ಎಂ.ಸಿ.ಮನಗೂಳಿಯವರು ಪ್ರಸ್ತುತ ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕರು. ಇವರು ಮಾಜಿ ಸಚಿವರು, ಶಿಕ್ಷಣ ಪ್ರೇಮಿಗಳು ಹಾಗೂ ರಾಜಕೀಯ ಧುರೀಣರು. == ಜನನ == ಮನಗೂಳಿಯವರು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜನಿಸಿದರು. == ಶಿಕ್ಷಣ == ಮನಗೂಳಿಯವರು ೧೦ನೇ ತರಗತಿಯವರೆಗೆ ಶಿಕ್ಷಣವನ್ನು ಪೂರೈಸಿದ್ದಾರೆ. == ರಾಜಕೀಯ == ಎಂ.ಸಿ.ಮನಗೂಳಿಯವರು ಸಿಂದಗಿ ವಿಧಾನಸಭಾ ಕ್ಷೇತ್ರದಿಂದ 7 ಸಲ ಸ್ಪರ್ಧಿಸಿ 2 ಬಾರಿ ಆಯ್ಕೆಯಾಗಿದ್ದು ವಿಶೇಷವಾಗಿ 5 ಬಾರಿ ಎರಡನೇಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಮನಗೂಳಿಯವರು 1994ರಲ್ಲಿ ಹೆಚ್.ಡಿ.ದೇವೇಗೌಡರ ಸಂಪುಟದಲ್ಲಿ ಸಚಿವರಾದರು. ೨೦೧೮ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮೈತ್ರಿ ಸರ್ಕಾರದ ಸಂಪುಟದಲ್ಲಿ ತೋಟಗಾರಿಕೆ ಸಚಿವರಾದರು. ೨೦೧೮ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸರ್ಕಾರದಲ್ಲಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರಾದರು. == ವೈಯಕ್ತಿಕ ಜೀವನ == ಶ್ರೀಯುತರಿಗೆ ಮೂವರು ಮಕ್ಕಳಿದ್ದು ಸಿಂದಗಿ ನಗರದಲ್ಲಿ ವಾಸವಾಗಿದ್ದಾರೆ. == ಉಲ್ಲೇಖಗಳು ==