ಬೆಂಗಳೂರು: ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಕುಟುಂಬಸ್ಥರಿಗೆ ಸರಕಾರದಿಂದ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ಮಂಗಳವಾರ ಪರಿಷತ್‍ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣ ಕಮಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾಮಾನ್ಯವಾಗಿ ಕೊಲೆ ಪ್ರಕರಣಗಳಿಗೆ ಸರಕಾರ ಪರಿಹಾರ ನೀಡುವುದಿಲ್ಲ. ಯುವತಿಯ ಕುಟುಂಬದ ಬಡತನವನ್ನು ನೋಡಿದಾಗ ಎಂತಹವರಿಗಾದರೂ ಕನಿಕರ, ಅನುಕಂಪ ಬರುತ್ತದೆ. ಹೀಗಾಗಿ ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿ ಪರಿಹಾರ ಕಲ್ಪಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದರು.  ಘಟನೆ ನಡೆದ ಬಳಿಕ ಅಂಜಲಿ ಅವರ ನಿವಾಸಕ್ಕೆ ಭೇಟಿ ನೀಡಿ, ಯುವತಿಯ ಅಜ್ಜಿಯೊಂದಿಗೆ ಮಾತನಾಡಿದ್ದೇನೆ. ಅವರ ಬಡತನ ಮತ್ತು ಜೀವನ ಶೈಲಿಯನ್ನು ಕಣ್ಣಾರೆ ನೋಡಿದಾಗ ಅನುಕಂಪವμÉ್ಟೀ ಅಲ್ಲದೇ ದುಖವು ಆಗುತ್ತದೆ. ಸರಕಾರವು ಗಂಭೀರವಾಗಿ ಪರಿಗಣಿಸಿ ಸಹಾಯ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದರು.  ಸ್ಲಂ ಬೋರ್ಡ್ ಅಥವಾ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ಯುವತಿಯ ಅಜ್ಜಿಗೆ ಭರವಸೆ ನೀಡಿದ್ದೆನು. ಈಗಾಗಲೇ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋμï ಲಾಡ್ ಅವರು ಆಶ್ರಯ ಯೋಜನೆಯಡಿ ಮನೆ ನೀಡಲು ಒಪ್ಪಿದ್ದಾರೆ. ತಕ್ಷಣ ಮನೆ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.  ಪ್ರಕರಣದ ತನಿಖೆಯು ಚಾರ್ಜ್‍ಶೀಟ್ ಪಟ್ಟಿ ಸಲ್ಲಿಸುವ ಹಂತದಲ್ಲಿದೆ. ಈಗಾಗಲೇ ತ್ವರಿತಗತಿಯಲ್ಲಿ ಆರೋಪಿಯನ್ನು ಬಂಧಿಸಿ, ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು ತ್ವರಿತಗತಿ ನ್ಯಾಯಾಲಯ ಸ್ಥಾಪಿಸುವ ಅಗತ್ಯವಿಲ್ಲ ಎಂದು ಪರಮೇಶ್ವರ್ ಹೇಳಿದರು.  