== ಸಂಧಿ ಎಂದರೇನು? == ಎರಡು ಅಕ್ಷರಗಳ ನಡುವೆ (ಸ್ವರ ಇಲ್ಲವೆ ವ್ಯಂಜನ) ಕಾಲ ವಿಳಂಬವಿಲ್ಲದಂತೆ ಮತ್ತು ಅರ್ಥಕ್ಕೆ ವ್ಯತ್ಯಾಸ ಬರದಂತೆ ಸೇರಿಸಿ ಉಚ್ಛರಿಸುವುದು ಸಂಧಿ ಎನಿಸುವುದು.ಉದಾ : ಹೊಸಗನ್ನಡ=ಹೊಸ+ಕನ್ನಡ, ಹೊಸ-ಪೂರ್ವಪದ, ಕನ್ನಡ-ಉತ್ತರಪದ ಪೂರ್ವಪದ+ಉತ್ತರಪದ=ಸಂಧಿಪದ. ಇಲ್ಲಿ ಪೂರ್ವಪದ ಮತ್ತು ಉತ್ತರಪದಗಳು ಮೂಲಪದಗಳು. ಪೂರ್ವಪದದ ಕೊನೆಯ ಅಕ್ಷರ ‘ಅ’ಮತ್ತು ಉತ್ತರಪದದ ಮೊದಲನೆಯ ಅಕ್ಷರ ‘ಕ್’ಸಂಧಿಸಿದಾಗ ಸಂಧಿಕಾರ್ಯ ಆಗುವುದು. ಉದಾ : ಹೊಸ(ಅ)+(ಕ್)ಕನ್ನಡ = ಹ್+ಒ+ಸ್+ಅ+ಕ್+ಅ+ನ್+ನ್+ಅ+ಡ್+ಅ. ಸಂಧಿ = ಕೂಡುವುದು. ಎಂದರೆ, ಎರಡು ವರ್ಣಗಳು ಕೂಡಿ ಸಂಧಿಯಾಗುತ್ತದೆ. ಉದಾ: ಮರ=ಮ್+ಅ+ರ್+ಅ. ಎರಡು ವರ್ಣಗಳು = ಮ್+ಅ ಮತ್ತು ರ್+ಅ. == ವಿದ್ವಾಂಸರ ಅಭಿಪ್ರಾಯ == ಸಂಧಿ ಎಂದರೆ, “ಎರಡು ಅಥವಾ ಹಲವಾರು ಅಕ್ಷರಗಳು ಒಂದಕ್ಕೊಂದು ಸೇರುವುದಕ್ಕೆ ವರ್ಣಾಕ್ಷರ ಸಂಧಿ ಎಂದು ಹೆಸರು”- ಕೇಶಿರಾಜ. ಬೇರೆ ಬೇರೆಯಾಗಿದ್ದ ಅಕ್ಷರಗಳನ್ನು ಕೂಡಿಸಿ ಉಚ್ಛರಿಸುವುದಕ್ಕೆ ಸಂಧಿ ಎಂದು ಹೆಸರು - ಕ್ಯೆಪಿಡಿಕಾರ. == ಸಂಧಿಗಳಲ್ಲಿ ವಿಧ == ಸಂಧಿಗಳಲ್ಲಿ ಎರಡು ವಿಧ. === ಕನ್ನಡ ಸಂಧಿ === === ಸಂಸ್ಕೃತ ಸಂಧಿ === == ಉಲ್ಲೇಖ ==