ಯರಗಟ್ಟಿ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ. ಯರಗಟ್ಟಿ ಗ್ರಾಮವು ಕರ್ನಾಟಕ ರಾಜ್ಯದ ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲ್ಲೂಕಿನಲ್ಲಿದೆ. ಯರಗಟ್ಟಿ ಗ್ರಾಮವು ಜಿಲ್ಲಾ ಕೇಂದ್ರ ಬೆಳಗಾವಿದಿಂದ ಸುಮಾರು ೬೫ ಕಿ.ಮಿ. ಇದೆ. ಇದು ಬೆಳಗಾವಿ ಬಾಗಲಕೋಟ ಜೀಲ್ಲೆಗಳ ಹಾಗೂ ಗೋಕಾಕ ಸವದತ್ತಿ ತಾಲೂಕುಗಳನ್ನು ಸೇರಿಸುವ ಸಂಪರ್ಕಿಸಿಸುವ ಹೆದ್ದಾರಿ ಗಳನ್ನು ಹೊಂದಿದೆ. == ಚರಿತ್ರೆ == ಗ್ರಾಮದಲ್ಲಿ ಒಳ್ಳೆಯ ಶಿಕ್ಷಣ ಕೇಂದ್ರ, ವ್ಯಾಪಾರ ಕೇಂದ್ರ, ಹಣಕಾಸು ಕೇಂದ್ರ, ಸಾರಿಗೆ ಕೇಂದ್ರ, ನೆಮ್ಮದಿ ಕೇಂದ್ರ, ಉಪ ತಹಶಿಲ್ದಾರರ ಕಚೇರಿ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಅಂಚೆ ಕಚೇರಿ, ಸಿಂಡಿಕೇಟ್ ಬ್ಯಾಂಕ್ ಹಾಗೂ ಇತರೆ ಕಚೇರಿಗಳಿವೆ. == ದೇವಾಲಯಗಳು == ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ಗಣೇಶ ಪಾಂಡುರಂಗ - ವಿಠ್ಠಲ ದೇವಸ್ಥಾನ ಹಾಗೂ ಶ್ರೀ ಕಾಳಿಕಾ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ. == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಗ್ರಾಮದ ಪ್ರತಿಶತ ೭೫ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಹಬ್ಬಗಳು == ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ),ಶ್ರೀ ಗಣೇಶ ಚತುಥಿ೯ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ ಇವೆ. == ಆರೋಗ್ಯ == ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. == ಆರಕ್ಷಕ (ಪೋಲಿಸ್) ಠಾಣೆ == ಗ್ರಾಮದಲ್ಲಿ ಪೋಲಿಸ್ ಠಾಣೆ ಇದೆ.