ಬಿಜ್ಜರಗಿ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನಲ್ಲಿದೆ. == ಭೌಗೋಳಿಕ == ಗ್ರಾಮವು ಭೌಗೋಳಿಕವಾಗಿ 16* 32' 10" ಉತ್ತರ ಅಕ್ಷಾಂಶ ಮತ್ತು 75* 31' 19" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಜನಸಂಖ್ಯೆ == ಗ್ರಾಮದಲ್ಲಿ ಜನಸಂಖ್ಯೆ ಸುಮಾರು 8073 ಇದೆ. ಅದರಲ್ಲಿ 4218 ಪುರುಷರು ಮತ್ತು 3855 ಮಹಿಳೆಯರು ಇದ್ದಾರೆ. == ಹವಾಮಾನ == ಬೇಸಿಗೆಕಾಲ - ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 42 ° ವರೆಗೆ(ಎಪ್ರೀಲನಲ್ಲಿ), ಅತೀ ಕಡಿಮೆ ಅಂದರೆ 9 ° ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - 35 ° - 42 ° ಮಳೆಗಾಲ - 18 ° - 32 ° ಚಳಿಗಾಲ - 15 ° - 28 ° ಮಳೆ - ಪ್ರತಿ ವರ್ಷ 300 - 600ಮಿಮಿ ಗಳಸ್ಟು ಆಗಿತ್ತದೆ == ಆಹಾರ == ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ಗಾಂಧಿ ಟೋಪಿ ಅಥವಾ ಬಿಳಿ/ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ. ಮಹಿಳೆಯರು ಇಲಕಲ್ಲ ಸೀರೆಯನ್ನು ಧರಿಸುತ್ತಾರೆ. == ಕಲೆ == ಲಾವಣಿ ಪದ, ಡೊಳ್ಳಿನ ಪದ, ಗೀಗೀ ಪದ, ಹಂತಿ ಪದ, ಜಾನಪದ, ಡೊಳ್ಳು ಕುಣಿತ, ಕರಡಿ ಮಜಲು, ಮೊಹರಮ ಹೆಜ್ಜೆ ಕುಣಿತ, ಹರಿ ಭಜನೆ ಮತ್ತು ಶಿವ ಭಜನೆ ಇತ್ಯಾದಿ ಗ್ರಾಮದ ಕಲೆಯಾಗಿದೆ. == ಧರ್ಮ == ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. == ದೇವಾಲಯ == ಶ್ರೀ ಭೂತಾಲಿಸಿದ್ಧ ದೇವಾಲಯ ಶ್ರೀ ಮಾಣೀಕೇಶ್ವರಿ ದೇವಾಲಯ ಶ್ರೀ ಮಹಾಲಕ್ಷ್ಮಿ ದೇವಾಲಯ ಶ್ರೀ ದುರ್ಗಾದೇವಿ ದೇವಾಲಯ ಶ್ರೀ ಮಲ್ಲಿಕಾರ್ಜುನ ದೇವಾಲಯ ಶ್ರೀ ಬಸವೇಶ್ವರ ದೇವಾಲಯ ಶ್ರೀ ಹಣಮಂತ ದೇವಾಲಯ ಶ್ರೀ ಮಹಾದೇವ ದೇವಾಲಯ ಶ್ರೀ ವೀರಭದ್ರೇಶ್ವರ ದೇವಾಲಯ ಶ್ರೀ ಬುಳ್ಳಣ್ಣಸಿದ್ದೇಶ್ವರ ದೇವಾಲಯ == ಮಸೀದಿ == ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ಹಬ್ಬ == ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಕೃಷಿ == ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು 75% ಜನರು ಕೆಲಸ ಮಾಡುತ್ತಾರೆ. == ನೀರಾವರಿ == ಗ್ರಾಮದಲ್ಲಿ ಬಹುಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ(ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 70% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಆಡು(ಮೇಕೆ) ಸಾಕಾಣಿಕೆ ಮತ್ತು ಕುರಿ ಸಾಕಾಣಿಕೆ ಉಪಕಸುಬುಗಳಾಗಿವೆ. == ಬೆಳೆ == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಸಸ್ಯ == ಆಲದ ಮರ, ಬೇವಿನ ಮರ, ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ. == ಪ್ರಾಣಿ == ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ ಮತ್ತು ಕೋಗಿಲೆ ಇತ್ಯಾದಿ. == ಆರ್ಥಿಕತೆ == ಗ್ರಾಮದ ಆರ್ಥಿಕ ಪರಿಸ್ಥಿತಿ ಮಧ್ಯಮ ತರಗತಿಯಲ್ಲಿದೆ. == ಶಿಕ್ಷಣ == ಸರಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಕ ಶಾಲೆ, ಬಿಜ್ಜರಗಿ ಸರಕಾರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ, ಬಿಜ್ಜರಗಿ ಮಾಣಿಕೇಶ್ವರಿ ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆ, ಬಿಜ್ಜರಗಿ ಶ್ರೀ ಸಿದ್ಧೇಶ್ವರ ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆ, ಬಿಜ್ಜರಗಿ ಬಿ.ಎ.ಕೆ. ಪ್ರೌಢ ಶಾಲೆ, ಬಿಜ್ಜರಗಿ ಬಿ.ಎ.ಕೆ. ಪದವಿ ಪೂರ್ವ ಮಹಾವಿದ್ಯಾಲಯ, ಬಿಜ್ಜರಗಿ ಬಿ.ಎ.ಕೆ. ಕಲಾ ಮಹಾವಿದ್ಯಾಲಯ, ಬಿಜ್ಜರಗಿ == ಪ್ರಸಿದ್ಧ ವ್ಯಕ್ತಿಗಳು == ಶ್ರೀ ಸಿದ್ಧೇಶ್ವರ ಸ್ವಾಮಿಜಿಗಳು ಭಾಸ್ಕರಾಚಾರ್ಯಾ-೩ ಶ್ರೀ ಸೋಮಣ್ಣ ಧನಗೊಂಡ ಖ್ಯಾತ ಡೊಳ್ಳಿನ ಹಾಡುಗಾರರು == ಸಾಕ್ಷರತೆ == ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು 75%. ಅದರಲ್ಲಿ 85% ಪುರುಷರು ಹಾಗೂ 68% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. == ಗ್ರಾಮ ಪಂಚಾಯತಿ == ಗ್ರಾಮದಲ್ಲಿ ಗ್ರಾಮ ಪಂಚಾಯತಿ ಕಾರ್ಯಾಲಯವಿದೆ. == ಅಂಚೆ ಕಚೇರಿ == ಗ್ರಾಮದಲ್ಲಿ ಅಂಚೆ ಕಚೇರಿಯಿದೆ. ಅಂಚೆ ಸಂಖ್ಯೇತ - 586114 == ಉತ್ಪಾದಕ ಸಹಕಾರಿ ಸಂಘ == ಗ್ರಾಮದಲ್ಲಿ ಉತ್ಪಾದಕ ಸಹಕಾರಿ ಸಂಘವಿದೆ. == ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ == ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವಿದೆ. == ಉಚಿತ ಪ್ರಸಾದನಿಲಯ == ಗ್ರಾಮದಲ್ಲಿ ಉಚಿತ ಪ್ರಸಾದನಿಲಯವಿದೆ. == ದೂರವಾಣಿ ವಿನಿಮಯ ಕೇಂದ್ರ == ಗ್ರಾಮದಲ್ಲಿ ದೂರವಾಣಿ ವಿನಿಮಯ ಕೇಂದ್ರವಿದೆ. == ವಿದ್ಯುತ್ ಪರಿವರ್ತನಾ ಕೇಂದ್ರ == 33 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಬಿಜ್ಜರಗಿ == ಉಲ್ಲೇಖಗಳು ==