ಬೆಂಗಳೂರು : ಹಿಂದಿನ ಸರಕಾರದ ಅವಧಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ ನೀಡಲಾಗಿದೆ.ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಮಂಡ್ಯ ವಿ.ಸಿ.ಫಾರ್ಮ್, ಶಿವಮೊಗ್ಗ ಕೃಷಿ ವಿ.ವಿ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರ ಕಾಲೇಜು, ಧಾರವಾಡ ಕೃಷಿ ವಿ.ವಿ ವ್ಯಾಪ್ತಿಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕಾಲೇಜು ಮತ್ತು ರಾಯಚೂರು ಕೃಷಿ ವಿ.ವಿ ವ್ಯಾಪ್ತಿಯ ಬೀದರ್ ಕೃಷಿ ಡಿಪ್ಲೊಮಾ ಕಾಲೇಜುಗಳು ಪುನರಾರಂಭಕ್ಕೆ ರಾಜ್ಯ ಸರಕಾರದ ಅನುಮೋದನೆ ನೀಡಿದೆ.ಈ ಡಿಪ್ಲೊಮಾ ಕೋರ್ಸ್‍ಗಳನ್ನು ಹಿಂದಿನ ಸರಕಾರದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಆದರೆ ಕೃಷಿ ಡಿಪ್ಲೊಮಾ ಕೋರ್ಸ್‍ಗಳ ಪುನಾರಂಭಕ್ಕೆ ವಿದ್ಯಾರ್ಥಿಗಳು ಬೇಡಿಕೆ ಸಲ್ಲಿಸಿದ ಹಿನ್ನಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ  ಕಾಳಜಿ ವಹಿಸಿ ಈ ನಾಲ್ಕು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಾರಂಭಕ್ಕೆ  ಅವಕಾಶ ಒದಗಿಸಿಕೊಟ್ಟಿದ್ದಾರೆ.