ಯರಗಲ್ಲ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿದೆ. == ಭೌಗೋಳಿಕ == ಗ್ರಾಮವು ಭೌಗೋಳಿಕವಾಗಿ ೧೬* ೧೪' ೪" ಉತ್ತರ ಅಕ್ಷಾಂಶ ಮತ್ತು ೭೬* ೯' ೨೭" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೆಸಿಗೆ-ಚಳಿಗಾಲ- ಜಿಲ್ಲೆಯ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆ - ೩೫°-೪೨° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - ೧೮°-೨೮° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ. == ಜನಸಂಖ್ಯೆ == ಗ್ರಾಮದಲ್ಲಿ ಜನಸಂಖ್ಯೆ ಸುಮಾರು ೨,೫೦೦ ಇದೆ. ಅದರಲ್ಲಿ ೧೩೦೦ ಪುರುಷರು ಮತ್ತು ೧೨೦೦ ಮಹಿಳೆಯರು ಇದ್ದಾರೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ದೇವಾಲಯಗಳು == ಶ್ರೀ ಘನಮಠೇಶ್ವರ ದೇವಾಲಯ ಶ್ರೀ ಮಹಾಲಕ್ಷ್ಮಿ ದೇವಾಲಯ ಶ್ರೀ ದುರ್ಗಾದೇವಿ ದೇವಾಲಯ ಶ್ರೀ ಬಸವೇಶ್ವರ ದೇವಾಲಯ ಶ್ರೀ ಹಣಮಂತ ದೇವಾಲಯ == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ಧರ್ಮಗಳು == ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆಗಳು == ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ. == ನೀರಾವರಿ == ಗ್ರಾಮದ ಪ್ರತಿಶತ ೯೦ % ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಹಬ್ಬಗಳು == ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಯರಗಲ್ಲ == ನೀರಾವರಿ == ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಕಾಲುವೆಗಳು == ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಎಡದಂಡೆ ಕಾಲುವೆ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ. == ಬೆಳೆಗಳು == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು , ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಹಬ್ಬಗಳು == ಪ್ರತಿವರ್ಷ ಶ್ರೀ ಘನಮಠೇಶ್ವರ ಜಾತ್ರೆ, ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ರಾಜಕೀಯ == ಯರಗಲ್ಲ ಗ್ರಾಮವು ಮುದ್ದೇಬಿಹಾಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. == ಪ್ರಮುಖ ವ್ಯಕ್ತಿಗಳು == ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಉಪಕುಲಪತಿಗಳಾಗಿ ಹೆಚ್.ಬಿ.ವಾಲಿಕಾರರವರು ಸೇವೆ ಸಲ್ಲಿಸಿದ್ದಾರೆ. ಹೆಚ್.ಬಿ.ವಾಲಿಕಾರರವರ ಬಗ್ಗೆ ಹೆಚ್ಚಿನ ಮಾಹಿತಿ 2013-04-26 ವೇಬ್ಯಾಕ್ ಮೆಷಿನ್ ನಲ್ಲಿ. ಹೆಚ್.ಬಿ.ವಾಲಿಕಾರರವರ ಬಗ್ಗೆ ಹೆಚ್ಚಿನ ಮಾಹಿತಿ ವಿಕಿಪಿಡಿಯಾದಲ್ಲಿ ಹೆಚ್.ಬಿ.ವಾಲಿಕಾರರವರ ಬಗ್ಗೆ ಹೆಚ್ಚಿನ ಮಾಹಿತಿ ಕನ್ನಡ ವಿಕಿಪಿಡಿಯಾದಲ್ಲಿ