ಬೆಂಗಳೂರು : ಕರ್ನಾಟಕ ವಿಧಾನಸಭೆಯ ಅಧಿವೇಶನವನ್ನು ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ಛತ್ತೀಸಘಡ ಮಾಜಿ ಮುಖ್ಯಮಂತ್ರಿಗಳಾದ ಭೂಪೇಶ್ ಭಗೇಲ್ ಹಾಗೂ ಕೇಂದ್ರ ಮಾಜಿ ಸಚಿವರಾದ ಪ್ರದೀಪ್ ಜೈನ್ ಅವರು ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ವೀಕ್ಷಿಸಿದರು.ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಭೂಪೇಶ್ ಭಗೇಲ್ ಅವರನ್ನು ಸ್ವಾಗತಿಸಿದರು. ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರನ್ನು ಇದೇ ಸಂದರ್ಭದಲ್ಲಿ ಸೌಜನ್ಯಪೂರ್ವಕವಾಗಿ ಭೇಟಿ ಮಾಡಿದರು. ಒಂದು ತಾಸಿಗೂ ಹೆಚ್ಚು ಕಾಲ ಮಾಜಿ ಸಿಎಂ ಮತ್ತು ಕೇಂದ್ರದ ಮಾಜಿ ಸಚಿವರು ಕಲಾಪ ವೀಕ್ಷಿಸಿ ತೆರಳಿದರು.