ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ದೇವರ ಹಿಪ್ಪರಗಿ ಮತಕ್ಷೇತ್ರ(2018)ದಲ್ಲಿ 1,07,407 ಪುರುಷರು, 99,773 ಮಹಿಳೆಯರು ಸೇರಿ ಒಟ್ಟು 2,07,180 ಮತದಾರರಿದ್ದಾರೆ. == ಕ್ಷೇತ್ರದ ಇತಿಹಾಸ == ಪುಣ್ಯಕ್ಷೇತ್ರವಾಗಿ ಪ್ರಸಿದ್ಧಿ ಪಡೆದ ದೇವರ ಹಿಪ್ಪರಗಿ ಗ್ರಾಮ ವಿಜಯಪುರ - ಗುಲ್ಬರ್ಗಾ ಹೆದ್ದಾರಿಯಲ್ಲಿದೆ. ಮೂರು ತಾಲೂಕುಗಳನ್ನೊಳಗೊಂಡಿರೋ ಈ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಈ ಕ್ಷೇತ್ರದ ಹೆಸರು ದೇವರ ಹಿಪ್ಪರಗಿ ಎಂದು ಬದಲಾಯಿತು. ಮುಂಚೆ ಹೂವಿನಹಿಪ್ಪರಗಿ ಕ್ಷೇತ್ರವಾಗಿತ್ತು. ಬಸವನ ಬಾಗೇವಾಡಿ ತಾಲ್ಲೂಕಿನ ನಿಡಗುಂದಿ ಹೋಬಳಿ ಕೈಬಿಟ್ಟು, ಸಿಂದಗಿ ತಾಲ್ಲೂಕಿನ ದೇವರ ಹಿಪ್ಪರಗಿ ಹೋಬಳಿಯನ್ನು ಈ ಕ್ಷೇತ್ರದಲ್ಲಿ ಸೇರಿಸಲಾಯಿತು. ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪಾಟೀಲ(ನಡಹಳ್ಳಿ) ಸತತ 2013 ಮತ್ತು 2008ರಲ್ಲಿ ಎರಡು ಬಾರಿ ಗೆದ್ದಿದ್ದಾರೆ. ಬಿ.ಎಸ್.ಪಾಟೀಲ(ಸಾಸನೂರ)ರು ಒಟ್ಟು 6 ಸಲ ಸ್ಪರ್ಧಿಸಿ 4 ಬಾರಿ ಆಯ್ಕೆಯಾಗಿ ವೀರಪ್ಪ ಮೊಯಿಲಿ ಅವರ ಸಂಪುಟದಲ್ಲಿ ಆರೋಗ್ಯ ಖಾತೆ ಹಾಗೂ ಎಸ್.ಎಂ. ಕೃಷ್ಣ ಸಂಪುಟದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾಗಿದ್ದರು. ಶಿವಪುತ್ರಪ್ಪ ದೇಸಾಯಿ ಅವರು ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭೂಸೇನಾ ಮತ್ತು ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು. ಶಿವಪುತ್ರಪ್ಪ ದೇಸಾಯಿ 5 ಬಾರಿ ಸ್ಪರ್ಧಿಸಿ 3 ಬಿ.ಎಸ್.ಪಾಟೀಲ(ಸಾಸನೂರ)ನ್ನು ಸೋಲಿಸಿ ಆಯ್ಕೆಯಾಗಿದ್ದು ಹಾಗೂ ಇಬ್ಬರು ಸಂಬಂಧಿಕರಾಗಿದ್ದು ವಿಶೇಷವಾಗಿದೆ. ಶಿವಪುತ್ರಪ್ಪ ದೇಸಾಯಿಯವರು ಉಗ್ರಾಣ ನಿಗಮದ ಮಾಜಿ ಅಧ್ಯಕ್ಷರು. 1978ರಿಂದ 2004ವರೆಗೆ ಶಿವಪುತ್ರಪ್ಪ ದೇಸಾಯಿ ಹಾಗೂ ಬಿ.ಎಸ್.ಪಾಟೀಲ(ಸಾಸನೂರ) ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಬಿ.ಎಸ್.ಪಾಟೀಲ(ಸಾಸನೂರ) 1978ರಲ್ಲಿ ಜನತಾ ಪಕ್ಷದಿಂದ ಹಾಗೂ 1983ರಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. ನಂತರ 1986ರಲ್ಲಿ ಚುನಾವಣೆ ಎದುರಾಯಿತು. ಇದು ಮಾವ-ಅಳಿಯನ ಆಖಾಡಕ್ಕೆ ಸಾಕ್ಷಿಯಾಗಿತ್ತು. ಜನತಾ ಪಕ್ಷದಿಂದ ಸ್ಪರ್ಧಿಸಿದ ಅಳಿಯ ಶಿವಪುತ್ರಪ್ಪ ದೇಸಾಯಿ, ಮಾವ ಸಾಸನೂರ ಅವರ ಹ್ಯಾಟ್ರಿಕ್ ಸಾಧನೆಗೆ ಬ್ರೇಕ್ ನೀಡಿದ್ದರು. ಮತ್ತೆ 1989ರಲ್ಲಿ ಮಾವ ಬಿಎಸ್ ಪಾಟೀಲ ಸಾಸನೂರ ಅಳಿಯ ಶಿವಪುತ್ರಪ್ಪ ದೇಸಾಯಿ ಅವರನ್ನು 15395 ಮತಗಳಿಂದ ಪರಾಭವಗೊಳಿಸಿದ್ದರು. ನಂತರ 1994ರಲ್ಲಿ ಅದೇ ಪಕ್ಷದಿಂದ ಶಿವಪುತ್ರಪ್ಪ ದೇಸಾಯಿ ತಮ್ಮ ಮಾವನನ್ನು 12427 ಮತಗಳಿಂದ ಸೋಲಿಸಿದರು. 1999ರಲ್ಲಿ ಎದುರಾದ ಚುನಾವಣೆಯಲ್ಲಿ ಪುನಃ ಬಿಎಸ್ ಪಾಟೀಲ ಸಾಸನೂರ ಅಳಿಯನನ್ನು ಪರಾಭಗೊಳಿಸಿದರೆ, 2004ರಲ್ಲಿ ನಡೆದ ಚುನಾವಣೆಯಲ್ಲಿ ಮುಯ್ಯಿಗೆ ಮುಯ್ಯಿ ಎಂಬಂತೆ ಶಿವಪುತ್ರಪ್ಪ ದೇಸಾಯಿ ಅವರು ಮತ್ತೆ ಮಾವನನ್ನು ಸೋಲಿಸಿದ್ದರು. == ಕ್ಷೇತ್ರದ ವಿಶೇಷತೆ == ಬಸವನ ಬಾಗೇವಡಿ, ಸಿಂದಗಿ ಮತ್ತು ಮುದ್ದೇಬಿಹಾಳ ಮೂರು ತಾಲೂಕುಗಳನ್ನೊಳಗೊಂಡಿರೋ ವಿಧಾನಸಭಾ ಕ್ಷೇತ್ರವಾಗಿದೆ. ಬಿ.ಎಸ್.ಪಾಟೀಲ(ಸಾಸನೂರ)ರು ವೀರಪ್ಪ ಮೊಯಿಲಿ ಅವರ ಸಂಪುಟದಲ್ಲಿ ಆರೋಗ್ಯ ಖಾತೆ ಹಾಗೂ ಎಸ್.ಎಂ. ಕೃಷ್ಣ ಸಂಪುಟದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾಗಿದ್ದರು. ಶಿವಪುತ್ರಪ್ಪ ದೇಸಾಯಿ ಅವರು ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭೂಸೇನಾ ನಿಗಮ ಮತ್ತು ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು. ಶಿವಪುತ್ರಪ್ಪ ದೇಸಾಯಿ ಮತ್ತು ಬಿ.ಎಸ್.ಪಾಟೀಲ(ಸಾಸನೂರ)ರು ಮಾವ-ಅಳಿಯನ ಆಖಾಡಕ್ಕೆ ಸಾಕ್ಷಿಯಾಗಿತ್ತು. ಬಿ.ಎಸ್.ಪಾಟೀಲ(ಸಾಸನೂರ)ರು ಒಟ್ಟು 6 ಸಲ ಸ್ಪರ್ಧಿಸಿ 4 ಬಾರಿ ಆಯ್ಕೆಯಾಗಿದ್ದಾರೆ. ಶಿವಪುತ್ರಪ್ಪ ದೇಸಾಯಿಯವರು ಒಟ್ಟು 5 ಸಲ ಸ್ಪರ್ಧಿಸಿ 3 ಬಾರಿ ಆಯ್ಕೆಯಾಗಿದ್ದಾರೆ. ಒಟ್ಟಾರೆಯಾಗಿ 1978 - 2008ರವರೆಗೆ ಸುಮಾರು 3 ದಶಕಗಳ ಕಾಲ ಮಾವ-ಅಳಿಯನ ಆಖಾಡಕ್ಕೆ ಸಾಕ್ಷಿಯಾಗಿತ್ತು. ಎ.ಎಸ್.ಪಾಟೀಲ(ನಡಹಳ್ಳಿ) ಸತತ 2008 ಮತ್ತು 2013ರಲ್ಲಿ ಎರಡು ಬಾರಿ ಗೆದ್ದಿದ್ದಾರೆ. == ಜನಪ್ರತಿನಿಧಿಗಳ ವಿವರ ==