ಯರಝರಿ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿದೆ. == ಭೌಗೋಳಿಕ == ಯರಝರಿ ಗ್ರಾಮವು ಭೌಗೋಳಿಕವಾಗಿ 16°* 18' 31" ಉತ್ತರ ಅಕ್ಷಾಂಶ ಮತ್ತು 76°* 4' 7" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೆಸಿಗೆ-ಚಳಿಗಾಲ- ಜಿಲ್ಲೆಯ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆ - ೩೫°-೪೨° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - ೧೮°-೨೮° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ. == ಜನಸಂಖ್ಯೆ == ಯರಝರಿ ಗ್ರಾಮದಲ್ಲಿ ಜನಸಂಖ್ಯೆ ಸುಮಾರು ೨,೫೦೦ ಇದೆ. ಅದರಲ್ಲಿ ೧೩೦೦ ಪುರುಷರು ಮತ್ತು ೧೨೦೦ ಮಹಿಳೆಯರು ಇದ್ದಾರೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ಧರ್ಮಗಳು == ಯರಝರಿ ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆಗಳು == ಯರಝರಿ ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ. == ದೇವಾಲಯಗಳು == ಶ್ರೀ ಯಲ್ಲಾಲಿಂಗೇಶ್ವರ ಮಠ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ. == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಹಬ್ಬಗಳು == ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ನೀರಾವರಿ == ಯರಝರಿ ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಕಾಲುವೆಗಳು == ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ನೀರಾವರಿ ಕಾಲುವೆ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ. == ಉದ್ಯೋಗ == ಯರಝರಿ ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ. == ಬೆಳೆಗಳು == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು , ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಹಬ್ಬಗಳು == ಪ್ರತಿವರ್ಷ ಶ್ರೀ ಯಲ್ಲಾಲಿಂಗೇಶ್ವರ ಜಾತ್ರೆ, ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಶಾಲೆಯಲ್ಲಿ ೧ನೇ ತರಗತಿಯಿಂದ ೮ನೇ ತರಗತಿವರೆಗೆ ೨೦೦ರಕ್ಕೂ ಹೆಚ್ಚು ವಿದ್ಯಾರ್ಥಿಗಳ್ಳಿದ್ದಾರೆ. == ಸಾಕ್ಷರತೆ == ಯರಝರಿ ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ. == ಬ್ಯಾಂಕ್ == ಗ್ರಾಮದಲ್ಲಿ ಸಿಂಡಿಕೇಟ್ ಬ್ಯಾಂಕ್ಯಿದೆ. == ಅಂಚೆ ಕಚೇರಿ == ಗ್ರಾಮದಲ್ಲಿ ಅಂಚೆ ಕಚೇರಿಯಿದೆ. ಪಿನ್ ಕೋಡ್ - 586212 == ಗ್ರಾಮ ಪಂಚಾಯತ == ಗ್ರಾಮದಲ್ಲಿ ಗ್ರಾಮ ಪಂಚಾಯತ ಕಾರ್ಯಾಲಯವಿದೆ. == ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ == ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿತವಾಗಿದೆ. == ಹಾಲು ಉತ್ಪಾದಕ ಸಹಕಾರಿ ಸಂಘ == ಗ್ರಾಮದಲ್ಲಿ ಹಾಲು ಉತ್ಪಾದಕ ಸಹಕಾರಿ ಸಂಘ(ಕೆ.ಎಂ.ಎಫ಼್) ಇದೆ. == ಪಶು ಚಿಕಿತ್ಸಾಲಯ == ಗ್ರಾಮದಲ್ಲಿ ಪಶು ಚಿಕಿತ್ಸಾಲಯಯಿದೆ. == ರಾಜಕೀಯ == ಗ್ರಾಮವು ಮುದ್ದೇಬಿಹಾಳ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ ಚುನಾವಣಾ ಕ್ಷೇತ್ರವಾಗಿದೆ. ಯರಝರಿ ಗ್ರಾಮವು ಮುದ್ದೇಬಿಹಾಳ ವಿಧಾನ ಸಭಾ ಕ್ಷೇತ್ರ ಹಾಗೂ ವಿಜಯಪುರ ಲೋಕ ಸಭಾ ಕ್ಷೇತ್ರ ದ ವ್ಯಾಪ್ತಿಯಲ್ಲಿ ಬರುತ್ತದೆ.