ಎ ಟಿ ರಘು ಕನ್ನಡ ಚಲನಚಿತ್ರ ನಿರ್ದೇಶಕರು. ಇವರು ನಿರ್ಮಾಪಕರೂ ನಟರೂ ಹೌದು. ೧೯೮೦ರಿಂದ ೧೯೯೮ರವರೆಗೆ ಸುಮಾರು ಇಪ್ಪತ್ತೈದಕ್ಕಿಂತಲೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇವರು ನಿರ್ದೇಶಿಸಿದ ಚಿತ್ರಗಳಲ್ಲಿ ಹೆಚ್ಚಿನವುಗಳ ನಾಯಕ ನಟ ಅಂಬರೀಷ್ ಆಗಿದ್ದಾರೆ. ಬಹುತೇಕ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಯಶಸ್ಸನ್ನು ಕಂಡಿವೆ. ಆ ದೃಷ್ಟಿಯಲ್ಲಿ ಇವರೊಬ್ಬ ಜನಪ್ರಿಯ ಹಾಗೂ ಜಯಶೀಲ ನಿರ್ದೇಶಕರು. == ಜನನ ಮತ್ತು ಬಾಲ್ಯ == ಇವರು ಕೊಡಗಿನಲ್ಲಿ ಜನಿಸಿದರು. ಇವರು ಕೊಡವ ಜನಾಂಗದವರಾಗಿದ್ದು, ಆಪಾಡಂಡ ಮನೆತನಕ್ಕೆ ಸೇರಿದವರು. == ನಿರ್ದೇಶಿಸಿದ ಚಿತ್ರಗಳು == ಟೆಂಪ್ಲೇಟು:ಕನ್ನಡ ಚಿತ್ರ ನಿರ್ಮಾಪಕರು