ಕರ್ನಾಟಕ ಸಂಗೀತದ ಪ್ರಸಿದ್ಧ ವಿದ್ವಾಂಸರಾಗಿದ್ದ ಗಾನಕಲಾಭೂಷಣ ವೀಣೆ ರಾಜಾರಾಯರ ಜನ್ಮಶತಮಾನೋತ್ಸವದ ಸಂದರ್ಭದಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯನ್ನು ಪ್ರತಿವರ್ಷ ಸಂಗೀತ ಕ್ಷೇತ್ರದ ಒಬ್ಬ ಸಾಧಕರಿಗೆ ನೀಡಿ ಗೌರವಿಸಲಾಗುತ್ತದೆ. ಪ್ರಶಸ್ತಿಯು ರೂ.೨೫ ಸಾವಿರ ನಗದು ಮತ್ತು ರಜತ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. == ಡಾ. ರಾ. ಸತ್ಯನಾರಾಯಣ == '2014 ರ ‘ವೀಣೆ ರಾಜಾರಾವ್ ರಾಷ್ಟ್ರೀಯ ಪ್ರಶಸ್ತಿ’ ಭಾರತೀಯ ಸಂಗೀತ ಶಾಸ್ತ್ರಕ್ಕೆ ಅಪಾರ ಕೊಡುಗೆ ನೀಡಿರುವ ಮಹಾಮಹೋಪಾಧ್ಯಾಯ ಡಾ. ರಾ. ಸತ್ಯನಾರಾಯಣ ಅವರು ಪ್ರತಿಷ್ಠಿತ ‘ವೀಣೆ ರಾಜಾರಾವ್ ರಾಷ್ಟ್ರೀಯ ಪ್ರಶಸ್ತಿ’ ಪಡೆದಿದ್ದಾರೆ. ಸಂಗೀತಶಾಸ್ತ್ರದಲ್ಲಿ ಅಸಾಧಾರಣ ಪಾಂಡಿತ್ಯ ಪಡೆದಿರುವ ಸತ್ಯನಾರಾಯಣ ಅವರು ಬಹುಮುಖ್ಯ ಶಾಸ್ತ್ರ ಗ್ರಂಥಗಳನ್ನು ಕನ್ನಡಕ್ಕೆ ತಂದಿದ್ದಾರೆ. ಪರಂಪರೆ ಮತ್ತು ಪ್ರಯೋಗಶೀಲತೆ ಎರಡೂ ಸೇರಿದ ಅವರ ಸಾಧನೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ಪಡೆದಿದೆ. == ಇವನ್ನೂ ನೋಡಿ == ಕರ್ನಾಟಕ ಲಲಿತ­ಕಲಾ ಅಕಾಡೆಮಿಯ ಪ್ರಶಸ್ತಿಗಳು ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ- ನೃಪತುಂಗ ಸಾಹಿತ್ಯ ಪ್ರಶಸ್ತಿ == ಆಧಾರ == ಪ್ರಜಾವಾಣಿ - 26/11/2014.