ಬಸರಕೋಡ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿದೆ. == ಭೌಗೋಳಿಕ == ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦" ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - ೩೫°-೪೨° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - ೧೮°-೨೮° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ. == ಜನಸಂಖ್ಯೆ == ಗ್ರಾಮದಲ್ಲಿ ಜನಸಂಖ್ಯೆ ಸುಮಾರು 2500 ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ,, ಸೇಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ಧರ್ಮ == ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆ == ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ. == ಧಾರ್ಮಿಕ ಕೇಂದ್ರ == ಅಮರ ಶಿಲ್ಪಿ ಜಕನಾಚಾರಿಯಿಂದ 1805ರಲ್ಲಿ ಮಲ್ಲಿಕಾರ್ಜುನ ಮತ್ತು ಮೂರು ಲಿಂಗ ದೇವಾಲಯಗಳ ನಿರ್ಮಾಣವಾಗಿದೆ ಎನ್ನುತ್ತಾರೆ. == ದೇವಾಲಯ == ಶ್ರೀ ಪವಾಡ ಬಸವೇಶ್ವರ ದೇವಾಲಯ ಶ್ರೀ ಮಹಾಲಕ್ಷ್ಮಿ ದೇವಾಲಯ ಶ್ರೀ ದುರ್ಗಾದೇವಿ ದೇವಾಲಯ ಶ್ರೀ ಮಲ್ಲಿಕಾರ್ಜುನ ದೇವಾಲಯ ಶ್ರೀ ಬಸವೇಶ್ವರ ದೇವಾಲಯ ಶ್ರೀ ವೆಂಕಟೇಶ್ವರ ದೇವಾಲಯ ಶ್ರೀ ಪಾಂಡುರಂಗ ದೇವಾಲಯ ಶ್ರೀ ಹಣಮಂತ ದೇವಾಲಯ == ಮಸೀದಿ == ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಕಾಲುವೆ == ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಮುಳವಾಡ ಏತ ನೀರಾವರಿ ಕಾಲುವೆ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ. == ಕೃಷಿ ಮತ್ತು ತೋಟಗಾರಿಕೆ == ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ. == ಆರ್ಥಿಕತೆ == ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ. == ಬೆಳೆ == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಸಸ್ಯ == ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ. == ಪ್ರಾಣಿ == ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ. == ಹಬ್ಬ == ಪ್ರತಿವರ್ಷಕ್ಕೆ ಮುರು ಬಾರಿ ಶ್ರೀ ಪವಾಡ ಬಸವೇಶ್ವರ ಜಾತ್ರೆ ನೆಡೆಯುವದು ಹಾಗು ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಸರಕೋಡ ವಿ.ಹೆಚ್.ಪಿ.ಎಸ್, ಬಸರಕೋಡ ಎಮ್.ಎಸ್.ಬಿ.ಎನ್. ಹಿರಿಯ ಪ್ರಾಥಮಿಕ ಶಾಲೆ, ಬಸರಕೋಡ ಎಸ್.ಬಿ.ಪಿ. ಪ್ರೌಢ ಶಾಲೆ, ಬಸರಕೋಡ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ, ಬಸರಕೋಡ ಎಸ್.ವಿ. ಇನ್ಪೋಟೇಕ್ ಗಣಕಯಂತ್ರ ಶಿಕ್ಷಣ ಮತ್ತು ತರಬೇತಿ ಕೇಂದ್ರ, ಬಸರಕೋಡ == ಸಾಕ್ಷರತೆ == ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ಗ್ರಾಮವು ಬಿಜಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. == ಬ್ಯಾಂಕುಗಳು == ಎಸ್.ಬಿ.ಐ.ಬ್ಯಾಂಕ್, ಬಸರಕೋಡ == ಗ್ರಾಮ ಪಂಚಾಯತಿ == ಗ್ರಾಮ ಪಂಚಾಯತಿ, ಬಸರಕೋಡ == ತಾಲ್ಲೂಕು ಪಂಚಾಯತ ಚುನಾವಣಾ ಕ್ಷೇತ್ರ == ಬಸರಕೋಡ ಗ್ರಾಮವು ಮುದ್ದೇಬಿಹಾಳ ತಾಲ್ಲೂಕು ಪಂಚಾಯತ ಚುನಾವಣಾ ಕ್ಷೇತ್ರವಾಗಿದೆ. == ಜಿಲ್ಲಾ ಪಂಚಾಯತ ಚುನಾವಣಾ ಕ್ಷೇತ್ರ == ಬಸರಕೋಡ ಗ್ರಾಮವು ಮುದ್ದೇಬಿಹಾಳ ಜಿಲ್ಲಾ ಪಂಚಾಯತ ಚುನಾವಣಾ ಕ್ಷೇತ್ರವಾಗಿದೆ. == ದೂರವಾಣಿ ವಿನಿಮಯ ಕೇಂದ್ರ == ದೂರವಾಣಿ ವಿನಿಮಯ ಕೇಂದ್ರ, ಬಸರಕೋಡ == ಅಂಚೆ ಸೂಚ್ಯಂಕ ಸಂಖ್ಯೆ ಮತ್ತು ಅಂಚೆ ಕಚೇರಿ == ಢವಳಗಿ - 586116 == ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ == ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಬಸರಕೋಡ == ಕೆರೆ == ಬಸರಕೋಡ ಕೆರೆ == ಪವನ ವಿದ್ಯುತ್ ಘಟಕ == ಸುಜಲಾನ್ ಪವನ ವಿದ್ಯುತ್ ಘಟಕ, ಬಸರಕೋಡ == ಪ್ರಾಥಮಿಕ ಪಶು ಚಿಕಿತ್ಸಾಲಯ == ಪ್ರಾಥಮಿಕ ಪಶು ಚಿಕಿತ್ಸಾಲಯ, ಬಸರಕೋಡ