ಹುಣಶ್ಯಾಳ(ಎಸ್.ಡಿ.ಜಿ) ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿದೆ. == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಒಣಬೇಸಾಯವನ್ನು ಹೆಚ್ಚಾಗಿ ಅವಲಂಭಿಸಿರುವ ಗ್ರಾಮದಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಜಲಮೂಲಗಳಿಗಾಗಿ ಪರಿತಪಿಸುವುದು ಸರ್ವೇ ಸಾಮಾನ್ಯ ಸಂಗತಿಯಾಗಿದೆ. ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಹಬ್ಬಗಳು == ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಇತ್ತೀಚೆಗೆ ಸದರಿ ಶಾಲೆಯನ್ನು ಮೇಲ್ದರ್ಜೆಗೇರಿಸಲಾಗಿದ್ದು, ಪ್ರೌಢಶಾಲಾ ಹಂತದವರೆಗೂ ವಿಸ್ತರಿಸಲಾಗಿದೆ. ಗ್ರಾಮದ ಹೊರವಲಯದ ತಿಳಗೂಳಕ್ಕೆ ಹೋಗುವ ಮಾರ್ಗದಲ್ಲಿ ಸರಕಾರಿ ಉರ್ದು ಶಾಲೆಯನ್ನು ಸರಕಾರ 'ಸರ್ವ ಶಿಕ್ಷಣ ಅಭಿಯಾನ ಕಾರ್ಯಕ್ರಮ'ದಡಿಯಲ್ಲಿ ಆರಂಭಿಸಲಾಗಿದೆ.