ವಿಶ್ವೇಶ್ವರ ಹೆಗಡೆ ಕಾಗೇರಿ ಕರ್ನಾಟಕದ ಭಾರತೀಯ ಜನತಾ ಪಕ್ಷದ ಮುಖಂಡರಾಗಿದ್ದಾರೆ. ಅವರು ಸತತ ಆರನೇ ಬಾರಿಗೆ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕರ್ನಾಟಕದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ಅವಧಿಯಲ್ಲಿ (೨೦೦೮-೨೦೧೩) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. == ಆರಂಭಿಕ ಜೀವನ == ಕಾಗೇರಿಯವರು ೧೦ ಜುಲೈ ೧೯೬೧ ರಂದು ಕರ್ನಾಟಕದ ಸಿರ್ಸಿಯಲ್ಲಿ ಜನಿಸಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಕಾಂ ಮುಗಿಸಿದ ಅವರು, ಕಾಲೇಜು ದಿನಗಳಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳಾಗಿದ್ದರು ಮತ್ತು ವಿದ್ಯಾರ್ಥಿ ಸಂಘದ ಪ್ರಭಾವಿ ನಾಯಕರಾಗಿದ್ದರು. == ರಾಜಕೀಯ ಜೀವನ == ಅವರು ಮೊದಲ ಮೂರು ಅವಧಿಗೆ ಅಂಕೋಲಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು: ೧೯೯೪-೯೯, ೧೯೯೯-೨೦೦೪ ಮತ್ತು ೨೦೦೪-೦೮. ಡಿಲಿಮಿಟೇಶನ್ ಪ್ರಕ್ರಿಯೆಯ ನಂತರ, ಅವರು ಹೊಸದಾಗಿ ರಚಿಸಲಾದ ಸಿರ್ಸಿ ಕ್ಷೇತ್ರಕ್ಕೆ ಸ್ಥಳಾಂತರಗೊಂಡರು ಮತ್ತು ೨೦೦೮, ೨೦೧೩ ಮತ್ತು ೨೦೧೮ ರ ಚುನಾವಣೆಗಳಲ್ಲಿ ಶಾಸಕರಾಗಿ ಆಯ್ಕೆಗೊಂಡರು. ಅವರು ತಮ್ಮ ರಾಜಕೀಯ ಜೀವನದಲ್ಲಿ ೬ ಅವಧಿಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ == ಹುದ್ದೆಗಳು == ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು (೨೦೦೮-೨೦೧೩) ವಿಧಾನ ಸಭೆ ಸ್ಪೀಕರ್ (೨೦೧೯ - ) == ಉಲ್ಲೇಖ ==