ಶಿವಣಗಿ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನಲ್ಲಿದೆ.ಆದಿದೇವತಾ ಶ್ರೀ ಹಾಲಮರಡಿಸಿದ್ದೇಶ್ವರ ದೇವಾಲಯ ಶಿವಣಗಿ ಗ್ರಾಮವು ಬಸವಾದಿ ಶರಣರಲ್ಲಿ ಒಬ್ಬರಾದ ನೂಲಿಯ ಚಂದಯ್ಯ ನವರ ಜನ್ಮಸ್ಥಳವಾಗಿದೆ. == ಭೌಗೋಳಿಕ ವಿವರ == ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦" ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - ೩೫°-೪೨° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - ೧೮°-೨೮° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ. == ಜನಸಂಖ್ಯೆ == ಗ್ರಾಮದಲ್ಲಿ ಜನಸಂಖ್ಯೆ(2011) ಸುಮಾರು 6553 ಇದೆ. ಅದರಲ್ಲಿ 3349 ಪುರುಷರು ಮತ್ತು 3204 ಮಹಿಳೆಯರು ಇದ್ದಾರೆ. == ಆಹಾರ == ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. ಆಗಿನ ಕಾಲದಲ್ಲಿ ಮತ್ತು ಈಗಲು ಸಹ ವಿಜಯಪುರ,ಸಿಂದಗ,ಬಾಗೇವಾಡಿ,ಇಂಡಿ ಮಾರುಕಟ್ಟೆ‌ಯಲ್ಲಿ ಹೇಚ್ಚು ಬೆಡಿಕೆ ಶಿವಣಗಿ ಮಾವಿನಹಣ್ಣಿಗೆ ಇದೇ == ಧರ್ಮಗಳು == ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆಗಳು == ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ. == ದೇವಾಲಯಗಳು == ಶ್ರೀ ಜಗದ್ಗುರು ರೇವಣಸಿದ್ದೇಶ್ವರ ದೇವಾಲಯ'ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಾಲಯ',ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಹುಡೇದಲಕ್ಷ್ಮಿ ದೇವಾಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಹಾಲಮರಡಿಸಿದ್ದೇಶ್ವರ ದೇವಾಲಯ ,ಶ್ರೀ ಅಮೊಘಸಿದ್ದೆಶ್ವರ ದೇವಾಲಯ ,ಭೊಗಲಿಂಗೆಶ್ವರ ದೇವಾಲಯ ,ಶ್ರೀ ಪಾಂಡುರಂಗ ದೇವಾಲಯ , ಹಾಗೂ ಶ್ರೀ ಹಣಮಂತ ದೇವಾಲಯ ಅಂಬಿಗರ ಚೌಡಯ್ಯ ದೇವಾಲಯಗಳನ್ನು ಮರಗಮ್ಮ ದೇವಾಲಯ ಕುಚನೂರು ಮಹಾರಾಜರ ದೇವಾಲಯ ನಿರ್ಮಿಸಿದ್ದಾರೆ. ಗ್ರಾಮದ ಉತ್ತರ ದಿಕ್ಕಿನಲ್ಲಿ ರಾಮತಿರ್ಥ ದೇವಾಲಯವಿದೆ == ಮಸೀದಿಗಳು == ಮುಸ್ಲಿಂ ಸಮುದಾಯದ ದಾವಲ ಮಲ್ಲೀಕ ದರ್ಗಾ ಜಾನೆಬಾಷಾ ದರ್ಗಾ ,ಯಮನೂರ ದರ್ಗಾ ಹಾಗೂ ಮಸೀದಗಳು ಇವೆ. == ನೀರಾವರಿ == ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇರುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ ಹಾಗೂ ನಿರೂದ್ಯೋಗವು ಕಂಡುಬರುತ್ತದೆ. == ಬೆಳೆಗಳು == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ), ರೇಷ್ಮೆ ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಹಬ್ಬಗಳು == ಪ್ರತಿವರ್ಷ ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಸಾಕ್ಷರತೆ == ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತ್ತು ನಾಗಠಾಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.