ಶಶಿಧರ್‌ ಭಟ್‌ಬೆಂಗಳೂರು : ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಎಂ, ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ."ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ. ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟ ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ. 