ಕುಮಾರಧಾರ ನದಿಯು ಭಾರತದ ನದಿಗಳಲ್ಲೊಂದು. ಕರ್ನಾಟಕದ ಸುಳ್ಯ ತಾಲೂಕಿನ ೨ ಪ್ರಮುಖ ನದಿಗಳಲ್ಲಿ ಒಂದಾದ ಇದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಸಂಗಮಿಸುತ್ತದೆ. ಇದು ಮುಂದೆ ಪಶ್ಚಿಮಾಭಿಮುಖವಾಗಿ ಹರಿದು ಮಂಗಳೂರಿನ ಸಮೀಪ ಅರಬ್ಬಿ ಸಮುದ್ರವನ್ನು ಸೇರುತ್ತದೆ. ಕರ್ನಾಟಕದ ಪ್ರಮುಖ ದೇವಳಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಕುಮಾರಧಾರ ನದಿಯ ಸಮೀಪದಲ್ಲಿ ಸ್ಥಿತವಾಗಿದೆ. == ಉಲ್ಲೇಖಗಳು ==