ಎಂ.ಬಿ.ಪಾಟೀಲ(ಮಲ್ಲನಗೌಡ ಬಸನಗೌಡ ಪಾಟೀಲ)ರು ಬಬಲೇಶ್ವರ ವಿಧಾನ ಸಭಾ ಕ್ಷೇತ್ರದ ಶಾಸಕರು. ಇವರು ಮಾಜಿ ಸಂಸದರು, ಬಿ.ಎಲ್.ಡಿ.ಈ.ಸಂಸ್ಥೆಯ ಅಧ್ಯಕ್ಷರು, ಉದ್ಯಮಿಗಳು ಹಾಗೂ ರಾಜಕೀಯ ಧುರೀಣರು. == ಜನನ == ಎಂ.ಬಿ.ಪಾಟೀಲರು 7ನೇ ಅಕ್ಟೋಬರ 1964ರಂದು ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನ ತೊರವಿ ಗ್ರಾಮದಲ್ಲಿ ಜನಿಸಿದರು. == ಶಿಕ್ಷಣ == ಬೆಂಗಳೂರಿನ ಪೂರ್ಣಪ್ರಜ್ಞ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ವಿಜಯಪುರದ ದರಬಾರ ಪ್ರೌಢ ಶಾಲೆಯಲ್ಲಿ ಪಡೆದಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ತಾಂತ್ರಿಕ ಹಾಗೂ ಅಭಿಯಾಂತ್ರಿಕ ಮಹಾವಿದ್ಯಾಲಯ, ವಿಜಯಪುರದಲ್ಲಿ ಪಡೆದಿದ್ದಾರೆ. == ರಾಜಕೀಯ == 1991ರಲ್ಲಿ ಬಿ.ಎಂ.ಪಾಟೀಲರು ನಿಧನರಾದಾಗ, ತೆರವಾದ ಸ್ಥಾನಕ್ಕೆ 27ನೇ ವಯಸ್ಸಿನಲ್ಲಿ ತಿಕೋಟಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಂ.ಬಿ.ಪಾಟೀಲರು ಸ್ಪರ್ಧಿಸಿ ಪ್ರಥಮ ಬಾರಿಗೆ ಬಾರಿಗೆ ವಿಧಾನಸಭೆ ಪ್ರವೇಶ. 1994 ಮತ್ತು 1999ರಲ್ಲಿ ನಡೆದ ತಿಕೋಟಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಶಿವಾನಂದ ಪಾಟೀಲರ ವಿರುದ್ದ ಸೋಲು. ವಿಜಯಪುರ ಲೋಕಸಭಾ ಕ್ಷೇತ್ರದಿಂದ 1998ರಲ್ಲಿ ಕಾಂಗ್ರೆಸ್‌ನಿಂದ ಲೋಕಸಭೆ ಆಯ್ಕೆಯಾಗಿದ್ದರು. 2004ರಲ್ಲಿ ತಿಕೋಟಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡನೇ ಬಾರಿಗೆ ವಿಧಾನಸಭೆ ಪ್ರವೇಶ. 2008, 2013ಮತ್ತು 2018ರಲ್ಲಿ ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನ ಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2013ರಲ್ಲಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದರು. 2018ರಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವರಾಗಿದ್ದರು. ಎಐಸಿಸಿ, ಕೆಪಿಸಿಸಿ ಸಮನ್ವಯ ಸಮಿತಿ ಸದಸ್ಯರಾಗಿದ್ದರು. 1990ರಿಂದ 2005ರ ವರೆಗೆ ಬಿ.ಎಲ್‌.ಡಿ.ಇ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹುದ್ದೆ, 2005ರಿಂದ ಬಿ.ಎಲ್‌.ಡಿ.ಇ. ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. == ಸಚಿವರು == 2013ರಲ್ಲಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದರು. 2018ರಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವರಾಗಿದ್ದರು. == ವೈಯಕ್ತಿಕ ಜೀವನ == ಶ್ರೀಯುತರು ಆಶಾ ಪಾಟೀಲಯವರನ್ನು ಮದುವೆಯಾಗಿದ್ದು, ಬಸನಗೌಡ ಹಾಗೂ ಧ್ರುವ ಎಂಬ ಇಬ್ಬರು ಮಕ್ಕಳಿದ್ದು ವಿಜಯಪುರದಲ್ಲಿ ವಾಸವಾಗಿದ್ದಾರೆ. == ಉಲ್ಲೇಖಗಳು ==