ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯೆ ಸಮಂಜಸವಾಗಿರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಾ.ಸಿಎನ್.ಮಂಜುನಾಥ್ ಹೇಳಿದ್ದಾರೆ.ಶುಕ್ರವಾರ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರಾಮನಗರಕ್ಕೆ ಭಾವನಾತ್ಮಕ, ಧಾರ್ಮಿಕ, ಐತಿಹಾಸಿಕ ಹಾಗೂ ಪೌರಾಣಿಕ ಇತಿಹಾಸವಿದೆ. ಕ್ಲೋಸ್‍ಪೇಟೆಗೆ ರಾಮನಗರವೆಂದು ಮರುನಾಮಕರಣ ಮಾಡಿದವರು ರಾಜ್ಯದ ಹೆಸರಾಂತ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ. ಈಗಾಗಲೇ ರಾಮನಗರವು ರೇಷ್ಮೆ ನಾಡೆಂದೇ ಪ್ರಸಿದ್ಧಿಯಾಗಿದೆ.   ಇದರ ಜೊತೆಗೆ ರಾಮನಗರದ ಹೆಸರು ಹೇಳುತ್ತಿದಂತೆ ಜಾನಪದ ಲೋಕ, ಚನ್ನಪಟ್ಟಣದ ಗೊಂಬೆಗಳು, ಅರ್ಕಾವತಿ, ಕಾವೇಲಿ, ಶಿಂಷಾ, ಕಣ್ವ ನದಿಗಳು, ಮಂಚನಬೆಲೆ, ಬೈರಮಂಗಲ, ಹಾರೋಬೆಲೆ, ಕಣ್ವ ಮತ್ತು ಇಗ್ಗಲೂರು ಜಲಾಶಯಗಳು; ರಾಮಣಲ, ಕೃಷ್ಣಣಲ, ರೇವಣ್ಣಸಿದ್ದೇಶ್ವರ ಬೆಟ್ಟ, ಯತಿರಾಜಲ, ಸೋಮಲಲ, ಸಿಡಿಲಕಲ್ಲು ಮತ್ತು ಜಲಸಿದ್ಧೇಶ್ವರ ಬೆಟ್ಟ, ಕಬ್ಬಾಳುದುರ್ಗ, ಸಾವನದುರ್ಗ, ಮೇಕೆದಾಟು ಮುಂತಾದವುಗಳು ನೆನಪಿಗೆ ಬರುತ್ತವೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗೆ ರಾಮನಗರ ಎಂಬ ಹೆಸರೇ ರಕ್ಷಾಕವಚದಂತಿದೆ.  ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರ ಪ್ರಸ್ತುತ ಬೆಂಗಳೂಲಿನ ಅಡಿಯಲ್ಲಿಯೇ ಇದೆ. ಈಗಾಗಲೇ ಬೆಂಗಳೂರು ದಕ್ಷಿಣ ತಾಲೂಕು ಅಸ್ತಿತ್ವದಲ್ಲಿದ್ದು ಬೆಂಗಳೂರು ನಗರ ಜಿಲ್ಲೆಗೆ ಸೇರುತ್ತದೆ. ಹೀಗಿರುವಾಗ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿದರೆ ಹೆಚ್ಚು ಗೊಂದಲ ಸೃಷ್ಟಿಯಾಗುತ್ತದೆ. ಅಲ್ಲದೆ ಮುಂಬರುವ ದಿನಗಳಲ್ಲಿ ಕೋಲಾರ ಜಿಲ್ಲೆಗೆ ಬೆಂಗಳೂರು ಪೂರ್ವ ಜಿಲ್ಲೆಯೆಂದು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆಯೆಂದು ಮರುನಾಮಕರಣ ಮಾಡುವ ಪ್ರಸ್ತಾವನೆಗಳು ಬಂದು ಇನ್ನಷ್ಟು ಗೊಂದಲ ಸೃಷ್ಟಿಯಾಗುವುದಲ್ಲದೆ ಸರಕಾರಕ್ಕೆ ಮುಜುಗರ ಉಂಟು ಮಾಡುವ ಸಂಭವವಿರುತ್ತದೆ ಎಂದು ಅವರು ಹೇಳಿದ್ದಾರೆ.  ಅಭಿವೃದ್ಧಿಯ ದೃಷ್ಟಿಯಿಂದಲೇ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡುವ ಬದಲು ರಾಮನಗರವನ್ನೆ ಬ್ರಾಂಡ್ ರಾಮನಗರವನ್ನಾಗಿ ಮಾಡಿ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಬಹುದಾಗಿದೆ. ರಾಮನಗರಕ್ಕೆ ತನ್ನದೆ ಇತಿಹಾಸವಿರುವುದಲಂದ ಜಿಲ್ಲೆಗೆ ಮರುನಾಮಕರಣ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.  