ಬೆಂಗಳೂರು: ಮುಡಾ ಹಗರಣದ ಸೃಷ್ಟಿಕರ್ತರೇ ಬಿಜೆಪಿಯವರು‌ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.  ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಜೆಪಿಯವರ ಆಡಳಿತಾವಧಿಯಲ್ಲೇ ಮುಡಾ ಹಗರಣ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೂ ಬಿಜೆಪಿಯವರು ತಮ್ಮ ಹಗರಣವನ್ನು ಒಪ್ಪಿಕೊಳ್ಳದೆ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಸರ್ಕಾರದ ಮೇಲೆ ತಪ್ಪು ಅಭಿಪ್ರಾಯ ಮೂಡಬಾರದು ಎನ್ನುವ ಕಾರಣಕ್ಕೆ ಮುಡಾ ನಿವೇಶನ ಹಂಚಿಕೆಯ ಅಕ್ರಮವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡುವ ಉದ್ದೇಶದಿಂದ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿದೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶ್ರೀ ಪಿ.ಎನ್.ದೇಸಾಯಿ ನೇತೃತ್ವದ ಆಯೋಗವು ಮುಡಾ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿ ತನಿಖೆ ನಡೆಸಲಿದೆ ಎಂದು ತಿಳಿಸಿದ್ದಾರೆ.ಮುಡಾ ಹಗರಣದ ಸೃಷ್ಟಿಕರ್ತರೇ BJPಯವರು‌.ಅವರ ಆಡಳಿತಾವಧಿಯಲ್ಲೇ ಮುಡಾ ಹಗರಣ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೂ BJPಯವರು ತಮ್ಮ ಹಗರಣವನ್ನು ಒಪ್ಪಿಕೊಳ್ಳದೆ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.ಹಾಗಾಗಿ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಸರ್ಕಾರದ ಮೇಲೆ ತಪ್ಪು ಅಭಿಪ್ರಾಯ ಮೂಡಬಾರದು ಎನ್ನುವ ಕಾರಣಕ್ಕೆ ಮುಡಾ… 