 ಆಯೇಷಾ ಖಾನಂಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಮಾಧ್ಯಮ ಅಕಾಡಮಿಯ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ನೇಮಿಸಿ ಸರಕಾರ ಬುಧವಾರ ಆದೇಶ ಹೊರಡಿಸಿದೆ.ಚಿತ್ರದುರ್ಗದ ಎಂ.ಎನ್.ಅಹೋಬಳಪತಿ, ಪತ್ರಿಕಾ ಛಾಯಾಗ್ರಾಹಕ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಕೆ.ನಿಂಗಜ್ಜ ಅವರನ್ನು ಅಕಾಡಮಿಯ ಸದಸ್ಯರನ್ನಾಗಿ ನೇಮಿಸಿ, ವಾರ್ತಾ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಜಿಸಿಂತಾ ಆದೇಶದಲ್ಲಿ ತಿಳಿಸಿದ್ದಾರೆ.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿದ್ದರು.