ಹೊನ್ನುಟಗಿ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನಲ್ಲಿದೆ. == ಭೌಗೋಳಿಕ == ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦" ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ. == ಹವಾಮಾನ == ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - ೩೫°-೪೨° ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - ೧೮°-೨೮° ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ. == ಸಾಂಸ್ಕೃತಿಕ == ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ,, ಸೇಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ. == ಕಲೆ ಮತ್ತು ಸಂಸ್ಕೃತಿ == ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ. == ಧರ್ಮಗಳು == ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ. == ಭಾಷೆಗಳು == ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ. == ದೇವಾಲಯಗಳು == ಶ್ರೀ ಮಡಿವಾಳೇಶ್ವರ ದೇವಸ್ಥಾನ, ಶ್ರೀ ಹೋನ್ನಮಲೇಶ್ವರ ದೇವಾಲಯ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ, ಶ್ರೀ ವೆಂಕಟೇಶ್ವರ ದೇವಾಲಯ, ಶ್ರೀ ವೀರಭದ್ರೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ಶ್ರೀ ಭೀರೇಶ್ವರ್ ದೇವಾಲಯ ಶ್ರೀ ರೇವಣಸಿದ್ದೇಶ್ವರ ದೇವಾಲಯ ಶ್ರೀ ಬಸವಲಿಂಗೇಶ್ವರ ದೇವಾಲಯ ಶ್ರೀಮಾತೆ ದ್ಯಾಮವ್ವಾಯಿ ದೇವಾಲಯ ನಿರ್ಮಿಸಿದ್ದಾರೆ. == ಮಸೀದಿಗಳು == ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ. == ನೀರಾವರಿ == ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ. == ಉದ್ಯೋಗ == ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ. == ಬೆಳೆಗಳು == ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ. == ಹಬ್ಬಗಳು == ಪ್ರತಿವರ್ಷ ಶ್ರೀ ಹೊನ್ನಮಲ್ಲೇಶ್ವರ ಜಾತ್ರೆ, ಶ್ರೀ ಭೀರೇಶ್ವರ್ ಜಾತ್ರೆಗಳು, ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. == ಶಿಕ್ಷಣ == ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೊನ್ನುಟಗಿ ಪಿ.ಎಮ್.ತಮ್ಮಣಗೋಳ ಕಿರಿಯ ಪ್ರಾಥಮಿಕ ಶಾಲೆ, ಹೊನ್ನುಟಗಿ ಉದಯ ಹಿರಿಯ ಪ್ರಾಥಮಿಕ ಶಾಲೆ, ಹೊನ್ನುಟಗಿ ಎಸ್.ಎಸ್.ವಿ.ವಿ.ಎಸ್. ಹಿರಿಯ ಪ್ರಾಥಮಿಕ ಶಾಲೆ, ಹೊನ್ನುಟಗಿ ಸರಕಾರಿ ಪ್ರೌಢ ಶಾಲೆ, ಹೊನ್ನುಟಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ, ಹೊನ್ನುಟಗಿ == ಸಾಕ್ಷರತೆ == ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ. == ರಾಜಕೀಯ == ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. == ಬ್ಯಾಂಕ್ == ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಹೊನ್ನುಟಗಿ == ಗ್ರಾಮ ಪಂಚಾಯತಿ == ಗ್ರಾಮ ಪಂಚಾಯತಿ, ಹೊನ್ನುಟಗಿ == ದೂರವಾಣಿ ವಿನಿಮಯ ಕೇಂದ್ರ == ದೂರವಾಣಿ ವಿನಿಮಯ ಕೇಂದ್ರ, ಹೊನ್ನುಟಗಿ == ಅಂಚೆ ಕಚೇರಿ == ಅಂಚೆ ಕಚೇರಿ, ಹೊನ್ನುಟಗಿ == ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ == ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹೊನ್ನುಟಗಿ == ಹಾಲು ಉತ್ಪಾದಕ ಸಹಕಾರಿ ಸಂಘ == ಹಾಲು ಉತ್ಪಾದಕ ಸಹಕಾರಿ ಸಂಘ, ಹೊನ್ನುಟಗಿ == ಪ್ರಾಥಮಿಕ ಆರೋಗ್ಯ ಕೇಂದ್ರ == ಪ್ರಾಥಮಿಕ ಆರೋಗ್ಯ ಕೇಂದ್ರ, ಹೊನ್ನುಟಗಿ == ಉಚಿತ ಪ್ರಸಾದನಿಲಯ == ಮೆಟ್ರಿಕ್ ಪುರ್ವ ಬಾಲಕರ ಉಚಿತ ಪ್ರಸಾದನಿಲಯ, ಹೊನ್ನುಟಗಿ ಮೆಟ್ರಿಕ್ ಪುರ್ವ ಬಾಲಕಿಯರ ಉಚಿತ ಪ್ರಸಾದನಿಲಯ, ಹೊನ್ನುಟಗಿ == ವಿದ್ಯುತ್ ಪರಿವರ್ತನಾ ಕೇಂದ್ರ == 33 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಹೊನ್ನುಟಗಿ