ಕಲಬೀಳಗಿ ಒಂದು ಗ್ರಾಮ.ಇದು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆ ಯ ಜಮಖಂಡಿ ತಾಲ್ಲೂಕಿ ನಲ್ಲಿದೆ. ಕಲಬೀಳಗಿ ಗ್ರಾಮವು ಜಿಲ್ಲಾ ಕೇಂದ್ರ ಬಾಗಲಕೋಟಯಿಂದ ಸುಮಾರು ೧೦೦ ಕಿ. ಮಿ. ಇದ್ದು ಸಾವಳಗಿ ಹೋಬಳಿ ವ್ಯಾಪ್ತಿಯಲ್ಲಿ ಬರುತ್ತದೆ. == ದೇವಾಲಯಗಳು == ಶ್ರೀ ಪಾಂಡುರಂಗ ದೇವಾಲಯ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ. == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ಸಂಘಟನೆಗಳು == ಛತ್ರಪತಿ ಶಿವಾಜಿ ಯುವಕ ಮಂಡಳಿ, ಶ್ರೀ ಬಸವೇಶ್ವರ ಯುವಕ ಮಂಡಳಿ ಹಾಗೂ ಕನಕ ಸೇನೆ ಇದೆ. == ನೀರಾವರಿ == ಗ್ರಾಮದ ಪ್ರತಿಶತ ೪೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಹಬ್ಬಗಳು == ಪ್ರತಿವರ್ಷ ಶ್ರೀ ಹನುಮಾನ ಉತ್ಸವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಶಾಲೆಯಲ್ಲಿ ೧ನೇ ತರಗತಿಯಿಂದ ೭ನೇ ತರಗತಿವರೆಗೆ ೨೦೦ರಕ್ಕೂ ಹೆಚ್ಚು ವಿದ್ಯಾರ್ಥಿಗಳ್ಳಿದ್ದಾರೆ. ಹಾಗೂ ಬಂಜಾರಾ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯಿದೆ. == ವಿದ್ಯುತ್ ಪರಿವರ್ತನಾ ಕೇಂದ್ರ == ಗ್ರಾಮದಲ್ಲಿ ೩೩ ಕೆ.ವಿ. ವಿದ್ಯುತ್ ಪರಿವರ್ತನಾ ಕೇಂದ್ರವಿದೆ.