ಯತ್ನಾಳ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನಲ್ಲಿದೆ. == ಭೌಗೋಳಿಕ == ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦" ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - ೩೫°-೪೨° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - ೧೮°-೨೮° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ. == ಜನಸಂಖ್ಯೆ == ಗ್ರಾಮದಲ್ಲಿ ಜನಸಂಖ್ಯೆ ಸುಮಾರು 2163 ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ಧರ್ಮ == ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆ == ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ. == ದೇವಾಲಯ == ಶ್ರೀ ಮಹಾಲಕ್ಷ್ಮಿ ದೇವಾಲಯ ಶ್ರೀ ದುರ್ಗಾದೇವಿ ದೇವಾಲಯ ಶ್ರೀ ಮಲ್ಲಿಕಾರ್ಜುನ ದೇವಾಲಯ ಶ್ರೀ ಬಸವೇಶ್ವರ ದೇವಾಲಯ ಶ್ರೀ ವೆಂಕಟೇಶ್ವರ ದೇವಾಲಯ ಶ್ರೀ ಪಾಂಡುರಂಗ ದೇವಾಲಯ ಶ್ರೀ ಹಣಮಂತ ದೇವಾಲಯ == ಮಸೀದಿ == ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಕೃಷಿ ಮತ್ತು ತೋಟಗಾರಿಕೆ == ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ. == ಆರ್ಥಿಕತೆ == ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ. == ಬೆಳೆ == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಸಸ್ಯ == ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ. == ಪ್ರಾಣಿ == ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ. == ಹಬ್ಬ == ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಯತ್ನಾಳ ಸರಕಾರಿ ಪ್ರೌಢ ಶಾಲೆ(), ಯತ್ನಾಳ == ಹಾಲು ಉತ್ಪಾದಕ ಸಹಕಾರಿ ಸಂಘ == ಗ್ರಾಮದಲ್ಲಿ ಕೆ.ಎಮ್.ಎಫ್.(ನಂದಿನಿ)(ಕರ್ನಾಟಕ ಹಾಲು ಒಕ್ಕೂಟ)ನ ಸಹಾಯದೊಂದಿಗೆ ಹಾಲು ಉತ್ಪಾದಕ ಸಹಕಾರಿ ಸಂಘ ಸ್ಥಾಪಿತವಾಗಿದೆ. ನಂದಿನಿ ಮುಖ್ಯ ಕಾರ್ಯಾಲಯವು ವಿಜಯಪುರ ನಗರದ ಹತ್ತಿರವಿರುವ ಭೂತನಾಳ ಗ್ರಾಮದಲ್ಲಿದೆ. == ದೂರವಾಣಿ ಸಂಕೇತ == ಬಿ.ಎಸ್.ಎನ್.ಎಲ್. ಮುಖ್ಯ ದೂರವಾಣಿ ಕೇಂದ್ರವು ವಿಜಯಪುರ ಗ್ರಾಮದಲ್ಲಿದೆ. ವಿಜಯಪುರ - 0835೨ == ಅಂಚೆ ಸೂಚ್ಯಂಕ ಸಂಖ್ಯೆ == ಮುಖ್ಯ ಅಂಚೆ ಕಚೇರಿಯು ವಿಜಯಪುರ ಗ್ರಾಮದಲ್ಲಿದೆ. ಉಪ ಅಂಚೆ ಕಚೇರಿಯು ಗ್ರಾಮದಲ್ಲಿದೆ. ವಿಜಯಪುರ - 586104 == ಸಾರಿಗೆ == ಗ್ರಾಮವು ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು 27 ಕಿ.ಮೀ. ದೂರವಿದ್ದು, ಗ್ರಾಮದ ರಸ್ತೆಯು ಜತ್ತ - ವಿಜಯಪುರ ಮಾರ್ಗವಾಗಿ ವಿಜಯಪುರ ನಗರವನ್ನು ತಲಪುತ್ತದೆ. == ಸಾಕ್ಷರತೆ == ಗ್ರಾಮದ ಸಾಕ್ಷರತೆ(2011) ಪ್ರಮಾಣವು ಸುಮಾರು 66.37%ರಷ್ಟಿದ್ದು. ಅದರಲ್ಲಿ 76.37% ಪುರುಷರು ಹಾಗೂ 55.63% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ಗ್ರಾಮವು ಬಬಲೇಶ್ವರ ವಿಧಾನ ಸಭಾ ಕ್ಷೇತ್ರ ಮತ್ತು ವಿಜಯಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಗ್ರಾಮದ ಪ್ರಮುಖ ರಾಜಕೀಯ ಧುರೀಣರಾದ ಶ್ರೀ ಬಸನಗೌಡ ರಾಮನಗೌಡ ಪಾಟೀಲ(ಯತ್ನಾಳ)ರವರು ಮಾಜಿ ಸಂಸದರು, ಕೇಂದ್ರ ಮಂತ್ರಿಗಳು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿದ್ದರು. ಬಿಜಾಪುರ ಕರ್ನಾಟಕ