ಸರಕಾರಿ ತಾಂತ್ರಿಕ ಮಹಾವಿದ್ಯಾಲಯವು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ೨೦೧೨ರಲ್ಲಿ ಸ್ಥಾಪಿತವಾಗಿದ್ದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ದಿಂದ ಮಾನ್ಯತೆ ಹೊಂದಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ನವದೆಹಲಿ)ಯು ಮಾನ್ಯತೆ ನೀಡಿದೆ .ಅದರಂತೆ ರಾಷ್ಟ್ರೀಯ ಮಾನ್ಯತಾ ಮಂಡಳಿಯು ಕೊಡ ಮಾನ್ಯತೆ ನೀಡಿದೆ. == ವಿಭಾಗಗಳು == ಪದವಿ ವಿಭಾಗಗಳು ವಾಹನ ಎಂಜಿನಿಯರಿಂಗ್ ಸಿವಿಲ್ ಎಂಜಿನಿಯರಿಂಗ್ ಗಣಕಯಂತ್ರ ವಿಜ್ಞಾನ ಎಂಜಿನಿಯರಿಂಗ್ ವಿದ್ಯುತ್ ಮತ್ತು ವಿದುನ್ಮಾನ ಎಂಜಿನಿಯರಿಂಗ್ ವಿದ್ಯುನ್ಮಾನ ಮತ್ತು ಸಂವಹನ ಎಂಜಿನಿಯರಿಂಗ್ ಯಾಂತ್ರಿಕ ಎಂಜಿನಿಯರಿಂಗ್ == ಆವರಣ == ಮಹಾವಿದ್ಯಾಲಯವು ವಿಶಾಲವಾದ ಆವರಣ ಹೊಂದಿದೆ. ಆವರಣದಲ್ಲಿ ಕ್ರಿಕೇಟ್, ಟೆನ್ನಿಸ್, ಕಾಲ್ಚಂಡು, ಒಳಾಂಗಣ ಮೈದಾನ ಇದೆ. == ಗ್ರಂಥಾಲಯ == ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವು ಅತ್ಯುನ್ನತ ಡಿಜಿಟಲ್ ಗ್ರಂಥಾಲಯ ಮತ್ತು ಸಾವಿರಾರು ಎಲ್ಲ ವಿಭಾಗದ ಪುಸ್ತಕಗಳನ್ನು ಹೊಂದಿದೆ. ವೈಜ್ಞಾನಿಕ ಹಾಗೂ ತಾಂತ್ರಿಕ ದೈನಿಕ, ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳು ಉಂಟು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ನಿಯತಕಾಲಿಕಗಳು ಸಿಗುತ್ತವೆ. == ಪ್ರವೇಶ == ದ್ವಿತೀಯ ಪಿಯುಸಿ (೧೦+೨) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಅದರಂತೆ ಬಿ.ಎಸ್ಸಿ , ಡಿಪ್ಲೊಮಾ, ಜಿಟಿಟಿಸಿ, ಸಿಬಿಎಸ್ಸಿ (೧೦+೨) ಮತ್ತು ಐಸಿಎಸ್ಸಿ (೧೦+೨) ವಿದ್ಯಾರ್ಥಿಗಳಿಗೂ ಪ್ರವೇಶವಿದೆ. == ವಿದ್ಯಾರ್ಥಿವೇತನ == ಅರ್ಹತೆ ವಿದ್ಯಾರ್ಥಿವೇತನ ರಕ್ಷಣಾ ವಿದ್ಯಾರ್ಥಿವೇತನ ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿವೇತನ ರಾಷ್ಟ್ರೀಯ ಸಾಲ ವಿದ್ಯಾರ್ಥಿವೇತನ ಮಾಜಿ ರಕ್ಷಣಾ ವಿದ್ಯಾರ್ಥಿವೇತನ ಅಂಗವಿಕಲರ ವಿದ್ಯಾರ್ಥಿವೇತನ == ವಿದ್ಯಾರ್ಥಿನಿಲಯಗಳು == ವಿದ್ಯಾರ್ಥಿನಿಲಯ ವಿದ್ಯಾರ್ಥಿನಿಯರ ಹಾಸ್ಟೆಲ್ == ಜೀವನ ಮಾರ್ಗದರ್ಶನ ಕೇಂದ್ರ == ಟಿ ಸಿ ಎಸ್ (ಟಾಟಾ ಕನ್ಸಲ್ಟನ್ಸಿ ಸರ್ವಿಸಸ್), ಮೈಂಡ್ ಟ್ರೀ, ಐ ಗೇಟ್, ಎಂಪಾಸಿಸ್ ಹಾಗೂ ಐಬಿಎಮ್ ಮುಂತಾದ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಕಂಪನಿಗಳು ಕ್ಯಾಂಪಸ್ ಸಂದರ್ಶನ ನಡುಸುತ್ತವೆ.