== ಲೋಕಸಭೆ ಸಂಕ್ಷಿಪ್ತ ವಿವರ == ಲೋಕಸಭೆ ಭಾರತದ ಸಂಸತ್ತಿನ ಎರಡು ಸಭೆಗಳಲ್ಲಿ ಒಂದು (ರಾಜ್ಯಸಭೆ ಇನ್ನೊಂದು). ಲೋಕಸಭೆಯ ಸದಸ್ಯರು ಜನರಿಂದಲೇ ನೇರ ಚುನಾವಣೆಗಳಿಂದ ಚುನಾಯಿತರಾದ ವ್ಯಕ್ತಿಗಳು. ಭಾರತೀಯ ಸಂವಿಧಾನದಂತೆ ಲೋಕಸಭೆ ಗರಿಷ್ಠವಾಗಿ 552 ಸದಸ್ಯರನ್ನು ಹೊಂದಿರಬಲ್ಲುದು. ಭಾರತದ ವಿವಿಧ ರಾಜ್ಯಗಳಿಂದ ಗರಿಷ್ಠ 530 ಸದಸ್ಯರು ಚುನಾಯಿತರಾಗುತ್ತಾರೆ. 20 ಸದಸ್ಯರು ಕೇಂದ್ರಾಡಳಿತ ಪ್ರದೇಶಗಳಿಂದ ಚುನಾಯಿತರಾದರೆ, ಇನ್ನಿಬ್ಬರು ಸದಸ್ಯರನ್ನು ಆಂಗ್ಲೋ-ಇಂಡಿಯನ್ ವರ್ಗವನ್ನು ಪ್ರತಿನಿಧಿಸಲು ನೇಮಿಸುವ ಅಧಿಕಾರ ಭಾರತದ ಅಧ್ಯಕ್ಷರಿಗೆ ಉಂಟು. ಲೋಕಸಭೆಯ ಸದಸ್ಯರಾಗಲು ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಲೋಕಸಭೆಯ ಸಾಮಾನ್ಯ ಅವಧಿ ಐದು ವರ್ಷಗಳು. ಐದು ವರ್ಷಗಳ ನಂತರ ಮತ್ತೊಮ್ಮೆ ಚುನಾವಣೆಗಳು ನಡೆಯುತ್ತವೆ. ತುರ್ತು ಪರಿಸ್ಥಿತಿಯಿದ್ದಲ್ಲಿ ಚುನಾವಣೆಗಳನ್ನು ಮುಂದೂಡಬಹುದು. ಹಾಗೆಯೇ ಅವಧಿ ಮುಗಿಯುವ ಮುನ್ನ ಸರ್ಕಾರ ಬಹುಮತ ಕಳೆದುಕೊಂಡಲ್ಲಿ ಮತ್ತೊಮ್ಮೆ ಚುನಾವಣೆಗಳು ನಡೆಯಬೇಕಾಗಬಹುದು. ಪ್ರಸ್ಥುತ ಕಾರ್ಯ ನಿರ್ವಹಿಸುತ್ತಿರುವ 16 ನೆಯ ಲೋಕಸಭೆ ಮೇ, 2014 ರಲ್ಲಿ ಸೇರಿತು. ಪ್ರತಿ ರಾಜ್ಯದಿಂದ ಇರುವ ಲೋಕಸಭಾ ಸದಸ್ಯರ ಸಂಖ್ಯೆ ಆ ರಾಜ್ಯದ ಜನಸಂಖ್ಯೆಯನ್ನು ಅವಲಂಬಿಸಿರುತ್ತದೆ. ಈಗಿನ ಹಂಚಿಕೆ ಹೀಗಿದೆ (545 ಸದಸ್ಯರು: 543 ಚುನಾಯಿತ + 2 ನೇಮಿತ): == ಭಾರತದ ರಾಜ್ಯವಾರು ಲೋಕಸಭಾ ಕ್ಷೇತ್ರಗಳು == 2014 ( )ರ ಚುನಾವಣೆ ಫಲಿತಾಂಶ ಕೆಳಗೆ ಕೊಟ್ಟಿದೆ ಆಂಧ್ರದ 42 ಲೋಕಸಭಾ ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳು ತೆಲಂಗಾಣ ವ್ಯಾಪ್ತಿಯಲ್ಲಿವೆ . ಉಳಿದ ೨೫ ಸ್ಥಾನಗಳು ಹೊಸ ಆಂಧ್ರ ಪ್ರದೇಶದಲ್ಲಿವೆ. ರಾಜ್ಯಗಳು: == ಕೆಲಸ == ಲೋಕಸಭೆಯ ಸದಸ್ಯರು ಒಬ್ಬರನ್ನು "ಸಭಾಧ್ಯಕ್ಷ(ಸ್ಪೀಕರ್) ಅಥವಾ ಸಭಾಪತಿ" ಆಗಿ ಚುನಾಯಿಸುತ್ತಾರೆ. ಲೋಕಸಭೆಯ ಕಾರ್ಯ ಸರಾಗವಾಗಿ ಸಾಗುವಂತೆ ನೋಡಿಕೊಳ್ಳುವುದು ಸಭಾಧ್ಯಕ್ಷ(ಸ್ಪೀಕರ್) ರ ಮುಖ್ಯ ಕೆಲಸ. ಸಭಾಧ್ಯಕ್ಷ(ಸ್ಪೀಕರ್) ಅವರ ಅನುಪಸ್ಥಿತಿಯಲ್ಲಿ ಅವರ ಕೆಲಸವನ್ನು ಉಪಸಭಾಧ್ಯಕ್ಷ(ಡೆಪ್ಯುಟಿ ಸ್ಪೀಕರ್)ರು ನಿರ್ವಹಿಸುತ್ತಾರೆ. ಇವರಲ್ಲದೇ ಇವರಿಬ್ಬರ ಅನುಪಸ್ಥಿತಿಯಲ್ಲಿ ಸದನದ ಕಾರ್ಯಕಲಾಪಗಳನ್ನು ನಿರ್ವಹಿಸಲು ೧೦ ಹಿರಿಯ ಸದಸ್ಯರನ್ನು ಸಭಾಧ್ಯಕ್ಷರು ನೇಮಕ ಮಾಡುತ್ತಾರೆ. ಮೀರಾ ಕುಮಾರ್ ರವರು ಲೋಕ ಸಭೆಯ ಮೊದಲ ಮಹಿಳಾ ಸಭಾದ್ಯಕ್ಷರು. ಸಾಮಾನ್ಯ ದಿನಗಳಲ್ಲಿ ಲೋಕಸಭೆ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ಒಂದರವರೆಗೆ, ಮತ್ತೆ ಮಧ್ಯಾಹ್ನ ಎರಡರಿಂದ ಸಂಜೆ ಆರರ ವರೆಗೆ ಸೇರುತ್ತದೆ. ಮೊದಲ ಒಂದು ಘಂಟೆ ಪ್ರಶ್ನೋತ್ತರಗಳಿಗೆ ಮೀಸಲಾಗಿಡಲಾಗಿರುತ್ತದೆ. ಭಾರತ ಸರ್ಕಾರದ ಶಾಸಕಾಂಗದ ಇನ್ನೊಂದು ಸಭೆ ರಾಜ್ಯಸಭೆ. ಯಾವುದೇ ಮಸೂದೆಗೆ ಲೋಕಸಭೆ ಒಪ್ಪಿಗೆ ಇತ್ತ ನಂತರ ಅದು ರಾಜ್ಯಸಭೆಗೆ ಹೋಗುತ್ತದೆ. ರಾಜ್ಯಸಭೆಯೂ ಒಪ್ಪಿದ ನಂತರ ಈ ಮಸೂದೆ ಕಾಯಿದೆಯಾಗುತ್ತದೆ. ಹಣಕಾಸಿಗೆ ಸಂಬಂಧಪಟ್ಟ ಮಸೂದೆಗಳ ವಿಷಯದಲ್ಲಿ ಮಾತ್ರ ರಾಜ್ಯಸಭೆಯ ಮಂಜೂರಾತಿ ಅಗತ್ಯವಿಲ್ಲ. === ಈವರೆಗಿನ ಲೋಕಸಭಾ ಚುನಾವಣಾ ವಿವರಗಳು === ಲೋಕಸಭೆಯ ಸದಸ್ಯರನ್ನು ನಿರ್ದಿಷ್ಟ ಚುನಾವಣೆಯಲ್ಲಿ ಎಲ್ಲಾ ವಯಸ್ಕ ಮತದಾರರು ಚುನಾಯಿಸುತ್ತಾರೆ. ಲೋಕಸಭೆ ವಿಸರ್ಜನೆ ಆಗುವವರೆಗೆ (ಸಾಮಾನ್ಯವಾಗಿ ಐದು ವರ್ಷಗಳ ಅವಧಿ) ಈ ಚುನಾಯಿತ ಪ್ರತಿನಿಧಿಗಳು ಅಧಿಕಾರದಲ್ಲಿ ಇರುತ್ತಾರೆ. ನವದೆಹಲಿಯ ಸಂಸತ್ ಭವನದಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಗೊಂಡ ಸದಸ್ಯರು ಸಮಾಲೋಚನೆ ನಡೆಸಿ ಕಾನೂನುಗಳನ್ನು ರೂಪಿಸುತ್ತಾರೆ. ==== ಲೋಕಸಭಾ ಚುನಾವಣಾ ಇತಿಹಾಸ ==== ಬಣ್ಣಗಳ ಸೂಚಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇಟ್ರ ಕಳ಼ಗಂ ಭಾರತೀಯ ಜನಸಂಘ ಭಾರತೀಯ ಜನತಾ ಪಕ್ಷ ಭಾರತೀಯ ಕಮ್ಯುನಿಸ್ಟ್ ಪಕ್ಷ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ದ್ರಾವಿಡ ಮುನ್ನೇಟ್ರ ಕಳ಼ಗಂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಇಂದಿರಾ) ಜನತಾ ಪಕ್ಷ ಜನತಾ ಪಕ್ಷ (ಜಾತ್ಯತೀತ)(ಜಾತ್ಯಾತೀತ ಜನತಾದಳ ಅಲ್ಲ) ಪ್ರಜಾ ಸೋಷಿಯಲಿಸ್ಟ್ ಪಕ್ಷ ಸಮಾಜವಾದಿ ಪಕ್ಷ ಸೋಷಿಯಲಿಸ್ಟ್ ಪಕ್ಷ ಸ್ವತಂತ್ರ ಪಾರ್ಟಿ ತೆಲುಗುದೇಶಂ ಪಕ್ಷ * : 12 1 . == ಭಾರತದ ೧೬ ನೆಯ ಲೋಕಸಭೆ ವಿವರ == ರಾಜ್ಯಗಳಲ್ಲಿ ಪಡೆದ ಸ್ಥಾನಗಳು;->೨೦೧೪ ಭಾರತದ ಸಾರ್ವತ್ರಿಕ ಲೋಕಸಭಾ ಚುನಾವಣೆ ಮತ್ತು ಫಲಿತಾಂಶ ಮೇ 16, 2014ರಂದು 16ನೇ ಲೋಕಸಭಾ ಚುನಾವಣೆಗಳ ಫಲಿತಾಂಶಗಳನ್ನು ಪ್ರಕಟಿಸಲಾಯಿತು 2014 ರ ಭಾರತದ ಸಾರ್ವತ್ರಿಕ ಚುನಾವಣೆ 2014 ರ ಏಪ್ರಿಲ್ ಮತ್ತು ಮೇ ಯಲ್ಲಿ ನಡೆದು ಮೇ 16, 2014ರಂದು ಎಣಿಕೆಯಾಗಿ ,ಭಾರತೀಯ ಜನತಾ ಪಕ್ಷವು ಬಹಮತ ಪಡೆದಿದ್ದು, ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಶ್ರೀ ನರೇಂದ್ರ ಮೋದಿ ಆ ಹುದ್ದೆಯನ್ನು ತ್ಯಜಿಸಿ ದೆಹಲಿಯಲ್ಲಿ ಮೇ 26, 2014,ರಂದು ಮೊದಲೇ ನಿರ್ಧರಿಸಿದಂತೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ೪೫ ಜನ ಮಂತ್ರಿಗಳು ಅವರ ಜೊತೆ ಪ್ರಮಾಣ ವಚನ ಸ್ವೀಕರಿಸಿದರು. 2019 ಮಾರ್ಚ್ ಮೊದಲ ವಾರದಲ್ಲಿ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಗಳ ದಿನಾಂಕಗಳನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ಲೋಕಸಭೆಯ ಅವಧಿ 3 ಜೂನ್ 2019 ರಂದು ಕೊನೆಗೊಳ್ಳುತ್ತದೆ. ==== 2014 -2019 (ಮಾರ್ಚಿ) ಅಂತಿಮ ಬಲಾಬಲ ==== == ಈವರೆಗಿನ ಲೋಕಸಭೆಗಳು ಮತ್ತು ಲೋಕಸಭಾ ಚುನಾವಣೆಗಳ ಪಟ್ಟಿ == == ನೋಡಿ == ೧೫ನೆಯ ಲೋಕಸಭೆ ಭಾರತದ ಕೇಂದ್ರ ಮಂತ್ರಿ ಮಂಡಲ ೨೦೧೪ ರಾಜ್ಯಸಭೆ ೨೦೦೯ ಸಾರ್ವತ್ರಿಕ ಚುನಾವಣಾ ಫಲಿತಾಂಶ ೨೦೦೯ರ ಭಾರತದ ಸಾರ್ವತ್ರಿಕ ಚುನಾವಣೆ ಮತ್ತು ಭಾರತ ಭಾರತದ ಮುಖ್ಯಮಂತ್ರಿಗಳು == ಲೋಕಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ == ಲೋಕಸಭೆಯಲ್ಲಿ ಸ್ತ್ರೀ ಶಕ್ತಿ; ಪ್ರಜಾವಾಣಿ; : 26 ಮಾರ್ಚ್ 2019, == ಚುನಾವಣೆ ೨೦೧೯ ಸಮೀಕ್ಷೆ == ೨೦೧೯ರ ಲೋಕಸಭಾ ಚುನಾವಣೆ ಲೋಕಸಭೆ ಚುನಾವಣೆ 2019: ಪ್ರಧಾನಿ ಗದ್ದುಗೆಗೆ ಮತ್ತೆ ಏರುವರೇ ಮೋದಿ? 28 ಜನವರಿ 2019 == ಪರಿವಿಡಿ == == ಬಾಹ್ಯ ಸಂಪರ್ಕಗಳು == ಲೋಕಸಭೆ ://.. ಲೋಕಸಭೆಯ ಅಧಿಕೃತ ತಾಣ ೧೯೫೨ ರಿಂದ-೧೯೯೬ ರ ವರೆಗಿನ ಚುನಾವಣೆ [೧] == == ^ " ". ' . 19 2011. ^ " ". ' . 19 2011. ^ " ". ' . 19 2011. ^ " ". ' . 19 2011. ^ " ". ... 19 2011. ^ : :