ಪ್ರೊ.ಕೆ.ಎಸ್.ನಿಸಾರ್ ಅಹಮದ್(5 ಫೆಬ್ರುವರಿ 1936 - 3 ಮೇ 2020) ಕನ್ನಡದ ಪ್ರಮುಖ ಕವಿಯಾಗಿದ್ದರು. ಅವರ ಪೂರ್ಣ ಹೆಸರು ಕೊಕ್ಕರೆಹೊಸಳ್ಳಿ ಶೇಖ್ ಹೈದರ್ ನಿಸಾರ್ ಅಹಮದ್. ಅವರು ಬರೆದ 'ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ' ಎಂಬ ಪದ್ಯವು ಬಹಳ ಜನಪ್ರಿಯವಾಗಿ ಅವರು ನಿತ್ಯೋತ್ಸವ ಕವಿಯೆಂದೂ ಕರೆಯಲ್ಪಡುತ್ತಿದ್ದರು. == ಜೀವನ == ನಿಸಾರ್ ಅಹಮದ್ ಬೆಂಗಳೂರ ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫,೧೯೩೬ರಲ್ಲಿ ಜನಿಸಿದರು. ೧೯೫೯ರಲ್ಲಿ ಭೂರಚನಶಾಸ್ತ್ರ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತರು == ಸಾಹಿತ್ಯ == ನಿಸಾರ್ ಅಹಮದ್ ಅವರ ಸಾಹಿತ್ಯಾಸಕ್ತಿ ೧೦ನೇ ವಯಸ್ಸಿನಲ್ಲೇ ಆರಂಭ.'ಜಲಪಾತ'ದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವರು ಇಲ್ಲಿಯವರೆಗೆ (೨೦೧೮) ೨೧ ಕವನ ಸಂಕಲನಗಳು, ೧೪ ವೈಚಾರಿಕೆ ಕೃತಿಗಳು, ೫ ಮಕ್ಕಳ ಸಾಹಿತ್ಯ ಕೃತಿಗಳು, ೫ ಅನುವಾದ ಕೃತಿಗಳು, ೧೩ ಸಂಪಾದನಾ ಗ್ರಂಥಗಳನ್ನು ಹೊರತಂದಿದ್ದಾರೆ. ಅವುಗಳಲ್ಲಿ ಮನಸು ಗಾಂಧಿಬಜಾರು ಹಾಗೂ ನಿತ್ಯೋತ್ಸವ ಇವು ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್‍ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ. ೧೯೭೮ರಲ್ಲಿ ಇವರ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ನಿತ್ಯೋತ್ಸವ ಹೊರಬಂದು, ಕನ್ನಡ ಲಘುಸಂಗೀತ (ಸುಗಮ ಸಂಗೀತ) ಕ್ಷೇತ್ರದಲ್ಲಿ ಭರ್ಜರಿ ಯಶಸ್ಸು ಪಡೆಯಿತು. ಇದುವರೆಗೂ (೨೦೧೮) ೧೩ ಧ್ವನಿಸುರುಳಿಗಳ ಮೂಲಕ ಅವರು ರಚಿಸಿದ ಕವನಗಳು,ಗೀತೆಗಳು ಸಂಗೀತದೊಂದಿಗೆ ಪ್ರಚಾರಗೊಂಡಿತು. ಕುರಿಗಳು ಸಾರ್‍ ಕುರಿಗಳು, ರಾಜಕೀಯ ವಿಡಂಬನೆ ಕವನ ಭಾರತವು ನಮ್ಮ ದೇಶ (ಸರ್‍ ಮೊಹಮದ್ ಇಕ್ಬಾಲ್ ಅವರ ಸಾರೆ ಜಹಾಂ ಸೆ ಅಚ್ಚಾ ಕವನದ ಕನ್ನಡ ಭಾಷಾಂತರ) ಬೆಣ್ಣೆ ಕದ್ದ ನಮ್ಮ ಕೃಷ್ಣ ಕವನ ಕವಿಯ ಬಹುಮುಖ ಪ್ರತಿಭೆಗೆ ಸಾಕ್ಷಿಯಾಗಿವೆ. == ಕೃತಿಗಳು == == ಪ್ರಶಸ್ತಿ ಪುರಸ್ಕಾರಗಳು == ೨೦೦೬ರ ಮಾಸ್ತಿ ಪ್ರಶಸ್ತಿ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗೊರೂರು ಪ್ರಶಸ್ತಿ ಅನಕೃ ಪ್ರಶಸ್ತಿ ಕೆಂಪೇಗೌಡ ಪ್ರಶಸ್ತಿ ಪಂಪ ಪ್ರಶಸ್ತಿ ೧೯೮೧ರ ರಾಜ್ಯೋತ್ಸವ ಪ್ರಶಸ್ತಿ ೨೦೦೩ರ ನಾಡೋಜ ಪ್ರಶಸ್ತಿ ೨೦೦೬ರ ಅರಸು ಪ್ರಶಸ್ತಿ ೨೦೦೬ ಡಿಸೆಂಬರಿನಲ್ಲಿ ಶಿವಮೊಗ್ಗದಲ್ಲಿ ನಡೆದ ೭೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. == ಉಲ್ಲೇಖಗಳು == == ಹೊರಸಂಪರ್ಕಕೊಂಡಿಗಳು == ನಿಸಾರ್‌ ಅಹಮದ್‌ ಸಂದರ್ಶನ | ಲಾಲ್‌ಬಾಗ್‌ ಏಕಾಂತಕ್ಕೆ ಗಾಂಧಿ ಬಜಾರು ಲೋಕಾಂತಕ್ಕೆ- ಪ್ರಜಾವಾಣಿ ಜೋಗದ ಸಿರಿ ಬೆಳಕಿನಲ್ಲಿ ಮರೆಯಾದ ನಿತ್ಯೋತ್ಸವ ಕವಿ |: , 3, 2020