ತೇರದಾಳ ಗ್ರಾಮವು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನಲ್ಲಿದೆ. == ಚರಿತ್ರೆ == ಗ್ರಾಮವು ಬ್ರಿಟಿಶರ ಕಾಲದಲ್ಲಿ ಕಂದಾಯದ ಸ್ಥಳವಾಗಿತ್ತು.ಇದು ಸಾಂಗ್ಲಿ ಸರಕಾರದ ಆಡಳಿತದಲ್ಲಿತ್ತು. == ಜೈನ ಬಸದಿಗಳು == ಶ್ರೀ 1008 ಭಗವಾನ್ ನೇಮಿನಾಥ ದಿಗಂಬರ ಜೈನ ಬಸದಿ (1008 ನೇಮಿನಾಥ ಗೊಂಕ ಜಿನಾಲಯ),ತೇರದಾಳ ಶ್ರೀ 1008 ಭಗವಾನ್ ಅಜಿತನಾಥ ದಿಗಂಬರ ಜೈನ ಬಸದಿ,ತೇರದಾಳ ಶ್ರೀ 1008 ಭಗವಾನ್ ಪಾರ್ಶ್ವನಾಥ ದಿಗಂಬರ ಜೈನ ಬಸದಿ, ಗುರುಕುಲ ಕ್ಯಾಂಪಸ್, ತೇರದಾಳ ಶ್ರೀ 1008 ಭಗವಾನ್ ಮಹಾವೀರ ದಿಗಂಬರ ಜೈನ ಬಸದಿ ಶ್ರೀ 1008 ಭಗವಾನ್ ವಾಸುಪೂಜ್ಯ ದಿಗಂಬರ ಜೈನ ಬಸದಿ, ಕುಡಚಿ ರಸ್ತೆ, ತೇರದಾಳ ಶ್ರೀ 1008 ದಿಗಂಬರ ಜೈನ ಬಸದಿ,ದೇಸಾಯಿ ಕೆರೆ, ತೇರದಾಳ == ದೇವಾಲಯಗಳು == ಶ್ರೀ ಅಲ್ಲಮಪ್ರಭು ದೇವರ ದೇವಾಲಯ ಶ್ರೀ ಅಮೋಘಸಿದ್ದೆಶ್ವರ ದೇವಾಲಯ ಶ್ರೀ ಪಾಂಡುರಂಗ ದೇವಾಲಯ ಶ್ರೀ ಮಹಾಲಕ್ಷ್ಮಿ ದೇವಾಲಯ ಶ್ರೀ ದುರ್ಗಾದೇವಿ ದೇವಾಲಯ ಶ್ರೀ ಮಲ್ಲಿಕಾರ್ಜುನ ದೇವಾಲಯ ಶ್ರೀ ಬಸವೇಶ್ವರ ದೇವಾಲಯ ಶ್ರೀ ವೆಂಕಟೇಶ್ವರ ದೇವಾಲಯ ಶ್ರೀ ಕಾಳಿಕಾದೇವಿ ದೇವಾಲಯ ಶ್ರೀ ಹಣಮಂತ ದೇವಾಲಯ == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ಭೌಗೋಳಿಕ == ಗ್ರಾಮವು ಭೌಗೋಳಿಕವಾಗಿ 16°32'09.0" ಅಕ್ಷಾಂಶ ಮತ್ತು 75°29'47.9" ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 42 ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ 9 ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - 35° - 42° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - 18° - 28° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ 300- 600ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ 18 ಕಿಮಿ/ಗಂ (ಜೂನ), 19 ಕಿಮಿ/ಗಂ (ಜುಲೈ)ಹಾಗೂ 17 ಕಿಮಿ/ಗಂ (ಅಗಸ್ಟ್) ಇರುತ್ತದೆ. == ಜನಸಂಖ್ಯೆ == ಗ್ರಾಮದಲ್ಲಿ ಜನಸಂಖ್ಯೆ ಸುಮಾರು 33,803 ಇದೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ ಮತ್ತು ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ಧರ್ಮ == ಗ್ರಾಮದಲ್ಲಿ ಜೈನ , ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆ == ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಮರಾಠಿ ಹಾಗೂ ಹಿಂದಿ ಭಾಷೆಗಳನ್ನು ಮಾತನಾಡುತ್ತಾರೆ. == ಶಿಕ್ಷಣ == ತೇರದಾಳದಲ್ಲಿರುವ ಶಿಕ್ಷಣ ಸಂಸ್ಥೆಗಳು ಈ ಕೆಳಗಿನಂತಿವೆ ಶ್ರೀ ಜಿನಸೇನಾಚಾರ್ಯ ವಿದ್ಯಾಮಂಡಳ,ಗುರುಕುಲ ದಾನಿಗೊಂಡ ಶಾಲೆ ಮತ್ತು ಕಾಲೇಜು, ಸಿದ್ದೇಶ್ವರ ಶಾಲೆ ಮತ್ತು ಕಾಲೇಜು ನೀಲಕಂಠೇಶ್ವರ ಶಾಲೆ ಎಸ್.ಪಿ. ಶಾಲೆ ಮತ್ತು ಕಾಲೇಜು ಇದು ಈಗ ಪ್ರವರ್ಧಮಾನಕ್ಕೆ ಬರುತ್ತಿರುವ ವೈದ್ಯಕೀಯ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ಎರಡು ಆಯುರ್ವೇದ ಕಾಲೇಜುಗಳೊಂದಿಗೆ. ಗ್ರಾಮೀಣ ಆಯುರ್ವೇದಿಕ್ ವೈದ್ಯಕೀಯ ಕಾಲೇಜು, ಗುರುಕುಲ, ದಾನಿಗೊಂಡ್ ವೈದ್ಯಕೀಯ ಕಾಲೇಜು, == ನೀರಾವರಿ == ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಕಾಲುವೆ == ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಮುಳವಾಡ ಏತ ನೀರಾವರಿ ಕಾಲುವೆ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ. == ಕೃಷಿ ಮತ್ತು ತೋಟಗಾರಿಕೆ == ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು 95% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ 85% ಭೂಮಿ ಮಳೆಯನ್ನೇ ಅವಲಂಭಿಸಿದೆ. == ಆರ್ಥಿಕತೆ == ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 70% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ. == ಬೆಳೆ == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಸಸ್ಯ == ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ. == ಪ್ರಾಣಿ == ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ. == ಹಬ್ಬಗಳು == ಪ್ರತಿವರ್ಷ ಕಾರಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಸಾಕ್ಷರತೆ == ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು 67%. ಅದರಲ್ಲಿ 75% ಪುರುಷರು ಹಾಗೂ 55% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ಗ್ರಾಮವು ಬಾಗಲಕೋಟ ಲೋಕಸಭಾ ಕ್ಷೇತ್ರ ಮತ್ತು ತೇರದಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ. == ದೂರವಾಣಿ ವಿನಿಮಯ ಕೇಂದ್ರ == ದೂರವಾಣಿ ವಿನಿಮಯ ಕೇಂದ್ರ == ಅಂಚೆ ಕಚೇರಿ == ಅಂಚೆ ಕಚೇರಿ == ಪ್ರಾಥಮಿಕ ಆರೋಗ್ಯ ಕೇಂದ್ರ == ಪ್ರಾಥಮಿಕ ಆರೋಗ್ಯ ಕೇಂದ್ರ == ಪಶು ಆಸ್ಪತ್ರೆ == ಪಶು ಆಸ್ಪತ್ರೆ == ಪೋಲಿಸ್ ಠಾಣೆ == ಪೋಲಿಸ್ ಠಾಣೆ == ಹಾಲು ಉತ್ಪಾದಕ ಸಹಕಾರಿ ಸಂಘ == ಗ್ರಾಮದಲ್ಲಿ ಹಾಲು ಉತ್ಪಾದಕ ಸಹಕಾರಿ ಸಂಘವಿದೆ. ಬಾಗಲಕೋಟ ಕರ್ನಾಟಕ