== ಡಿ.ವಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನಿಂದ ಪ್ರಶಸ್ತಿ == ದಿ.೨೯-೧೧-೨೦೧೪ ರಂದು ಚಿತ್ರಕಲಾ ಶಿಲ್ಪಿ ಡಿ.ವಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ವತಿಯಿಂದ ಜೀವಮಾನ ಸಾಧನೆಗಾಗಿ ನೀಡುವ ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿಯನ್ನು ಹಿರಿಯ ಕಲಾವಿದ ಕೆ.ಟಿ.ಶಿವಪ್ರಸಾದ್ ಅವರಿಗೆ ಹಾಗೂ ಕುಂಚ ಕಲಾಶ್ರೀ ಪ್ರಶಸ್ತಿಯನ್ನು ಚಿ.ಸು.ಕೃಷ್ಣ ಸೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು. ಧಾರವಾಡ ನಗರದ ಸೃಜನಾ ರಂಗ ಮಂದಿರದಲ್ಲಿ ಶನಿವಾರ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಇವರೊಂದಿಗೆ ಯುವ ಕುಂಚ ಕಲಾಶ್ರೀ ಪ್ರಶಸ್ತಿಯನ್ನು ಒಡಿಶಾದ ಮಾನಶ ರಂಜನ್‌ ಜೇನಾ ಹಾಗೂ ಚೆನ್ನೈನ ಇಳಯರಾಜ ಅವರಿಗೆ ನೀಡಿ ಗೌರವಿಸಲಾಯಿತು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ ₨ 1 ಲಕ್ಷ, ಕುಂಚ ಕಲಾಶ್ರೀ ಪ್ರಶಸ್ತಿ ₨ 50 ಸಾವಿರ ಹಾಗೂ ಯುವ ಪ್ರಶಸ್ತಿ ಪಡೆದ ಕಲಾವಿದರಿಗೆ ತಲಾ ₨ 25 ಸಾವಿರ ನಗದು ಹಾಗೂ ಫಲಕವನ್ನು ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿವಪ್ರಸಾದ್‌, ತಮ್ಮ ಕಲಾ ಜೀವನದ ಪೋಷಕರಾದ ಘಾಣೇಕರ್‌ ಹಾಗೂ ನಂತರದಲ್ಲಿ ಪ್ರಭಾವ ಬೀರಿದ ಪ್ರೊ.ನಂಜುಂಡಸ್ವಾಮಿ, ಪೂರ್ಣಚಂದ್ರ ತೇಜಸ್ವಿ ಅವರನ್ನು ನೆನೆದರು. == ನೋಡಿ == ಜಮ್ನಾಲಾಲ್‌ ಬಜಾಜ್‌ ಪ್ರಶಸ್ತಿ ವೀಣೆ ರಾಜಾರಾವ್ ಪ್ರಶಸ್ತಿ ಕರ್ನಾಟಕ ಲಲಿತಕಲಾ ಅಕಾಡೆಮಿಯ ಪ್ರಶಸ್ತಿಗಳು ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ == ಆಧಾರ == ಪ್ರಜಾವಾಣಿ -೩೦-೧೧-೨೦೧೪