ಸಚಿವ ಡಾ.ಎಚ್.ಸಿ.ಮಹದೇವಪ್ಪಬೆಂಗಳೂರು: ‘ಪ್ರಬುದ್ಧ ಯೋಜನೆ’ಯಡಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದೇಶದಲ್ಲಿ ಪಿಎಚ್‍ಡಿ ಅಧ್ಯಯನ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳು ಉಂಟಾಗಿದ್ದು ಸರಕಾರವು ಹಿಂದಿನ ರೀತಿಯಲ್ಲೇ ಈ ಯೋಜನೆಯನ್ನು ಮುಂದುವರೆಸಲಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.ರವಿವಾರ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಪರಿಶಿಷ್ಟ ಸಮುದಾಯದ ಜನರು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದಾಗ ಮಾತ್ರ ಅವರು ಘನತೆಯುತ ಸ್ಥಾನಗಳಿಗೆ ಏರಲು ಸಾಧ್ಯ ಎಂಬ ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮ ಜವಾಬ್ದಾರಿಯೇ ಆಗಿದೆ’ ಎಂದು ತಿಳಿಸಿದ್ದಾರೆ.  ‘ಈ ಹಿನ್ನಲೆಯಲ್ಲಿ ಈ ಹಿಂದಿನಂತೆಯೇ ವಿಶ್ವದ ಅಗ್ರ 100 ವಿಶ್ವ ವಿದ್ಯಾಲಯಗಳಲ್ಲಿ ಪಿಎಚ್‍ಡಿ ವ್ಯಾಸಂಗಕ್ಕೆ ಆಯ್ಕೆಯಾಗುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರಬುದ್ಧ ಯೋಜನೆಯ ಅನುಕೂಲ ಸಿಗಲಿದೆ. ಈ ಯೋಜನೆಯನ್ನು ಮುಂದುವರೆಸುವ ಕುರಿತು ನಮ್ಮ ಇಲಾಖೆಯ ಅಧಿಕಾರಿಗಳಿಗೆ ನಾನು ಸೂಚನೆ ನೀಡಿದ್ದು, ಸಮುದಾಯದ ಬಂಧುಗಳು ಈ ವಿಷಯದಲ್ಲಿ ಗೊಂದಲಗಳಿಗೆ ಎಡೆ ಮಾಡಿಕೊಡಬಾರದೆಂದು ಮಹದೇವಪ್ಪ ಮನವಿ ಮಾಡಿದ್ದಾರೆ.ಪ್ರಬುದ್ಧ ಯೋಜನೆಯಡಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದೇಶದಲ್ಲಿ ಪಿಹೆಚ್ ಡಿ ಅಧ್ಯಯನ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳು ಉಂಟಾಗಿದ್ದು ಸರ್ಕಾರವು ಈ ಹಿಂದಿನ ರೀತಿಯಲ್ಲೇ ಈ ಯೋಜನೆಯನ್ನು ಮುಂದುವರೆಸಲಿದೆ.ಪರಿಶಿಷ್ಟ ಸಮುದಾಯದ ಜನರು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದಾಗ ಮಾತ್ರ ಅವರು ಘನತೆಯುತ ಸ್ಥಾನಗಳಿಗೆ ಏರಲು… pic.twitter.com/IQXFpkGw90  