ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಈಡಿ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.ಬುಧವಾರ ಬೆಳಗ್ಗೆ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕರಾದ ನಾಗೇಂದ್ರ ನಿವಾಸದ ಮೇಲೆ ಈಟಿ ಅಧಿಕಾರಿಗಳು ದಾಳಿ ಮಾಡಿದ್ದರು. ನಾಗೇಂದ್ರ ಅವರ ಆಪ್ತ ಸಹಾಯ ಹರೀಶ್ ಎಂಬವರನ್ನು  ವಶಕ್ಕೆ ಪಡೆದುಕೊಂಡು ಈಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ವಿಚಾರಣೆ ನಡೆಸಿದ್ದರು. ಈ ವೇಳೆ ಹರೀಶ್ ನೀಡಿದ ಕೆಲ ಮಾಹಿತಿ ಆಧಾರದ ಮೇಲೆ ಶಾಸಕ ನಾಗೇಂದ್ರನ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.