ಜಂಬಗಿ(ಹೆಚ್) ಒಂದು ಚಿಕ್ಕ ಹಳ್ಳಿ ಹಾಗೂ ಪುಣ್ಯಕ್ಷೇತ್ರ.ಇದು ಕರ್ನಾಟಕ ರಾಜ್ಯದ ಬಿಜಾಪೂರ ಜಿಲ್ಲೆಯ ಬಿಜಾಪೂರ ತಾಲ್ಲೂಕಿನಲ್ಲಿದೆ. ಜಂಬಗಿ(ಹೆಚ್) ಗ್ರಾಮವುಬಬಲೇಶ್ವರ - ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿ ಇದೆ. ಜಿಲ್ಲಾ ಕೇಂದ್ರ ವಿಜಾಪೂರದಿಂದ ಸುಮಾರು ೬೦ ಕಿ. ಮಿ. ದೂರ ಇದೆ.ಪ್ರಮುಖವಾಗಿ ಊರು ನೈಸರ್ಗಿಕವಾಗಿ ದೊಡ್ಡ ಮರಗಳಿರುವ ಊರಾಗಿ ಮಾರ್ಪಟ್ಟಿದೆ.ಊರಲ್ಲಿ ರಾಯಣ್ಣ ಅಭಿಮಾನಿಗಳಿಂದ ಸರ್ಕಲ್ ರಚನೆ ಮಾಡಿದ್ದು ದೇಶಪ್ರೇಮಿ,ನಾಡಪ್ರೇಮಿಗಳಿಂದ ಕೂಡಿದೆ. == ದೇವಾಲಯಗಳು == ಶ್ರೀ ದುರ್ಗಾದೇವಿ ದೇವಾಲಯ, ಶ್ರೀ ವಿಜಯ‌ವಿಠ್ಠಲ‌ಮಂದಿರ, ದೇವಸ್ಥಾನ ಮತ್ತು ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ. == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಹಬ್ಬಗಳು == ಪ್ರತಿವರ್ಷ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಹಣಮಂತ ದೇವರ ಓಕಳಿ, ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಶಾಲೆಯು ೧೯೫೫ರಲ್ಲಿ ಪ್ರಾರಂಭವಾಗಿ ೧ನೇ ತರಗತಿಯಿಂದ ೮ನೇ ತರಗತಿವರೆಗೆ ೨೦೦ರಕ್ಕೂ ಹೆಚ್ಚು ವಿದ್ಯಾರ್ಥಿಗಳ್ಳಿದ್ದಾರೆ. == ರಾಜಕೀಯ == ಬಬಲೇಶ್ವರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. == ಕೈಗಾರಿಕೆಗಳು == ಗ್ರಾಮದ ಹತ್ತಿರ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಇದೆ.