ನಾಲತವಾಡ ಪಟ್ಟಣವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿದೆ. ನಾಲತವಾಡ ಪಟ್ಟಣವು ಜಿಲ್ಲಾಕೇಂದ್ರ ವಿಜಯಪುರದಿಂದ ಸುಮಾರು ೧೦೦ ಕಿ. ಮಿ. ದೂರ ಇದೆ. == ಚರಿತ್ರೆ == ವೀರೇಶ್ವರ ಸ್ವಾಮಿಜಿಗಳ ತಪೋಭೂಮಿಯಾಗಿತ್ತು. ನಾಲತವಾಡದಲ್ಲಿ ಒಳ್ಳೆಯ ಶಿಕ್ಷಣ ಕೇಂದ್ರ, ವ್ಯಾಪಾರ, ಹಣಕಾಸು ಕೇಂದ್ರ, ಸಾರಿಗೆಯ ಕೇಂದ್ರ, ನೆಮ್ಮದಿ ಕೇಂದ್ರ, ಉಪ ತಹಶಿಲ್ದಾರರ ಕಚೇರಿ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಅಂಚೆ ಕಚೇರಿ, ಬ್ಯಾಂಕ್ ಹಾಗೂ ಇತರೆ ಕಚೇರಿಗಳಿವೆ. ೨೦ನೇ ಶತಮಾನದ ಶರಣ ಶ್ರೇಷ್ಠರಾದ ಶ್ರೀ ವೀರೇಶ್ವರರ ಜನ್ಮಭೂಮಿ ನಾಲತವಾಡ. ಇದು ವಿಜಾಪುರದಿಂದ ೧೦೦ ಕಿ.ಮೀ. ಹಾಗೂ ಮುದ್ದೇಬಿಹಾಳದಿಂದ ೨೦ ಕಿ.ಮೀ. ದೂರವಿದೆ. ವೀರೇಶ ಶರಣರು ಶಿಕ್ಷಕರಾಗಿ, ಕೃಷಿಕರಾಗಿ ಜಂಗಮ ದಾಸೋಹದಲ್ಲಿ ನಿರತರಾಗಿದ್ದ ಶರಣರು. ಗ್ರಾಮ ದೇವತೆಯ ಜಾತ್ರೆಯಲ್ಲಿ ಪ್ರಾಣಿ ಬಲಿ ಕೊಡುವುದನ್ನು ವಿರೋಧಿಸಿದರು. ಇವರು ಹುಟ್ಟಿ ಬೆಳೆದದ್ದು ನಾಲತವಾಡವಾದರೂ ಸಾಧನೆ ಮಾಡಿದ ಕ್ಷೇತ್ರ ಸೋಲಾಪುರವು ಆಗಿದೆ. ಇಲ್ಲಿ ಶರಣರು ಹುಟ್ಟಿ ಬೆಳೆದ ಮಹಾಮನೆ ಇರುತ್ತದೆ. == ಭೌಗೋಳಿಕ == ಪಟ್ಟಣವು ಭೌಗೋಳಿಕವಾಗಿ ೧೬* ೩೨' ೧೦" ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - ೩೫°-೪೨° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - ೧೮°-೨೮° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ. == ಜನಸಂಖ್ಯೆ == ಪಟ್ಟಣದಲ್ಲಿ ಜನಸಂಖ್ಯೆ(2011) ಸುಮಾರು 13150 ಇದೆ. ಅದರಲ್ಲಿ 6490 ಪುರುಷರು ಮತ್ತು 6660 ಮಹಿಳೆಯರು ಇದ್ದಾರೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ಧರ್ಮ == ಪಟ್ಟಣದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆ == ಪಟ್ಟಣದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ. == ದೇವಾಲಯ == ಶ್ರೀ ವೀರೇಶ್ವರ ಶರಣರ ಮಠ ಶ್ರೀ ಕಾಳಿಕಾದೇವಿ ದೇವಾಲಯ ಶ್ರೀ ಗ್ರಾಮದೇವತೆ ದೇವಾಲಯ ಶ್ರೀ ಜಗದ್ಗುರು ರೇವಣಸಿದ್ದೇಶ್ವರ ದೇವಾಲಯ ಶ್ರೀ ಹನುಮಾನ್ ದೇವಾಲಯ ಶ್ರೀ ಶ್ವೇತಾಂಬರ ಜೈನ್ ದೇವಾಲಯ ಶ್ರೀ ವೀರಭದ್ರೇಶ್ವರ ದೇವಾಲಯ ಶ್ರೀ ಬಸವೇಶ್ವರ ದೇವಾಲಯ ಶ್ರೀ ಗಣೇಶ ದೇವಾಲಯ ಶ್ರೀ ಕಂಠಿದುರ್ಗಮ್ಮ ದೇವಾಲಯ ಶ್ರೀ ಲಕ್ಷ್ಮಿ ನಾರಾಯಣ ದೇವಾಲಯ ಶ್ರೀ ಮಹಾಲಕ್ಷ್ಮಿ ದೇವಾಲಯ ಶ್ರೀ ಪಾಂಡುರಂಗ ವಿಠ್ಠಲ ದೇವಾಲಯ ಶ್ರೀ ಮಲ್ಲಿಕಾರ್ಜುನ ದೇವಾಲಯ == ಮಸೀದಿ == ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಪಟ್ಟಣದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಕಾಲುವೆ == ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಮುಳವಾಡ ಏತ ನೀರಾವರಿ ಕಾಲುವೆ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ. == ಕೃಷಿ ಮತ್ತು ತೋಟಗಾರಿಕೆ == ಪಟ್ಟಣದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ. == ಆರ್ಥಿಕತೆ == ಪಟ್ಟಣದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ. == ಉದ್ಯೋಗ == ಪಟ್ಟಣದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ. == ಬೆಳೆ == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಹಬ್ಬ == ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಸರಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಕ ಶಾಲೆ, ನಾಲತವಾಡ ಸರಕಾರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ, ನಾಲತವಾಡ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ, ನಾಲತವಾಡ ಎಸ್.ಎಸ್.ಎಮ್. ಕಿರಿಯ ಪ್ರಾಥಮಿಕ ಶಾಲೆ, ನಾಲತವಾಡ ಪ್ರಗತಿ ಕಿರಿಯ ಪ್ರಾಥಮಿಕ ಶಾಲೆ, ನಾಲತವಾಡ ಕೆ.ಎಸ್.ರಾಯಣ್ಣ ಕಿರಿಯ ಪ್ರಾಥಮಿಕ ಶಾಲೆ, ನಾಲತವಾಡ ಜೆ.ಎಸ್.ಡಿ. ಕಿರಿಯ ಪ್ರಾಥಮಿಕ ಶಾಲೆ, ನಾಲತವಾಡ ಭಾಗ್ಯವಂತಿ ಕಿರಿಯ ಪ್ರಾಥಮಿಕ ಶಾಲೆ, ನಾಲತವಾಡ ಶ್ರೀ ವೀರೇಶ್ವರ ಹಿರಿಯ ಪ್ರಾಥಮಿಕ ಶಾಲೆ, ನಾಲತವಾಡ ಶ್ರೀ ಅಮರೇಶ್ವರ ಹಿರಿಯ ಪ್ರಾಥಮಿಕ ಶಾಲೆ, ನಾಲತವಾಡ ಎಸ್.ಭಾರತಿ ಹಿರಿಯ ಪ್ರಾಥಮಿಕ ಶಾಲೆ, ನಾಲತವಾಡ ಶ್ರೀ ವೀರೇಶ್ವರ ಪ್ರೌಢ ಶಾಲೆ, ನಾಲತವಾಡ ಶ್ರೀ ಬಸವೇಶ್ವರ ಪ್ರೌಢ ಶಾಲೆ, ನಾಲತವಾಡ ಸರಕಾರಿ ಪ್ರೌಢ ಶಾಲೆ, ನಾಲತವಾಡ ಮೊರಾರ್ಜಿ ದೇಸಾಯಿ ವಸತಿ ಶಾಲೆ, ನಾಲತವಾಡ ಶ್ರೀ ಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ, ನಾಲತವಾಡ ಶ್ರೀ ವೀರೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ, ನಾಲತವಾಡ ಶ್ರೀ ವೀರೇಶ್ವರ ಕಲಾ ಮಹಾವಿದ್ಯಾಲಯ, ನಾಲತವಾಡ ಶ್ರೀ ವೀರೇಶ್ವರ ಶಿಕ್ಷಣ ಮಹಾವಿದ್ಯಾಲಯ, ನಾಲತವಾಡ ಶ್ರೀ ವೀರೇಶ್ವರ ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ಮಹಾವಿದ್ಯಾಲಯ, ನಾಲತವಾಡ ಆಜಾದ ಸಹಾಯಕ ವೈದ್ಯಕೀಯ ವಿಜ್ಞಾನ ಸಂಸ್ಥೆ , ನಾಲತವಾಡ ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ(ಮಹಿಳಾ), ನಾಲತವಾಡ == ಸೇವಾ ಸಂಸ್ಥೆಗಳು == ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ನಾಲತವಾಡ ೩೩ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ನಾಲತವಾಡ ಪಶು ಚಿಕಿತ್ಸಾಲಯ, ನಾಲತವಾಡ ಪ್ರಾಥಮಿಕ ಪಶು ಚಿಕಿತ್ಸಾಲಯ, ನಾಲತವಾಡ ಸಿಂಡಿಕೇಟ್ ಬ್ಯಾಂಕ್, ನಾಲತವಾಡ ಡಿ.ಸಿ.ಸಿ.ಬ್ಯಾಂಕ, ನಾಲತವಾಡ ಶ್ರೀ ಶರಣ ವೀರೇಶ್ವರ ಸಹಕಾರಿ ಬ್ಯಾಂಕ್, ನಾಲತವಾಡ ಅಂಚೆ ಕಚೇರಿ ನಾಲತವಾಡ - 586124 ನಾಲತವಾಡ - 586124 (ಬಿಜ್ಜೂರ, ಹೀರೇಮುರಾಳ, ಅಡವಿಹುಲಗಬಾಳ, ನಾಗಬೇನಾಳ, ನಾಗರಬೆಟ್ಟ, ಸಿದ್ದಾಪುರ ಪಿ.ಎನ್.) ಪಟ್ಟಣ ಪಂಚಾಯತಿ ಕಾರ್ಯಾಲಯ, ನಾಲತವಾಡ ನಾಲತವಾಡ ಪಟ್ಟಣ ಪಂಚಾಯತಿ ಕಾರ್ಯಾಲಯದ ಅಂತರಜಾಲ ತಾಣ 2019-03-30 ವೇಬ್ಯಾಕ್ ಮೆಷಿನ್ ನಲ್ಲಿ. ಹೊರ ಪೋಲಿಸ್ ಠಾಣೆ, ನಾಲತವಾಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ, ನಾಲತವಾಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ನಾಲತವಾಡ ರೈತ ಸಂಪರ್ಕ ಕೇಂದ್ರ, ನಾಲತವಾಡ ಹಾಲು ಉತ್ಪಾದಕ ಸಹಕಾರಿ ಸಂಘ, ನಾಲತವಾಡ ಪ್ರಾಥಮಿಕ ಆರೋಗ್ಯ ಕೇಂದ್ರ, ನಾಲತವಾಡ ಕಂದಾಯ ಕಚೇರಿ, ನಾಲತವಾಡ ನೆಮ್ಮದಿ ಕೇಂದ್ರ, ನಾಲತವಾಡ ಮಳೆ ಮಾಪನ ಕೇಂದ್ರ, ನಾಲತವಾಡ ಮೀನುಗಾರಿಕೆ ಸಹಕಾರ ಸಂಘ, ನಾಲತವಾಡ ಸರಕಾರಿ ವಾಹನ ನಿಲ್ದಾಣ, ನಾಲತವಾಡ == ಸಾಕ್ಷರತೆ == ಪಟ್ಟಣದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ಪಟ್ಟಣವು ಬಿಜಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ == ಹೆದ್ದಾರಿಗಳು == ರಾಜ್ಯ ಹೆದ್ದಾರಿಗಳು ರಾಜ್ಯ ಹೆದ್ದಾರಿ - 41 => ಶಿರಾಡೋಣ - ಚಡಚಣ - ಝಳಕಿ - ಇಂಡಿ - ದೇವರ ಹಿಪ್ಪರಗಿ - ಹೂವಿನ ಹಿಪ್ಪರಗಿ - ಮುದ್ದೇಬಿಹಾಳ - ನಾಲತವಾಡ - ನಾರಾಯಣಪುರ - ಲಿಂಗಸಗೂರ == ಉಲ್ಲೇಖ == ವಿಜಯಪುರ ಕರ್ನಾಟಕ