ಬಬಲೇಶ್ವರ ತಾಲ್ಲೂಕು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿದೆ. ತಾಲ್ಲೂಕು ಕೇಂದ್ರವಾದ ಬಬಲೇಶ್ವರ ಪಟ್ಟಣವು ವಿಜಯಪುರ - ಜಮಖಂಡಿ ರಾಜ್ಯ ಹೆದ್ದಾರಿ - 55ರಲ್ಲಿದೆ. ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು 23 ಕಿ.ಮಿ. ದೂರವಿದೆ. ಕರ್ನಾಟಕ ಸರ್ಕಾರವು ಫೆಬ್ರುವರಿ 8, 2013ರಂದು ವಾರ್ಷಿಕ ಮುಂಗಡ ಪತ್ರದ ಪ್ರಕಾರ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಬಲೇಶ್ವರ ಪಟ್ಟಣವನ್ನು ಹೊಸ ತಾಲ್ಲೂಕು ಎಂದು ರಚಿಸಿದೆ.. == ಹವಾಮಾನ == ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 43 ಡಿಗ್ರಿವರೆಗೆ(ಎಪ್ರೀಲನಲ್ಲಿ), ಅತೀ ಕಡಿಮೆ ಅಂದರೆ 8 ಡಿಗ್ರಿ ಸೆಲ್ಸಿಯಸವರೆಗೆ(ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - 35° - 42° ಚಳಿಗಾಲ ಮತ್ತು ಮಳೆಗಾಲ - 18° - 28° ಮಳೆ - ಪ್ರತಿ ವರ್ಷ ಮಳೆ 300 - 600ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ 18 ಕಿಮಿ/ಗಂ(ಜೂನ), 19 ಕಿಮಿ/ಗಂ(ಜುಲೈ) ಹಾಗೂ 17 ಕಿಮಿ/ಗಂ(ಅಗಸ್ಟ್) ಇರುತ್ತದೆ. == ಜನಸಂಖ್ಯೆ == ಬಬಲೇಶ್ವರ ತಾಲ್ಲೂಕಿನ ಜನಸಂಖ್ಯೆ(2011)ಯು ಸುಮಾರು 2,00,000ಕ್ಕೂ ಹೆಚ್ಚಿದೆ. ಬಬಲೇಶ್ವರ ಮತಕ್ಷೇತ್ರ(2018)ದಲ್ಲಿ 1,06,256 ಪುರುಷರು, 1,02,647 ಮಹಿಳೆಯರು ಸೇರಿ ಒಟ್ಟು 2,08,903 ಮತದಾರರಿದ್ದಾರೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ, ಮೆಕ್ಕೆ ಜೋಳ ಹಾಗೂ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ ಹಾಗೂ ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ. ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ಧರ್ಮ == ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆ == ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ ಮತ್ತು ಮರಾಠಿ ಭಾಷೆಗಳನ್ನು ಮಾತನಾಡುತ್ತಾರೆ. == ಪ್ರಸಿದ್ಧ ದೇವಾಲಯಗಳು == ಬಬಲೇಶ್ವರ - ಶ್ರೀ ಗುರುಪಾದೇಶ್ವರ ಮಠ ದೇವರ ಗೆಣ್ಣೂರ - ಶ್ರೀ ಮಹಾಲಕ್ಷ್ಮಿ ದೇವಾಲಯ ಬಬಲಾದಿ - ಶ್ರೀ ಗುರು ಚಕ್ರವರ್ತಿ ಸದಾಶಿವ ಮೂರ್ತಿಗಳ ವಂಶ ಪಾರಂಪರ್ಯ ಗದ್ದುಗೆಗಳು ಮತ್ತು ಭವ್ಯವಾದ ಚಂದ್ರಗಿರಿ ಮಠವಿದೆ. ಹಣಮಸಾಗರ - ಶ್ರೀ ಗುರು ಚಕ್ರವರ್ತಿ ಸದಾಶಿವ ಮೂರ್ತಿಗಳ ಶಾಖಾ ಮಠವಿದೆ. ಕಂಬಾಗಿ - ಶ್ರೀ ಹನುಮಾನ ದೇವಸ್ಥಾನ ಹಲಗಣಿ - ಶ್ರೀ ಹನುಮಾನ(ಹಲಗಣೇಶ) ದೇವಸ್ಥಾನ ಸಾರವಾಡ - ಶ್ರೀ ಈಶ್ವರ ದೇವಾಲಯ ಬೆಳ್ಳುಬ್ಬಿ - ಶ್ರೀ ಮಳೆಮಲ್ಲೇಶ್ವರ ದೇವಸ್ಥಾನ ಉಪ್ಪಲದಿಣ್ಣಿ - ಶ್ರೀ ಸಂಗಮೇಶ್ವರ ದೇವಸ್ಥಾನ ಕಾಖಂಡಕಿ - ಶ್ರೀ ಮಹಿಪತಿ ದಾಸರ ವೃಂದಾವನ == ನೀರಾವರಿ == ಪ್ರತಿಶತ 70 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ(ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಕೃಷಿ ಮತ್ತು ತೋಟಗಾರಿಕೆ == ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಕೃಷಿಯಲ್ಲಿ ಸುಮಾರು 75% ಜನರು ಕೆಲಸ ಮಾಡುತ್ತಾರೆ. 75% ಭೂಮಿ ನೀರಾವರಿ ಹೊಂದಿದೆ. ಉಳಿದ 15% ಭೂಮಿ ಮಳೆಯನ್ನೇ ಅವಲಂಭಿಸಿದೆ. ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಏತ ನೀರಾವರಿ ಕಾಲುವೆ ಕಾಲುವೆಯಿದ್ದು, ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ. == ಆರ್ಥಿಕತೆ == ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ. == ಉದ್ಯೋಗ == ಫಲವತ್ತಾದ ಭೂಮಿ ಇದುವುದರಿಂದ ಸುಮಾರು 75% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಹಾಗೂ ಇನ್ನಿತರ ಉಪಕಸುಬುಗಳಾಗಿವೆ. == ಬೆಳೆ == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ, ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ(ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಸಸ್ಯ == ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ. == ಪ್ರಾಣಿ == ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ. == ಹಬ್ಬ == ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಹಳ್ಳಿಗಳು == ಬಬಲೇಶ್ವರ ತಾಲ್ಲೂಕಿನ ಹಳ್ಳಿಗಳು == ಶಿಕ್ಷಣ == ದಾನಮ್ಮದೇವಿ ಕಿರಿಯ ಪ್ರಾಥಮಿಕ ಶಾಲೆ, ಬಬಲೇಶ್ವರ ವಿದ್ಯಾನಿಕೇತನ ಕಿರಿಯ ಪ್ರಾಥಮಿಕ ಶಾಲೆ, ಬಬಲೇಶ್ವರ ಕಿರಿಯ ಪ್ರಾಥಮಿಕ ಶಾಲೆ, ಬಬಲೇಶ್ವರ ಜಾನಕಿ ಶ್ರೀ ರಾಮ ವಿದ್ಯಾ ಮಂದಿರ ಪ್ರಾಥಮಿಕ ಶಾಲೆ, ಬಬಲೇಶ್ವರ ಬಾಪೂಜಿ ಪ್ರಾಥಮಿಕ ಶಾಲೆ, ಬಬಲೇಶ್ವರ ಶಾರದಾ ಪ್ರಾಥಮಿಕ ಶಾಲೆ, ಬಬಲೇಶ್ವರ ಸರಕಾರಿ ಉರ್ದು ಪ್ರೌಢ ಶಾಲೆ, ಬಬಲೇಶ್ವರ ಬಾಪೂಜಿ ಪ್ರೌಢ ಶಾಲೆ, ಬಬಲೇಶ್ವರ ಶಾಂತವೀರ ಪ್ರೌಢ ಶಾಲೆ, ಬಬಲೇಶ್ವರ ಶಾರದಾ ಪ್ರೌಢ ಶಾಲೆ, ಬಬಲೇಶ್ವರ ಶಾಂತವೀರ ಪದವಿಪೂರ್ವ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ಬಬಲೇಶ್ವರ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರ, ಬಬಲೇಶ್ವರ ಶಾಂತವೀರ ಕಲಾ ಮಹಾವಿದ್ಯಾಲಯ, ಬಬಲೇಶ್ವರ == ರಾಜಕೀಯ == ವಿಜಯಪುರ ಲೋಕಸಭಾ ಕ್ಷೇತ್ರ ಮತ್ತು ಬಬಲೇಶ್ವರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ. ಬಬಲೇಶ್ವರ ವಿಧಾನ ಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಬಬಲೇಶ್ವರ ಮತಕ್ಷೇತ್ರ(2018)ದಲ್ಲಿ 1,06,256 ಪುರುಷರು, 1,02,647 ಮಹಿಳೆಯರು ಸೇರಿ ಒಟ್ಟು 2,08,903 ಮತದಾರರಿದ್ದಾರೆ. ಕ್ಷೇತ್ರದ ಇತಿಹಾಸ ಹನ್ನೆರಡನೇ ಶತಮಾನದಲ್ಲಿ ಕಲ್ಯಾಣದಲ್ಲಿ ನಡೆದ ಮಹಾಕ್ರಾಂತಿಯ ನಂತರ ಶರಣ ಹರಳಯ್ಯ 63 ಶರಣರೊಂದಿಗೆ ಶೇಗುಣಸಿ ಹೊರ ವಲಯದಲ್ಲಿ ಕೆಲ ಕಾಲ ತಂಗಿದ್ದ ಐತಿಹ್ಯ ಇಲ್ಲಿನ ಹರಳಯ್ಯನ ಗುಂಡಿ ಇದೆ. ಮಮದಾಪುರದಲ್ಲಿ ಆದಿಲ್‌ಶಾಹಿ ಅರಸರು ಕಟ್ಟಿಸಿದ ಸುಂದರ ಕೆರೆ ಶತ ಶತಮಾನಗಳ ಕಾಲ ವಿಶಿಷ್ಟ ತಳಿಯ ಭತ್ತ ಬೆಳೆಯಲು ಆಸರೆಯಾಗಿತ್ತು ಎಂಬುದು ಇಲ್ಲಿನ ಐತಿಹ್ಯ. ಬಬಲೇಶ್ವರದ ಗುರುಪಾದೇಶ್ವರ ಬೃಹನ್ಮಠಕ್ಕೆ ತನ್ನದೇ ಪರಂಪರೆಯಿದೆ. ಕಾಖಂಡಕಿಯ ಮಹಿಪತಿದಾಸರ ಪರಂಪರೆ ರಾಜ್ಯದಲ್ಲೇ ಹೆಸರುವಾಸಿ. ಕಾರಹುಣ್ಣಿಮೆ ಸಂದರ್ಭ ಇಲ್ಲಿ ನಡೆಯುವ ಓರಿ ಓಡಿಸುವ ಸ್ಪರ್ಧೆ ಮೈಮನ ರೋಮಾಂಚನಗೊಳಿಸುತ್ತದೆ. ಪ್ರಸಿದ್ಧ ಅರಕೇರಿ ಅಮೋಘ ಸಿದ್ಧೇಶ್ವರ ದೇವಾಲಯ, ಕಂಬಾಗಿ ಮತ್ತು ಹಲಗಣಿ ಗ್ರಾಮದ ಹಣಮಂತ ದೇವಾಲಯಗಳು, ಐತಿಹಾಸಿಕ ಬಬಲಾದಿಯ ಗುರು ಚಕ್ರವರ್ತಿ ಸದಾಶಿವ ಮಠ, ಬೆಳ್ಳುಬ್ಬಿಯ ಮಳೇಮಲ್ಲೇಶ್ವರ ದೇವಾಲಯ ಹಾಗೂ ದೇವರ ಗೆಣ್ಣೂರನ ಮಹಾಲಕ್ಷ್ಮಿ ದೇವಾಲಯಗಳಿವೆ. ಪ್ರಸಿದ್ಧ ದೇಸಗತಿ ಮನೆತನ ವಿಜಯಪುರ ತಾಲ್ಲೂಕಿನ ಜೈನಾಪುರ ಗ್ರಾಮದಲ್ಲಿ ವಾಸವಾಗಿದೆ. ಒಂದೆಡೆ ಹೊಳಿ ದಂಡೆ. ಸಮೃದ್ಧಿಯ ಕೃಷಿ ಚಿತ್ರಣ. ಇನ್ನೊಂದೆಡೆ ಎತ್ತರದ ಪ್ರದೇಶ. ಹನಿ ಹನಿ ನೀರಿಗೂ ತತ್ವಾರ. ಮಳೆಯಾಶ್ರಿತ ಬೆಳೆ ಪದ್ಧತಿ. ಕೃಷ್ಣೆ–ಡೋಣಿ ಹರಿಯುವಿಕೆ. ಸಾರವಾಡ ಸುತ್ತಮುತ್ತಲಿನ ಬಿಳಿಜೋಳ ಎಲ್ಲೆಡೆ ಪ್ರಸಿದ್ಧಿ. ಕೃಷ್ಣಾ ನದಿ ತಟದ ಕಬ್ಬು ಬೆಳೆಗಾರರಿಗಾಗಿ ಜಿಲ್ಲೆಯ ಇತಿಹಾಸದಲ್ಲೇ ಆರಂಭಗೊಂಡ ಮೊದಲ ಸಹಕಾರಿ ಸಕ್ಕರೆ ಕಾರ್ಖಾನೆ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ, ಕೃಷ್ಣಾನಗರದಲ್ಲಿದೆ. ರಜತ ಮಹೋತ್ಸವ ಕಂಡ ಈ ಕಾರ್ಖಾನೆ ಈ ಭಾಗದ ರೈತರ ಆರ್ಥಿಕಾಭಿವೃದ್ಧಿಯ ಬೆನ್ನೆಲುಬಾಗಿರುವುದು ಇಲ್ಲಿನ ವಿಶೇಷ. ತಿಕೋಟಾ ಭಾಗ ದ್ರಾಕ್ಷಿಯ ಕಣಜ ಎಂದೇ ಖ್ಯಾತವಾಗಿದೆ. ವಿದೇಶಕ್ಕೂ ಇಲ್ಲಿನ ದ್ರಾಕ್ಷಿ ರಫ್ತಾಗುತ್ತಿದೆ. ಒಟ್ಟಾರೆ ಬಬಲೇಶ್ವರ ವಿಧಾನಸಭಾ ಕ್ಷೇತ್ರ ವಿಶಿಷ್ಟ ಭೌಗೋಳಿಕ ನೆಲೆಯನ್ನು ತನ್ನೊಡಲಲ್ಲಿ ಹುದುಗಿಸಿಕೊಂಡಿದೆ. ಬಬಲೇಶ್ವರ ವಿಧಾನಸಭೆ ಕ್ಷೇತ್ರ 2008ರಲ್ಲಿ ಮರು ವಿಂಗಡಣೆ ಆದ ಬಳಿಕ ಬಬಲೇಶ್ವರ ಎಂದು ನಾಮಕರಣಗೊಂಡಿದೆ. 2008ರ ಮೊದಲು ತಿಕೋಟಾ ವಿಧಾನಸಭೆ ಕ್ಷೇತ್ರವಾಗಿತ್ತು. ನಾಲ್ಕು ಬಾರಿ ಕಾಂಗ್ರೆಸ್‌ನ ಬಿ.ಎಂ.ಪಾಟೀಲರು ಹಾಗೂ ಅವರ ಪುತ್ರ ಎಂ.ಬಿ.ಪಾಟೀಲರು ನಾಲ್ಕು ಬಾರಿ ಆಯ್ಕೆಯಾಗಿ ಅತಿ ಹೆಚ್ಚು ವರ್ಷಗಳ ಕಾಲ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದು ವಿಶೇಷವಾಗಿದೆ. ಕ್ಷೇತ್ರ ಪುನರ್‌ ವಿಂಗಡಣೆ ಬಳಿಕ ತಿಕೋಟಾ ವಿಧಾನಸಭಾ ಕ್ಷೇತ್ರ ಬಬಲೇಶ್ವರ ವಿಧಾನಸಭಾ ಕ್ಷೇತ್ರ ದೊಳಗೆ ವಿಲೀನವಾಯಿತು. ಕ್ಷೇತ್ರಕ್ಕೆ ಉಪ ಚುನಾವಣೆ ಸೇರಿದಂತೆ ಒಟ್ಟು 14 ವಿಧಾನಸಭಾ ಚುನಾವಣೆ ನಡೆದಿದ್ದು, ಇದರಲ್ಲಿ ಎಂಟು ಚುನಾವಣೆಗಳಲ್ಲಿ ಇಲ್ಲಿನ ಮತದಾರರು ಬಿ.ಎಂ.ಪಾಟೀಲ ಹಾಗೂ ಎಂ.ಬಿ.ಪಾಟೀಲಗೆ ಹರಸಿದ್ದಾರೆ. ತಂದೆ–ಮಗ ಇಬ್ಬರೂ ಸಚಿವರಾಗಿರುವುದು ಇಲ್ಲಿನ ವಿಶೇಷ. 1994ರಲ್ಲಿ ಜನತಾದಳದಿಂದ ಆಯ್ಕೆಯಾದ ಶಿವಾನಂದ ಪಾಟೀಲರು ಕಾಂಗ್ರೆಸ್‌ನ ಬಿ.ಎಂ.ಪಾಟೀಲ ಅವರ ಪುತ್ರ ಎಂ.ಬಿ.ಪಾಟೀಲರನ್ನು ಸೋಲಿಸಿದ್ದರು. 1999ರಲ್ಲಿ ಕಾಂಗ್ರೆಸ್‌ನ ಎಂ.ಬಿ.ಪಾಟೀಲರನ್ನು ಸೋಲಿಸಿ ಜನತಾದಳದಿಂದ ಆಯ್ಕೆಯಾದ ಶಿವಾನಂದ ಪಾಟೀಲ ಅವರು BJPಯಿಂದ ಸ್ಪರ್ಧಿಸಿ ಗೆದ್ದಿದ್ದರು. ಶಿವಾನಂದ ಪಾಟೀಲ ಅವರು ಬಸವನಬಾಗೇವಾಡಿ ಕ್ಷೇತ್ರಕ್ಕೆ ವಲಸೆ ಹೋದ ಬಳಿಕ ಎಂ.ಬಿ.ಪಾಟೀಲರು ಸತತ ಮೂರು ಬಾರಿ ಗೆದ್ದು ಹ್ಯಾಟ್ರಿಕ್‌ ಸಾಧಿಸಿದ್ದಾರೆ. ಇದರಲ್ಲಿ ಎರಡು ಬಾರಿ ಜೆಡಿಎಸ್‌ ಪಕ್ಷದಿಂದ ಸೋತಿರುವ BJPಯ ವಿಜುಗೌಡ ಪಾಟೀಲರು ಶಿವಾನಂದ ಪಾಟೀಲ ಅವರ ಕಿರಿಯ ಸಹೋದರ ಎಂಬುದು ಗಣನೀಯ. 2008ರಲ್ಲಿ ತಿಕೋಟಾ ವಿಧಾನಸಭಾ ಕ್ಷೇತ್ರವನ್ನು ಬಬಲೇಶ್ವರ ವಿಧಾನಸಭಾ ಕ್ಷೇತ್ರ ಎಂದು ನಾಮಕರಣ ಮಾಡಲಾಯಿತು. ಆಗ ಬಸವನಬಾಗೇವಾಡಿ ಕ್ಷೇತ್ರದಲ್ಲಿದ್ದ ಮಮದಾಪುರ ಹೋಬಳಿಯ 28 ಹಳ್ಳಿಗಳು ಬಬಲೇಶ್ವರ ಕ್ಷೇತ್ರಕ್ಕೆ ಸೇರ್ಪಡೆಯಾದರೆ, ತಿಕೋಟಾ ವ್ಯಾಪ್ತಿಯಲ್ಲಿದ್ದ ಕೆಲ ಹಳ್ಳಿಗಳು ನಾಗಠಾಣ(ಹಳೆಯ ಬಳ್ಳೋಳ್ಳಿ) ಕ್ಷೇತ್ರದ ಪಾಲಾದವು. ಕ್ಷೇತ್ರದ ವಿಶೇಷತೆ ಸ್ವಾತಂತ್ರ್ಯ ಹೋರಾಟಗಾರ ಮತ್ತು ಕರ್ನಾಟಕದ ಏಕೀಕರಣಕ್ಕಾಗಿ ದುಡಿದ ಹಿರಿಯರಾದ ಚೆನ್ನಬಸಪ್ಪ ಅಂಬಲಿಯವರು ಈ ಕ್ಷೇತ್ರದ 1951ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದು ವಿಶೇಶವಾಗಿದೆ. ಬಬಲೇಶ್ವರ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ ಎನಿಸಿದರೂ ಕಾಂಗ್ರೆಸ್ಸೇತರ ಪಕ್ಷಗಳೂ ಬಲ್ಯ ಮೆರೆದಿವೆ. 1957ರಿಂದ ನಿರಂತರ ಗೆದ್ದಿದ್ದ ಕಾಂಗ್ರೆಸ್‌ ಪಕ್ಷ ಮೊದಲ ಸೋಲು ಕಂಡಿದ್ದು 1978ರ ಕಾಂಗ್ರೆಸ್‌ ಅಭ್ಯರ್ಥಿ ಶಿವರಾಯ ಜಿದ್ದಿ ಅವರನ್ನು ಸೋಲಿಸಿದ ಜನತಾ ಪಕ್ಷದ ಬದುಗೌಡ ಬಾಪುಗೌಡ ಪಾಟೀಲ ಮೊದಲ ಬಾರಿಗೆ ಕಾಂಗ್ರೆಸ್‌ ರಹಿತ ಶಾಸಕ ಎನಿಸಿದರು. 1962ರಲ್ಲಿ ಶಾಸಕರಾಗಿದ್ದ ಬಿ.ಎಂ.ಪಾಟೀಲರನ್ನು 1983 ಚುನಾವಣೆ ಬಳಿಕ 1989ರವರೆಗೆ ನಡೆದ ಮೂರು ಚುನಾವಣೆಗಳಲ್ಲಿ ಬಿ.ಎಂ.ಪಾಟೀಲರನ್ನು ಗೆಲ್ಲಿಸಿ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಗಳಿಸುವಂತೆ ಮಾಡಿತ್ತು. 1991ರಲ್ಲಿ ಬಿ.ಎಂ.ಪಾಟೀಲರು ನಿಧನರಾದಾಗ, ತೆರವಾದ ಸ್ಥಾನಕ್ಕೆ ಉಪ ಚುನಾವಣೆಯಲ್ಲಿ ಎಂ.ಬಿ.ಪಾಟೀಲರು ಸ್ಪರ್ಧಿಸಿ ಆಯ್ಕೆಯಾಗಿದ್ದರು. ಶಿವಾನಂದ ಪಾಟೀಲರು ಜನತಾ ಪಕ್ಷ ಮತ್ತು ಭಾರಟಿಯ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ಬಿ.ಎಂ.ಪಾಟೀಲರು ವೀರಪ್ಪ ಮೊಯ್ಲಿ ಮಂತ್ರಿಮಂಡಳದಲ್ಲಿ ನಾಗರಿಕ ಆಡಳಿತ ಮತ್ತು ನಗರಾಭಿವೃದ್ಧಿ ಸಚಿವರಾಗಿದ್ದರು ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಎಂ.ಬಿ.ಪಾಟೀಲರು ಸಿದ್ದರಾಮಯ್ಯನವರ ಮಂತ್ರಿಮಂಡಳದಲ್ಲಿ ನೀರಾವರಿ ಸಚಿವರಾಗಿದ್ದರು. ಎಂ.ಬಿ.ಪಾಟೀಲರು ಎಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸರ್ಕಾರದ ಮಂತ್ರಿಮಂಡಳದಲ್ಲಿ ಗೃಹ ಸಚಿವರಾಗಿದ್ದರು. ಎಂ.ಬಿ.ಪಾಟೀಲರು 2008 - 2018ರ ವರಗೆ ನಡೆದ ಮೂರು ಚುನಾವಣೆಗಳಲ್ಲಿ ಗೆದ್ದು ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಸಾಧನೆ ಮಾಡಿದ್ದಾರೆ. ಬಬಲೇಶ್ವರ ವಿಧಾನ ಸಭಾ ಕ್ಷೇತ್ರವು ಬಿ.ಎಂ.ಪಾಟೀಲ ಹಾಗೂ ಎಂ.ಬಿ.ಪಾಟೀಲರು ತಂದೆ-ಮಗ ಇಬ್ಬರು ಹ್ಯಾಟ್ರಿಕ್‌ ಸಾಧಿಸಿದ್ದಾರೆ. ಜನಪ್ರತಿನಿಧಿಗಳ ವಿವರ == ಸಾಹಿತ್ಯ == ಶಂ.ಗು.ಬಿರಾದಾರರವರು ಮಕ್ಕಳ ಸಾಹಿತಿಗಳಾಗಿದ್ದಾರೆ. == ಆರೋಗ್ಯ == ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬಬಲೇಶ್ವರ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಮಮದಾಪುರ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕಂಬಾಗಿ == ಪಶು ಆಸ್ಪತ್ರೆ == ಸರಕಾರಿ ಪಶು ಆಸ್ಪತ್ರೆ, ಬಬಲೇಶ್ವರ ಸರಕಾರಿ ಪಶು ಆಸ್ಪತ್ರೆ, ಮಮದಾಪುರ ಸರಕಾರಿ ಪಶು ಆಸ್ಪತ್ರೆ, ಗುಣದಾಳ == ಆರಕ್ಷಕ (ಪೋಲಿಸ್) ಠಾಣೆ == ಆರಕ್ಷಕ (ಪೋಲಿಸ್) ಠಾಣೆ, ಬಬಲೇಶ್ವರ ಪೋಲಿಸ್ ಠಾಣೆಯು ಸುತ್ತಲಿನ ಸುಮಾರು 50ಕ್ಕೂ ಹೆಚ್ಚು ಹಳ್ಳಿಗಳ ವಾಪ್ತಿ ಹೊಂದಿದೆ. ಹೊರ ಆರಕ್ಷಕ (ಪೋಲಿಸ್) ಠಾಣೆ, ಮಮದಾಪುರ ಹೊರ ಆರಕ್ಷಕ (ಪೋಲಿಸ್) ಠಾಣೆ, ಗುಣದಾಳ == ವಿದ್ಯುತ್ ಪರಿವರ್ತನಾ ಕೇಂದ್ರ == 110 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಬಬಲೇಶ್ವರ 110 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಮಮದಾಪುರ 110 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಕೆಂಗಲಗುತ್ತಿ 110 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಶಿರಬೂರ 33 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಕಂಬಾಗಿ 33 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಬಬಲೇಶ್ವರ 33 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ದೇವರ ಗೆಣ್ಣೂರ == ಬ್ಯಾಂಕಗಳು == ವಿಜಯ ಬ್ಯಾಂಕ, ಬಬಲೇಶ್ವರ ಸಿಂಡಿಕೇಟ್ ಬ್ಯಾಂಕ, ಬಬಲೇಶ್ವರ ಸಿಂಡಿಕೇಟ್ ಬ್ಯಾಂಕ, ಮಮದಾಪುರ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ : ಬಬಲೇಶ್ವರ, ಜೈನಾಪುರ, ಅರ್ಜುಣಗಿ, ಗುಣದಾಳ, ಸಾರವಾಡ, ದೇವರಗೆಣ್ಣೂರ ಎಸ್.ಬಿ.ಐ.ಬ್ಯಾಂಕ್, ನಿಡೋಣಿ ಬ್ಯಾಂಕ್ ಆಫ್ ಇಂಡಿಯಾ, ಕಂಬಾಗಿ ಡಿ.ಸಿ.ಸಿ. ಬ್ಯಾಂಕ, ಬಬಲೇಶ್ವರ ಡಿ.ಸಿ.ಸಿ. ಬ್ಯಾಂಕ, ಕೃಷ್ಣಾನಗರ == ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ == ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕಗಳು: ಬಬಲೇಶ್ವರ, ಅರ್ಜುಣಗಿ, ದೇವರಗೆಣ್ಣೂರ, ಧನ್ಯಾಳ, ಹಂಗರಗಿ, ಹೊಸೂರ, ಜೈನಾಪುರ, ಜಂಬಗಿ ಹೆಚ್, ಕಾರಜೋಳ, ಕಾಖಂಡಕಿ, ಕಾತ್ರಾಳ, ಕೆಂಗಲಗುತ್ತಿ, ಕೃಷ್ಣಾನಗರ, ಮಮದಾಪುರ, ನಾಗರಾಳ, ಕುಮಠೆ, ಸವನಳ್ಳಿ, ನಿಡೋಣಿ, ಸಾರವಾಡ, ಶೇಗುಣಸಿ, ಶೇಗುಣಸಿ, ಯಕ್ಕುಂಡಿ. == ಕೃಷಿ ಮಾರುಕಟ್ಟೆ == ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಬಬಲೇಶ್ವರ == ರಾಜ್ಯ ಹೆದ್ದಾರಿಗಳು == ರಾಜ್ಯ ಹೆದ್ದಾರಿ - 55 => ಬಬಲೇಶ್ವರ - ಕಂಬಾಗಿ - ಗಲಗಲಿ - ಮುಧೋಳ - ಯಾದವಾಡ - ಯರಗಟ್ಟಿ == ಅಂಚೆ ಕಚೇರಿ ಮತ್ತು ಪಿನಕೋಡ್ ಸಂಕೇತಗಳು == ಬಬಲೇಶ್ವರ - 586113 ಸಾರವಾಡ - 586125 == ಬಿ.ಎಸ್.ಎನ್.ಎಲ್ ದೂರವಾಣಿ ಸಂಕೇತ == ಬಿ.ಎಸ್.ಎನ್.ಎಲ್ ದೂರವಾಣಿ ಕೇಂದ್ರ(ಮುಖ್ಯ ಕಚೇರಿ), ಬಬಲೇಶ್ವರ ದೂರವಾಣಿ ಸಂಕೇತ - 08355 ದೂರವಾಣಿ ವಿನಿಮಯ ಕೇಂದ್ರಗಳು == ಗ್ರಾಮ ಪಂಚಾಯತಿಗಳು == == ಗ್ರಂಥಾಲಯಗಳು/ವಾಚನಾಲಯಗಳು == ಗ್ರಂಥಾಲಯ, ಬಬಲೇಶ್ವರ ಗ್ರಂಥಾಲಯ, ಮಮದಾಪುರ ಗ್ರಂಥಾಲಯ, ಗುಣದಾಳ == ಮಳೆ ಮಾಪನ ಕೇಂದ್ರ == ಮಳೆ ಮಾಪನ ಕೇಂದ್ರ, ಬಬಲೇಶ್ವರ ಮಳೆ ಮಾಪನ ಕೇಂದ್ರ, ಮಮದಾಪುರ == ಕಂದಾಯ ಕಚೇರಿ == ಕಂದಾಯ ಕಚೇರಿ, ಬಬಲೇಶ್ವರ ಕಂದಾಯ ಕಚೇರಿ, ಮಮದಾಪುರ == ನೆಮ್ಮದಿ (ಹೋಬಳಿ) ಕೇಂದ್ರ == ನೆಮ್ಮದಿ ಕೇಂದ್ರ, ಬಬಲೇಶ್ವರ ನೆಮ್ಮದಿ ಕೇಂದ್ರ, ಮಮದಾಪುರ == ಉಚಿತ ಪ್ರಸಾದನಿಲಯ == ಮೆಟ್ರಿಕ್ ಪೂರ್ವ/ನಂತರ ಬಾಲಕರ ಉಚಿತ ಪ್ರಸಾದನಿಲಯ, ಮಮದಾಪುರ ಮೆಟ್ರಿಕ್ ಪೂರ್ವ ಬಾಲಕರ ಉಚಿತ ಪ್ರಸಾದನಿಲಯ, ಅರ್ಜುಣಗಿ ಮೆಟ್ರಿಕ್ ಪೂರ್ವ ಬಾಲಕರ ಉಚಿತ ಪ್ರಸಾದನಿಲಯ, ನಿಡೋಣಿ ಮೆಟ್ರಿಕ್ ಪೂರ್ವ ಬಾಲಕರ ಉಚಿತ ಪ್ರಸಾದನಿಲಯ, ಕಾಖಂಡಕಿ ಶ್ರೀ ಶಾಂತವೀರ ಉಚಿತ ಪ್ರಸಾದನಿಲಯ, ಬಬಲೇಶ್ವರ ಶ್ರೀ ಮಂಗಮ್ಮದೇವಿ ಉಚಿತ ಪ್ರಸಾದ ನಿಲಯ, ಹೊನಗನಹಳ್ಳಿ == ಜಿನುಗು ಕೆರೆ == ಕೆರೆ, ಬಬಲೇಶ್ವರ ಕೆರೆ, ಮಮದಾಪುರ ಕೆರೆ, ಯಕ್ಕುಂಡಿ ಕೆರೆ, ಹೊಕ್ಕುಂಡಿ ಕೆರೆ, ನಾಗರಾಳ ಕೆರೆ, ನಿಡೋಣಿ ಕೆರೆ, ಕಾಖಂಡಕಿ == ಸಂರಕ್ಷಿತ ಅರಣ್ಯ ಪ್ರದೇಶಗಳು == ಸಂರಕ್ಷಿತ ಅರಣ್ಯ ಪ್ರದೇಶ, ಕಂಬಾಗಿ ಸಂರಕ್ಷಿತ ಅರಣ್ಯ ಪ್ರದೇಶ, ನಿಡೋಣಿ ಸಂರಕ್ಷಿತ ಅರಣ್ಯ ಪ್ರದೇಶ, ಸಂಗಾಪುರ(ಎಸ್.ಹೆಚ್) == ಹಾಲು ಉತ್ಪಾದಕ ಸಹಕಾರಿ ಸಂಘ == ಹಾಲು ಉತ್ಪಾದಕ ಸಹಕಾರಿ ಸಂಘಗಳು : ಬಬಲೇಶ್ವರ, ಅರ್ಜುಣಗಿ, ಬೆಳ್ಳುಬ್ಬಿ, ಚಿಕ್ಕಗಲಗಲಿ, ಹಲಗಣಿ, ದೇವರಗೆಣ್ಣೂರ, ಹಂಗರಗಿ, ಹೆಬ್ಬಾಳಟ್ಟಿ, ಹೊಸೂರ, ಜೈನಾಪುರ, ಜಂಬಗಿ ಹೆಚ್, ಕಾತ್ರಾಳ, ಕಾರಜೋಳ, ಕಾಖಂಡಕಿ, ಕುಮಠೆ, ನಾಗರಾಳ, ಲಿಂಗದಳ್ಳಿ, ನಿಡೋಣಿ, ಯಕ್ಕುಂಡಿ == ಕೈಗಾರಿಕಾ ಪ್ರದೇಶ == ಕೈಗಾರಿಕಾ ಪ್ರದೇಶ(ಕೆ.ಎಚ್.ಬಿ), ಬಬಲೇಶ್ವರ == ಸರಕಾರಿ ವಾಹನ ನಿಲ್ದಾಣ == ಸರಕಾರಿ ವಾಹನ ನಿಲ್ದಾಣ, ಬಬಲೇಶ್ವರ == ದಿಕ್ಕುಗಳು == == ಉಲ್ಲೇಖಗಳು ==