ಯಶವಂತರಾಯಗೌಡ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜಕೀಯ ಧುರೀಣರು. == ಜನನ == ಯಶವಂತರಾಯಗೌಡ ಪಾಟೀಲರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಪಡನೂರ ಗ್ರಾಮದಲ್ಲಿ ಜನಿಸಿದರು. == ಶಿಕ್ಷಣ == ಪಾಟೀಲರು ಧಾರವಾಡದ ಜೆ.ಎಸ್.ಎಸ್. ಮಹಾವಿದ್ಯಾಲಯದಿಂದ ಪದವಿ ಪೂರ್ವ ಶಿಕ್ಷಣವನ್ನು ಪೂರೈಸಿದ್ದಾರೆ. == ರಾಜಕೀಯ == ಯಶವಂತರಾಯಗೌಡ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಕಾಂಗ್ರೆಸನಿಂದ ಆಯ್ಕೆಯಾಗಿದ್ದರು. ಕಾಂಗ್ರೆಸನ ಯಶವಂತಗೌಡ ಪಾಟೀಲರು ಕಳೆದ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮರಗೂರಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 2018ರಲ್ಲಿ ಪೂರ್ಣಗೊಳಿಸಿದ್ದು ಇವರ ಹೆಗ್ಗಳಿಕೆ. ಯಶವಂತರಾಯಗೌಡ ಪಾಟೀಲರು 2018ರಲ್ಲಿ ಜೆಡಿಎಸ್-ಕಾಂಗ್ರೆಸನ ಹೆಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸರಕಾರದ ಸಂಪುಟದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿದ್ದರು. == ಉಲ್ಲೇಖಗಳು ==