ಬಿ ಇ ಸಿ (ಬಸವೇಶ್ವರ ಇಂಜಿನಿಯರಿಂಗ ಕಾಲೇಜ) ಅಥವಾ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯವು ಬಾಗಲಕೋಟ ನಗರದ ವಿದ್ಯಾಗಿರಿಯಲ್ಲಿದೆ. ಇದು ೧೯೬೩ರಲ್ಲಿ ಸ್ಥಾಪಿತವಾಗಿದ್ದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ದಿಂದ ಮಾನ್ಯತೆ ಹೊಂದಿದೆ. ೨೦೦೭ದಲ್ಲಿ ಸ್ವಾಯತ್ತತೆ ಹೊಂದಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ನವದೆಹಲಿ)ಯು ಮಾನ್ಯತೆ ನೀಡಿದೆ .ಅದರಂತೆ ರಾಷ್ಟ್ರೀಯ ಮಾನ್ಯತಾ ಮಂಡಳಿಯು ಕೊಡ ಮಾನ್ಯತೆ ನೀಡಿದೆ. ಪ್ರಸ್ತುತ ೧೦ ಪದವಿ ಹಾಗೂ ೭ ಸ್ನಾತಕೋತ್ತರ ವಿಭಾಗಗಳು ಕಾರ್ಯನಿರ್ವಹಿಸುತ್ತವೆ. == ಚರಿತ್ರೆ == ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯವು ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದಿಂದ ೧೯೬೩ರಲ್ಲಿ ಸ್ಥಾಪಿಸಲ್ಪಟ್ಟಿದೆ. ಇದರ ಕೇಂದ್ರ ಕಛೇರಿ ಹಳೆ ಬಾಗಲಕೋಟ ನಗರದಲ್ಲಿದೆ. == ವಿಭಾಗಗಳು == ವಾಹನ ಎಂಜಿನಿಯರಿಂಗ್ ಜೈವಿಕ ತಂತ್ರಜ್ಞಾನ ಎಂಜಿನಿಯರಿಂಗ್ ಸಿವಿಲ್ ಎಂಜಿನಿಯರಿಂಗ್ ಗಣಕಯಂತ್ರ ವಿಜ್ಞಾನ ಎಂಜಿನಿಯರಿಂಗ್ ಮಾಹಿತಿ ತಂತ್ರಜ್ಞಾನ ಎಂಜಿನಿಯರಿಂಗ್ ಉಪಕರಣ ತಂತ್ರಜ್ಞಾನ ಎಂಜಿನಿಯರಿಂಗ್ ಕೈಗಾರಿಕಾ ಮತ್ತು ನಿರ್ಮಾಣ ಎಂಜಿನಿಯರಿಂಗ್ ವಿದ್ಯುತ್ ಮತ್ತು ವಿದುನ್ಮಾನ ಎಂಜಿನಿಯರಿಂಗ್ ವಿದ್ಯುನ್ಮಾನ ಮತ್ತು ಸಂವಹನ ಎಂಜಿನಿಯರಿಂಗ್ ಯಾಂತ್ರಿಕ ಎಂಜಿನಿಯರಿಂಗ್ == ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ , ಬಾಗಲಕೋಟ == ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘವು ೧೯೦೬ದಲ್ಲಿ ಶ್ರೀ ಬಿಳ್ಳೂರು ಗುರುಬಸವ ಮಹಾಸ್ವಾಮಿಜಿಗಳಿಂದ ಸ್ಥಾಪಿಸಲ್ಪಟ್ಟಿದೆ. ಸಂಘವು ೨೦೦೬ರಲ್ಲಿ ತನ್ನ ಶತಮಾನೋತ್ಸವವನ್ನು ಆಚರಿಸಿತು. == ಆಡಳಿತ == ಪ್ರಸ್ತುತ ಶ್ರೀ ವೀರಣ್ಣ ಚರಂತಿಮಠರು ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿದ್ದಾರೆ. == ಆವರಣ == ಮಹಾವಿದ್ಯಾಲಯವು ೧೫೦ ಎಕರೆ ವಿಶಾಲವಾದ ಆವರಣ ಹೊಂದಿದೆ. ಆವರಣದಲ್ಲಿ ಕ್ರಿಕೇಟ್, ಟೆನ್ನಿಸ್, ಕಾಲ್ಚಂಡು, ಒಳಾಂಗಣ ಮೈದಾನ ಇದೆ. == ಗ್ರಂಥಾಲಯ == ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವು ಅತ್ಯುನ್ನತ ಡಿಜಿಟಲ್ ಗ್ರಂಥಾಲಯ ಮತ್ತು ಸಾವಿರಾರು ಎಲ್ಲ ವಿಭಾಗದ ಪುಸ್ತಕಗಳನ್ನು ಹೊಂದಿದೆ. ವೈಜ್ಞಾನಿಕ ಹಾಗೂ ತಾಂತ್ರಿಕ ದೈನಿಕ, ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳು ಉಂಟು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ನಿಯತಕಾಲಿಕಗಳು ಸಿಗುತ್ತವೆ. == ಪ್ರವೇಶ == ದ್ವಿತೀಯ ಪಿಯುಸಿ (೧೦+೨) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಅದರಂತೆ ಬಿ.ಎಸ್ಸಿ , ಡಿಪ್ಲೊಮಾ, ಜಿಟಿಟಿಸಿ, ಸಿಬಿಎಸ್ಸಿ (೧೦+೨) ಮತ್ತು ಐಸಿಎಸ್ಸಿ (೧೦+೨) ವಿದ್ಯಾರ್ಥಿಗಳಿಗೂ ಪ್ರವೇಶವಿದೆ. == ವಿದ್ಯಾರ್ಥಿವೇತನ == ಅರ್ಹತೆ ವಿದ್ಯಾರ್ಥಿವೇತನ ರಕ್ಷಣಾ ವಿದ್ಯಾರ್ಥಿವೇತನ ಜಿಂದಾಲ ವಿದ್ಯಾರ್ಥಿವೇತನ ಇನ್ಪೊಸಿಸ್ ವಿದ್ಯಾರ್ಥಿವೇತನ ಎಸ್.ಸಿ/ಎಸ್.ಟಿ ವಿದ್ಯಾರ್ಥಿವೇತನ == ವಿದ್ಯಾರ್ಥಿನಿಲಯಗಳು == ನೇತಾಜಿ ವಿದ್ಯಾರ್ಥಿನಿಲಯ ವಿಶ್ವೇಶ್ವರಯ್ಯ ವಿದ್ಯಾರ್ಥಿನಿಲಯ ವಿದ್ಯಾರ್ಥಿನಿಯರ ಹಾಸ್ಟೆಲ್ == ಜೀವನ ಮಾರ್ಗದರ್ಶನ ಕೇಂದ್ರ == ಟಿ ಸಿ ಎಸ್ (ಟಾಟಾ ಕನ್ಸಲ್ಟನ್ಸಿ ಸರ್ವಿಸಸ್), ಮೈಂಡ್ ಟ್ರೀ, ಐ ಗೇಟ್, ಎಂಪಾಸಿಸ್ ಹಾಗೂ ಐಬಿಎಮ್ ಮುಂತಾದ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಕಂಪನಿಗಳು ಕ್ಯಾಂಪಸ್ ಸಂದರ್ಶನ ನಡುಸುತ್ತವೆ. == ಬಾಹ್ಯ ಸಂಪರ್ಕಗಳು == ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಅಧಿಕೃತ ಅಂತರಜಾಲ ತಾಣ