ಕೋಲಾರ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಇಲ್ಲಿರುವ ಚಿನ್ನದ ಗಣಿಗಳು ಮತ್ತು ಚಿನ್ನದ ಗಣಿಗಾರಿಕೆಗೆ ಕೋಲಾರ ಜಿಲ್ಲೆ ಪ್ರಸಿದ್ಧ. ಕೋಲಾರ ನಗರ ಈ ಜಿಲ್ಲೆಯ ಕೇಂದ್ರಸ್ಥಾನ. ಕೋಲಾರ ಗಂಗರ ರಾಜಧಾನಿಯಾಗಿತ್ತು ಇದನ್ನು ಮೊದಲು ಕುವಲಾಲಪುರ ಅಂತಲೂ ಕರೆಯುತ್ತಿದ್ದರು. ಕಾಲ ಕ್ರಮೇಣ ಕೋಲಾರವಾಯಿತು. ಗಂಗರು ಕಟ್ಟಿಸಿದಂತ ಹಲವಾರು ಸ್ಥಳಗಳು ಕೋಲಾರದಲ್ಲಿ ಮತ್ತು ಕೋಲಾರ ಜಿಲ್ಲೆಯಲ್ಲಿವೆ ಅದರಲ್ಲೂ ಮುಖ್ಯವಾಗಿ ಗಂಗರು ಕಟ್ಟಿಸಿದ ಕೋಲಾರಮ್ಮ ದೇವಾಲಯ ಜಿಲ್ಲೆಯಲ್ಲಿಯೆ ಪ್ರಸಿದ್ದಿಯನ್ನು ಪಡೆದಿದೆ. == ಕೋಲಾರ ಜಿಲ್ಲೆಯ ಬಗ್ಗೆ == ನಾಡಿಗೆ ಮತ್ತು ರಾಷ್ಟ್ರಕ್ಕೆ ತನ್ನೊಡಲ ಚಿನ್ನವನ್ನು ಧಾರೆಯೆರೆದು ‘ಚಿನ್ನದ ನಾಡು’ ಎಂದೇ ಹೆಸರಾಗಿದ್ದ ಕೋಲಾರ ಜಿಲ್ಲೆಯು ನಾಡಿನ ಕೃಷಿ, ಸಾಹಿತ್ಯ, ರಾಜಕೀಯ ಹಾಗೂ ವಿಜ್ಞಾನ ತಂತ್ರಜ್ಞಾನ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆ ನೀಡಿದ ಗೌರವಕ್ಕೆ ಪಾತ್ರವಾಗಿದೆ. ಸಿಲ್ಕ್ ಅಂಡ್ ಮಿಲ್ಕ್, ಹಣ್ಣು ಮತ್ತು ತರಕಾರಿಗಳ ರಾಜಧಾನಿ ಎನಿಸಿರುವ ಕೋಲಾರ ಜನಪದ ಹೋರಾಟಗಳು ಮತ್ತು ಜನಪದ ಸಂಸ್ಕೃತಿಯನ್ನು ಮೆರೆದಿದೆ . ಆಗಸ್ಟ್ ೨೦೦೭ರಂದು ಚಿಕ್ಕಬಳ್ಳಾಪುರ ಉಪವಿಭಾಗವು ಸ್ವತಂತ್ರ ಜಿಲ್ಲೆಯಾಗಿ ಕೋಲಾರದಿಂದ ವಿಭಜನೆ ಹೊಂದಿದೆ.ಕೋಲಾರ ಜಿಲ್ಲೆಯ ಮುಖ್ಯ ಕಸುಬುಗಳೆಂದರೆ ಕೃಷಿ, ಪಶು ಸಾಕಾಣಿಕೆ ಹಾಗೂ ರೇಷ್ಮೆ ಉದ್ಯಮ. ಶಿವಾರ ಪಟ್ಟಣ ಕಲ್ಲಿನಿಂದ ಕೆತ್ತಿರುವ ಶಿಲ್ಪಕಲೆಗೆ ಪ್ರಖ್ಯಾತಿ.ಕೋಲಾರನ್ನು ಚಿನ್ನದ ಗಣಿ ಎಂದು ಸಹ ಕರೆಯುತ್ತಾರೆ == ಇತಿಹಾಸ == ಐತಿಹಾಸಿಕವಾಗಿ ಕೋಲಾರವು ೨ ನೇ ಶತಮಾನದಲ್ಲಿಯೇ ಗಂಗರ ರಾಜಧಾನಿಯಾಗಿದ್ದು, ನಂತರ ಚೋಳರ ಆಳ್ವಿಕೆಗೆ ಒಳಪಟ್ಟಿದೆ. ೪ ರಿಂದ ೧೯ ನೇ ಶತಮಾನದವರೆಗೆ ಕದಂಬ, ಗಂಗ, ಪಲ್ಲವ, ಚೋಳ, ಚಾಲುಕ್ಯ, ಹೊಯ್ಸಳ, ರಾಷ್ಟ್ರಕೂಟ ಅರಸರು, ಮೈಸೂರಿನ ಅರಸರು, ಪಾಳೇಗಾರರು ಹೈದರಾಲಿ ಹಾಗೂ ಟಿಪ್ಪು ಸುಲ್ತಾನರ ಆಳ್ವಿಕೆಗೆ ಒಳಪಟ್ಟಿತ್ತು. == ಜನಸಂಖ್ಯೆ == ೨೦೨೧ ರ ಆದಾರ್ ನೊಂದಣಿ ಪ್ರಕಾರ, ಕೋಲಾರ ಜಿಲ್ಲೆಯ ಜನಸಂಖ್ಯೆಯು ೧೬,೫೩,೩೨೦ ಆಗಿದೆ ಹಾಗೂ ೨೦೧೧ ರ ಜನಗಣತಿಯ ಪ್ರಕಾರ ೧೫,೩೬,೪೧೧. ಇದರಲ್ಲಿ ಪುರುಷರ ಸಂಖ್ಯೆ ೭೭೬,೩೯೬ ಹಾಗು ಸ್ತೀಯರ ಸಂಖ್ಯೆ ೭೬೦,೦೦೫ ಇದೆ . == ಜಿಲ್ಲೆಯ ಪ್ರಮುಖರು == ಸಾಹಿತ್ಯ, ಸಂಸ್ಕೃತಿ ಹಾಗೂ ರಾಜಕೀಯ ಕ್ಷೇತ್ರಗಳಿಗೆ ವಿಶೇಷ ಕೊಡುಗೆ ನೀಡಿರುವ ಈ ಜಿಲ್ಲೆಯು ನಾಡಿನ ಮೊದಲ ಮುಖ್ಯಮಂತ್ರಿ ಕೆ.ಚಂಗಲರಾಯರೆಡ್ಡಿ ಅವರನ್ನು ಕೊಟ್ಟ ಹೆಗ್ಗೆಳಿಕೆಗೆ ಪಾತ್ರವಾಗಿದೆ. ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ- ಪ್ರಾಧ್ಯಾಪಕರು ಮತ್ತು ಲೇಖಕರು. ಮಂಸೋರೆ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ, ಚಿತ್ರ ಕಲಾವಿದ, ಲೇಖಕ, ಹವ್ಯಾಸಿ ಪತ್ರಕರ್ತ == ಆಕರ್ಷಣೆಗಳು == ಕೋಲಾರ ಜಿಲ್ಲೆಯಲ್ಲಿರುವ ಕೆಲವು ಚಾರಿತ್ರಿಕ ಸ್ಥಳಗಳೆ೦ದರೆ == ನಗರದ ಸುಧಾರಣೆ == ಕೋಲಾರದಲ್ಲಿ ಕಸದ ಪ್ರಮಾಣ ಮತ್ತು ಪ್ಲಾಸ್ಟಿಕ್ ಬಳಕೆ ಹೆಚ್ಚಿರುವುದನ್ನು ಕಂಡು, 'ಗೋ ಪ್ಲಾಗ್!' ಎಂಬ ವಿಶಿಷ್ಟ ಅಭಿಯಾನವನ್ನು ಸುಮಂಗಲಿ ನೋಹ ಪ್ರಾರಂಭಿಸಿದ್ದಾರೆ. ಈ ಸಂಸ್ಥೆಯು ಕೋಲಾರವನ್ನು ಕಸ ಮುಕ್ತಗೊಳಿಸಲು ಪಣತೊಟ್ಟಿದೆ. ಹೆಚ್ಚಿನ ಹಳೆಯ ಕಟ್ಟಡಗಳನ್ನು ಬಿಳಿಸಿ, ಹೊಸ ಕಟ್ಟಡಗಳನ್ನು ನಿರ್ಮಿಸಲಾಗಿದೆ. == ಇದನ್ನೂ ನೋಡಿ == ಕೋಲಾರ (ಲೋಕ ಸಭೆ ಚುನಾವಣಾ ಕ್ಷೇತ್ರ) == ಉಲ್ಲೇಖಗಳು ==