ಡುಮಕನಾಳ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನಲ್ಲಿದೆ. ಡುಮಕನಾಳ ಗ್ರಾಮವು ವಿಜಯಪುರ - ಸೋಲಾಪೂರ ರಾಷ್ತ್ರೀಯ ಹೆದ್ದಾರಿ - 13 ರ ಸಮೀಪದಲ್ಲಿ ಇದೆ. ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು 55 ಕಿ. ಮಿ. ಇದೆ. == ಚರಿತ್ರೆ == ಡುಮಕನಾಳ ಗ್ರಾಮವು ಬ್ರಿಟಿಶರ ಕಾಲದಲ್ಲಿ ಕಂದಾಯದ ಸ್ಥಳವಾಗಿತ್ತು.ಇದು ಜತ್ತ ಸರಕಾರದ ಆಡಳಿತದಲ್ಲಿತ್ತು. == ಭೌಗೋಳಿಕ == ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦" ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - ೩೫°-೪೨° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - ೧೮°-೨೮° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ. == ಜನಸಂಖ್ಯೆ == ಗ್ರಾಮದಲ್ಲಿ ಜನಸಂಖ್ಯೆ ಸುಮಾರು ೧,೫೦೦ ಇದೆ. ಅದರಲ್ಲಿ ೮೦೦ ಪುರುಷರು ಮತ್ತು ೭೦೦ ಮಹಿಳೆಯರು ಇದ್ದಾರೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ಧರ್ಮಗಳು == ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆಗಳು == ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ ಹಾಗೂ ಮರಾಠಿ ಭಾಷೆಗಳನ್ನು ಮಾತನಾಡುತ್ತಾರೆ. == ದೇವಾಲಯಗಳು == ಶ್ರೀ ಅಂಬಾಭವಾನಿ ದೇವಾಲಯ ಶ್ರೀ ಹಣಮಂತ ದೇವಾಲಯ ಶ್ರೀ ಲಕ್ಷ್ಮಿ ದೇವಾಲಯ ಶ್ರೀ ಬೀರದೇವರ ದೇವಾಲಯ == ಮಸೀದಿಗಳು == ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪಕಸುಬುಗಳಾಗಿವೆ. == ಬೆಳೆಗಳು == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ, ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ(ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಹಬ್ಬಗಳು == ಪ್ರತಿವರ್ಷ ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. == ಸಾಕ್ಷರತೆ == ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ವಿಜಯಪುರ ಲೋಕಸಭಾ ಕ್ಷೇತ್ರ ಮತ್ತು ನಾಗಠಾಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ವಿಜಯಪುರ