ಮಂಗಳೂರು: ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸ್ಸೈಯದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್) ಜು.8ರಂದು ಬೆಳಗ್ಗೆ ನಿಧನರಾಗಿದ್ದು, ತಂಙಳ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸಂತಾಪ ಸೂಚಿಸಿದ್ದಾರೆ.ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ,"ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನದ ಸುದ್ದಿ ನೋವುಂಟುಮಾಡಿದೆ. ಸದಾಕಾಲ ಸಮಾಜದ ಹಿತವನ್ನು ಬಯಸುತ್ತಿದ್ದ, ಕೋಮುಸಾಮರಸ್ಯಕ್ಕಾಗಿ ದುಡಿದ ಹಿರಿಯ ಚೇತನದ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸೈಯ್ಯದ್ ಕೂರತ್ ತಂಙಳ್ ಅವರ ಕುಟುಂಬವರ್ಗ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು." ಎಂದು ಹೇಳಿದ್ದಾರೆ.ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.ಇಂದು ಅಪರಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ಧರಾಗುತ್ತಿದ್ದರು. ಈ ವೇಳೆ ಹೃದಯ ಸ್ತಂಭನ ಆಗಿ ನಿಧನರಾಗಿದ್ದಾರೆ.ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನದ ಸುದ್ದಿ ನೋವುಂಟುಮಾಡಿದೆ.ಸದಾಕಾಲ ಸಮಾಜದ ಹಿತವನ್ನು ಬಯಸುತ್ತಿದ್ದ, ಕೋಮುಸಾಮರಸ್ಯಕ್ಕಾಗಿ ದುಡಿದ ಹಿರಿಯ ಚೇತನದ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ.ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು… pic.twitter.com/bm2kDg4EQs 