ಜಗ್ಗೇಶ್ ಒಬ್ಬ ಭಾರತೀಯ ನಟ ಮುಖ್ಯವಾಗಿ ಕನ್ನಡ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಸ್ಯ ಪ್ರಧಾನ ಪಾತ್ರಗಳಿಗೆ ಹೆಸರಾದವರು. ಇವರು ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಊರಿನವರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಕೂಡ ಆಗಿದ್ದಾರೆ. == ಚಲನಚಿತ್ರ ಜೀವನ == ಜಗ್ಗೇಶ್ ಅವರು ಆರಂಭದಲ್ಲಿ ಕೆಲ ಸಿನಿಮಾಗಳಲ್ಲಿ ಖಳ ಹಾಗೂ ಹಾಸ್ಯ ನಟನಾಗಿ ವೃತ್ತಿ ಜೀವನ ಆರಂಭಿಸಿದರು. ಇವರ ಮೊದಲನೆಯ ಚಿತ್ರ - ಇಬ್ಬನಿ ಕರಗಿತು. ನೂರನೆಯ ಚಿತ್ರ ಮಠ. ಮೇಕಪ್ ಎಂಬ ಚಿತ್ರ ನಿರ್ಮಿಸಿ,ನಿರ್ಮಾಪಕರೂ ಆಗಿದ್ದಾರೆ. ತಮ್ಮ ಕೆಲವು ಚಿತ್ರಗಳಲ್ಲಿ ತಾವೇ ಹಾಡಿದ್ದಾರೆ. ನಾಯಕ ನಟನಾಗಿ ಅಭಿನಯಿಸಿದ ಮೊದಲ ಚಿತ್ರ ತರ್ಲೆ ನನ್ ಮಗ. ಈ ಚಿತ್ರವನ್ನು ಉಪೇಂದ್ರ ನಿರ್ದೇಶಿಸಿದ್ದಾರೆ. ಹಾಸ್ಯ ಪ್ರಧಾನ ಪಾತ್ರಗಳಿಗೆ ಹೆಸರಾಗಿರುವ ಜಗ್ಗೇಶ್ ಅವರು,ತಮ್ಮ ವಿಶಿಷ್ಟ ಹಾವಭಾವದಿಂದ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಚಿತ್ರರಂಗದಲ್ಲಿ ಇವರು ನವರಸ ನಾಯಕ ನೆಂದು ಪ್ರಸಿದ್ಧಿ ಪಡೆದಿದ್ದಾರೆ. == ರಾಜಕೀಯ ಕ್ಷೇತ್ರ == ಜಗ್ಗೇಶ್ ತುರುವೇಕೆರೆ ಕ್ಷೇತ್ರದಲ್ಲಿ ಶಾಸಕರಾಗಿದ್ದರು. ಫೆ.೩, ೨೦೧೦ರಂದು ಕರ್ನಾಟಕ ವಿಧಾನ ಪರಿಷತ್ತಿಗೆ ಜಗ್ಗೇಶ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. == ಜಗ್ಗೇಶ್ ಅಭಿನಯದ ಚಿತ್ರಗಳು == == ಉಲ್ಲೇಖಗಳು ==