== ಕಾಲಕಣ್ಣಿ ಕಾಮವ್ವ == ಈಕೆಯ ವೈಯಕ್ತಿಕ ಪೂರ್ವಪರಗಳೊಂದೂ ತಿಳಿದು ಬರುವುದಿಲ್ಲ. "ಕಾಲಕಣ್ಣಿ" ಎಂಬುದು ಸ್ಥಳನಾಮ ವಿಶೇಷಣವೂ, ಕಾಯಕ ಸೂಚಕವೂ ಸ್ಪಷ್ಟವಾಗಿಲ್ಲ. ಆದರೆ ಈಕೆಯ ಕೆಲವು ವಚನಗಳಲ್ಲಿ ಕರಣೇಂದ್ರಿಯಗಳನ್ನು ಲಿಂಗದಲ್ಲಿ ಕಟ್ಟುವ ನಿಷ್ಠೆ, ಗುರು-ಲಿಂಗ-ಜಂಗಮರ ಕಾಲ ಕಟ್ಟುವ ಶ್ರದ್ಧೆ, ಹೆಣ್ಣು-ಗಂಡೆಂಬ ಭೇಧವಿಲ್ಲದೆ ತನು ಮನಗಳ ಪಾವಿತ್ರತೆಯನ್ನು ಎತ್ತಿ ಹಿಡಿಯುವ ಪ್ರಾಮಾಣಿಕತೆ, ಡಾಂಬಿಕ ಭಕ್ತರ ಬಗೆಗಿರುವ ರೊಚ್ಚು ದಂಗು ಬಡಿಸುತ್ತದೆ. ಈಕೆಯ ವಚನಗಳ ಅಂಕಿತ "ನಿರ್ಭೀತಿ ನಿಜಲಿಂಗ". ಈಕೆಯೊಬ್ಬಳು ಗೌಪ್ಯ ವಚನಕಾರ್ತಿಯಾಗಿದ್ದಳು ಎಂದು ನಂಬಲಾಗಿದೆ.