ಸೋಮನಾಳ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿದೆ. == ಭೌಗೋಳಿಕ == ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦" ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - ೩೫°-೪೨° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - ೧೮°-೨೮° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ. == ಜನಸಂಖ್ಯೆ == ಗ್ರಾಮದಲ್ಲಿ ಜನಸಂಖ್ಯೆ ಸುಮಾರು 4000 ಇದೆ. ಅದರಲ್ಲಿ 2700 ಪುರುಷರು ಮತ್ತು 1300 ಮಹಿಳೆಯರು ಇದ್ದಾರೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ಧರ್ಮ == ಗ್ರಾಮದಲ್ಲಿ ಹಿಂದೂ(೯೭ ಪ್ರತಿಷತ್ ) ಮತ್ತು ಮುಸ್ಲಿಂ(೩ ಪ್ರತಿಷತ್ ) ಧರ್ಮದ ಜನರಿದ್ದಾರೆ. == ಭಾಷೆ == ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ. == ದೇವಾಲಯ == ಶ್ರೀ ಬಸವಲಿಂಗೇಶ್ವರ ದೇವಾಲಯ ಶ್ರೀ ಮಹಾಲಕ್ಷ್ಮಿ ದೇವಾಲಯ ಶ್ರೀ ದುರ್ಗಾದೇವಿ ದೇವಾಲಯ ಶ್ರೀ ಮಲ್ಲಿಕಾರ್ಜುನ ದೇವಾಲಯ ಶ್ರೀ ಹಣಮಂತ ದೇವಾಲಯ ಶ್ರೀ ದ್ಯಾಮವ್ವ ತಾಯಿ ದೇವಾಲಯ ಶ್ರೀ ಪರಮಾನಂದ ದೇವಾಲಯ ಶ್ರೀ ಸಿದ್ದರಾಯನ ದೇವಾಲಯ == ಮಸೀದಿ == ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಇದೆ. == ನೀರಾವರಿ == ಗ್ರಾಮದ ಪ್ರತಿಶತ 95ಒಣ ಬೇಸಾಯವಿದೇ , ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಕೃಷಿ ಮತ್ತು ತೋಟಗಾರಿಕೆ == ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ. == ಆರ್ಥಿಕತೆ == ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ. == ಬೆಳೆ == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಸಸ್ಯ == ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ. == ಪ್ರಾಣಿ == ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ. == ಹಬ್ಬ == ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. ಪ್ರತಿ ವರ್ಷ ನಡೆಯುವ ಶ್ರೀ ಬಸವಲಿಂಗಪ್ಪನವರ ಜಾತ್ರೆಯು ಬಹು ಸಡಗರ ದಿಂದ ಆಚರಿಸಲ್ಪಡುತ್ತದೆ, ಈ ಜಾತ್ರೆ ಸುಮಾರು ೫ ದಿನಗಳು ಕಾಲ ನಡೆಯುತ್ತದೆ. ಈ ಜಾತ್ರೆಯ ಸಡಗರ ವೀಕ್ಷಿಸಲು ಸುತ್ತ-ಮುತ್ತದ ಊರುಗಳಿಂದ ಜನರು ತಂಡೋಪ ತಂಡವಾಗಿ ಬರುವರು ಪ್ರತೀ ೫ ವರ್ಷ ಗಳಿಗೊಮ್ಮೆ ಜಾತ್ರೆಯ ನಿಮಿತ್ಯ ನಾಟಕ ಆಯೋಜನೆ ಮಾಡಲಾಗಿರುತ್ತದೆ, ಹಾಗೂ ಪ್ರತೀ ವರ್ಷಕೊಮ್ಮೆ ಜಾತ್ರೆಯ ನಿಮಿತ್ಯ ವಿವಿಧ ಆಟಗಲಳ ಸ್ಪರ್ದೆ ಏರ್ಪಡಿಸಲಗುತದೆ , ಸುತ್ತ-ಮುತ್ತಲಿನ ಹಳ್ಳಿಯ ಜನರು ಈ ಸ್ಪರ್ದೆಗಳಲ್ಲಿ ಭಾಗ ವಹಿಸುವರು == ಶಿಕ್ಷಣ == ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಹಾಗು ಹೆಚ್ಚಿನ ವ್ಯಾಸಂಗಕ್ಕಾಗಿ ಶ್ರೀ ಬಸವಲಿಂಗಪ್ಪನವರ ಪ್ರೌಡ್ ಶಾಲೆಯೂ ಇದೆ, ಸುತ್ತ ಮುತ್ತಲಿನ್ ೪-೬ ಊರುಗಳ ವಿದ್ಯಾರ್ಥಿಗಳು ಓದಲು ಇದೆ ಪ್ರೌಡ ಶಾಲೆಯನ್ನ ಅವಲಂಬಿಸಿದ್ದಾರೆ == ಸಾಕ್ಷರತೆ == ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ಗ್ರಾಮವು ಬಿಜಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. == ಗ್ರಾಮ ಪಂಚಾಯತಿ == ಗ್ರಾಮದಲ್ಲಿ ಗ್ರಾಮ ಪಂಚಾಯತಿ ಕಾರ್ಯಾಲಯವಿದೆ. == ಅಂಚೆ ಕಚೇರಿ == ಗ್ರಾಮದಲ್ಲಿ ಅಂಚೆ ಕಚೇರಿಯಿದೆ. == ಉತ್ಪಾದಕ ಸಹಕಾರಿ ಸಂಘ == ಗ್ರಾಮದಲ್ಲಿ ಉತ್ಪಾದಕ ಸಹಕಾರಿ ಸಂಘವಿದೆ. == ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ == ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವಿದೆ. ಬಿಜಾಪುರ ಕರ್ನಾಟಕ