ರಾಂಪೂರ ಪಿ.ಎ. ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿದೆ. == ದೇವಾಲಯಗಳು == ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ. == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಹಬ್ಬಗಳು == ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.