ಬಿ. ನಾಗೇಂದ್ರ ಅವರು ಭಾರತೀಯ ರಾಜಕಾರಣಿಯಾಗಿದ್ದು, ಪ್ರಸ್ತುತ ೨೯ ಮೇ ೨೦೨೩ ರಿಂದ ಕರ್ನಾಟಕ ಸರ್ಕಾರದಲ್ಲಿ ಯುವ ಸಬಲೀಕರಣ, ಕ್ರೀಡೆ ಮತ್ತು ಬುಡಕಟ್ಟು ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬಳ್ಳಾರಿ ಮತ್ತು ಕೂಡ್ಲಿಗಿ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ. == ಶಿಕ್ಷಣ == ಅವರು ೧೯೯೩ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಬಳ್ಳಾರಿಯ ವೀರಶೈವ ಕಾಲೇಜಿನಿಂದ ಬಿ.ಕಾಂ. ಪದವಿ ಯನ್ನು ಪಡೆದರು. == ವೃತ್ತಿ == ಇವರು ಅಭ್ಯರ್ಥಿಯಾಗಿ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಬಳ್ಳಾರಿ ಜಿಲ್ಲೆಯಿಂದ ಬಳ್ಳಾರಿ ಗ್ರಾಮಾಂತರ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ೨೦೦೮ ರಿಂದ ೨೦೧೮ ರವರೆಗೆ ಕ್ರಮವಾಗಿ ಬಿಜೆಪಿ ಮತ್ತು ಸ್ವತಂತ್ರ ಅಭ್ಯರ್ಥಿಯಾಗಿ ಕೂಡ್ಲಿಗಿಯಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಇವರು ಗಣಿಗಾರಿಕೆ ಬ್ಯಾರನ್ ಗಾಲಿ ಜನಾರ್ದನ ರೆಡ್ಡಿ ಅವರ ನಿಕಟ ಸಹಾಯಕರಾಗಿದ್ದರು. ಬಿ ನಾಗೇಂದ್ರ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮಾಂತರವನ್ನು ಪ್ರತಿನಿಧಿಸುವ ಬಿಜೆಪಿ ನಾಯಕ ಮತ್ತು ಕರ್ನಾಟಕದ ಮಾಜಿ ಸಾರಿಗೆ ಸಚಿವರಾದ ಬಿ ಶ್ರೀರಾಮುಲು ಅವರನ್ನು 29,500 ಮತಗಳಿಂದ ಸೋಲಿಸಿದರು. == ಚುನಾವಣಾ ಅಂಕಿಅಂಶಗಳು == == ಉಲ್ಲೇಖಗಳು == == ಬಾಹ್ಯ ಕೊಂಡಿಗಳು == ಕರ್ನಾಟಕ ವಿಧಾನಸಭೆ