ಗಜೇಶ ಮಸಣಯ್ಯ : - ೧೨ನೇ ಶತಮಾನದ ಅಪ್ರಸಿದ್ದ ವಚನಕಾರ, ಅಕಲಕೋಟೆ ತಾಲ್ಲೋಕಿನ ಕರಜಗಿ ಗ್ರಾಮದ ನಿವಾಸಿ. ಬಸವಾದಿ ಶರಣರ ಸಮಕಾಲೀನ. ಈತನ ಪತ್ನಿಯ ಹೆಸರು ಏನೆಂದು ತಿಳಿಯುವುದಿಲ್ಲವಾದರೂ ಆಕೆಯೂ ವಚನಕಾರ್ತಿಯಾಗಿರುವುದನ್ನು ಗಮನಿಸಬಹುದಾಗಿದೆ. ಇಂತಹ ಒಂದೆರಡು ಪ್ರಸಂಗಗಳು ವಚನ ಸಾಹಿತ್ಯಯುಗದಲ್ಲಿ ದಾಖಲಾಗಿವೆ. ಅವೆಲ್ಲವೂ ಷಟ್ಸ್ಥಲಸಿದ್ದಾಂತದ ವಿವರಗಳನ್ನು, ಆತ್ಮಜ್ಞಾನದ ತಿಳುವಳಿಕೆಯನ್ನು ಒಳಗೊಂಡಿವೆ. ಇವರ ವಚನಗಳ ಅಂಕಿತ "ಮಹಾಲಿಂಗ ಗಜೇಶ್ವರ".