ಕುಡಚಿ ಗ್ರಾಮವು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನಲ್ಲಿದೆ. == ದೇವಾಲಯಗಳು == ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಮತ್ತು ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ. == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಗ್ರಾಮದ ಪ್ರತಿಶತ ೪೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಹಬ್ಬಗಳು == ಪ್ರತಿವರ್ಷ ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಸರಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆ == ಭೌಗೋಳಿಕ == ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦" ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - ೩೫°-೪೨° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - ೧೮°-೨೮° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ. == ಜನಸಂಖ್ಯೆ == ಗ್ರಾಮದಲ್ಲಿ ಜನಸಂಖ್ಯೆ ಸುಮಾರು ೨೨,೫೦೦ ಇದೆ. ಅದರಲ್ಲಿ ೧೩೦೦ ಪುರುಷರು ಮತ್ತು ೧೨೦೦ ಮಹಿಳೆಯರು ಇದ್ದಾರೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ಭಾಷೆಗಳು == ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ. == ಕಾಲುವೆಗಳು == ಕೃಷ್ಣಾ ನದಿಯ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ. == ಬೆಳೆಗಳು == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಸಾಕ್ಷರತೆ == ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ಗ್ರಾಮವು ಕುಡಚಿ ವಿಧಾನ ಸಭಾ ಕ್ಷೇತ್ರ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.