ಲೋಕಾಪುರ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ.ಇದು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿದೆ. ಲೋಕಾಪುರ ಗ್ರಾಮವು ಜಿಲ್ಲಾ ಕೇಂದ್ರ ಬಾಗಲಕೋಟದಿಂದ ಸುಮಾರು ೩೫ ಕಿ. ಮಿ. ದೂರ ಇದೆ. == ಚರಿತ್ರೆ == ಲೋಕಾಪುರಯಲ್ಲಿ ಒಳ್ಳೆಯ ಶಿಕ್ಷಣ ಕೇಂದ್ರ, ವ್ಯಾಪಾರ ಕೇಂದ್ರ, ಹಣಕಾಸು ಕೇಂದ್ರ,ನೆಮ್ಮದಿ ಕೇಂದ್ರ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಅಂಚೆ ಕಚೇರಿ,ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಪಶು ಆರೋಗ್ಯ ಕೇಂದ್ರ, ಬ್ಯಾಂಕಗಳು ಹಾಗೂ ಇತರೆ ಕಚೇರಿಗಳಿವೆ. =='ದೇವಾಲಯಗಳು ಶ್ರೀ ಜ್ಞಾನೇಶ್ವರ ಮಠ, ಶ್ರೀ ಮಹಾಲಕ್ಷ್ಮಿದೇವಸ್ಥಾನ,ಪಾಂಡುರಂಗ - ವಿಠ್ಠಲ ದೇವಸ್ಥಾನ ಶ್ರೀ ಹಣಮಂತ ದೇವಾಲಯಗಳನ್ನು ಶ್ರೀ ಕಾಶೀಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಲೋಕೇಶ್ವರ ದೇವಸ್ಥಾನ ಶ್ರೀ ದುರ್ಗಾದೇವಿ ದೇವಸ್ಥಾನ ಇವೆ. == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಗ್ರಾಮದ ಪ್ರತಿಶತ ೫೦ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಹಬ್ಬಗಳು == ಪ್ರತಿವರ್ಷ ಶ್ರೀ ಕ್ಷೇತ್ರ ಜ್ಞಾನೇಶ್ವರ ಮಠದ ಆರಾಧನ ಮಹೋತ್ಸವ ಲಕ್ಷ್ಮೀ ಜಾತ್ರಾ ಮಹೋತ್ಸ ವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಸರಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಕ ಶಾಲೆ ಸರಕಾರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ ಪ್ರೌಡ ಶಾಲೆ ಪದವಿಪೂರ್ವ ಕಲಾ ಮಹಾವಿದ್ಯಾಲಯ ಸರ್ಕಾರಿ ಕಲಾ ಮಹಾವಿದ್ಯಾಲಯ ಕೈಗಾರಿಕಾ ತರಬೇತಿ ಕೇಂದ್ರ == ಆರಕ್ಷಕ (ಪೋಲೀಸ್) ಠಾಣೆ == ಗ್ರಾಮದಲ್ಲಿ ಪೋಲೀಸ್ ಠಾಣೆ ಇದೆ.