ಚಿಕ್ಕಲಕಿ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ.ಇದು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನಲ್ಲಿದೆ. ಚಿಕ್ಕಲಕಿ ಗ್ರಾಮವು ಜಮಖಂಡಿ - ಬಿಜಾಪೂರ ರಾಜ್ಯ ಹೆದ್ದಾರಿಯಲ್ಲಿ ಇದೆ. ಜಿಲ್ಲಾ ಕೇಂದ್ರ ಬಾಗಲಕೋಟ ಯಿಂದ ಸುಮಾರು ೧೦೦ ಕಿ. ಮಿ. ಇದ್ದು ಸಾವಳಗಿ ಹೋಬಳಿ ವ್ಯಾಪ್ತಿಯಲ್ಲಿ ಬರುತ್ತದೆ. ಗ್ರಾಮದಲ್ಲಿ ಸರಕಾರಿ ಉಪ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ ಮತ್ತು ಅಂಚೆ ಕಚೇರಿ ಇದೆ. == ದೇವಾಲಯಗಳು == ಶ್ರೀ ಪಾಂಡುರಂಗ ದೇವಾಲಯ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ. ಪ್ರಸಿದ್ದ ಮಾಳಿಂಗೇಶ್ವರ ದೇವಾಲಯ ಇದೆ. ಮತ್ತು ಅಮೋಘಸಿದ್ದೇಶ್ವರ ದೇವಾಲಯಗಳಿವೆ. == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ಸಂಘಟನೆಗಳು == ಛತ್ರಪತಿ ಶಿವಾಜಿ ಯುವಕ ಮಂಡಳಿ, ಶ್ರೀ ಬಸವೇಶ್ವರ ಯುವಕ ಮಂಡಳಿ ಹಾಗೂ ಕನಕ ಸೇನೆ ಇದೆ. == ನೀರಾವರಿ == ಗ್ರಾಮದ ಪ್ರತಿಶತ ೬೫ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಹಬ್ಬಗಳು == ಪ್ರತಿವರ್ಷ ಶ್ರೀ ಹನುಮಾನ ಉತ್ಸವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಗ್ರಾಮದಲ್ಲಿರುವ ಶಿಕ್ಷಣ ಸಂಸ್ಥೆಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇತಾಜಿ ಸುಭಾಸ್ ಚಂದ್ರ ಬೋಸ್ ಕಿರಿಯ ಪ್ರಾಥಮಿಕ ಶಾಲೆ ಸರಕಾರಿ ಪ್ರೌಢಶಾಲೆ