಗ್ರಾಮವು ವಿಜಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.